ಮಧುಕರ್ ಶೆಟ್ಟಿ ಸಾವಿನ ಬಗ್ಗೆ ಸಂಶಯವಿದ್ದರೆ ತನಿಖೆಗೆ ಆದೇಶ: ಗೃಹ ಸಚಿವ ಎಂ.ಬಿ.ಪಾಟೀಲ್

ಬೆಂಗಳೂರು, ಡಿ.29: ದಕ್ಷ ಐಪಿಎಸ್ ಅಧಿಕಾರಿ ಮಧುಕರ್ ಶೆಟ್ಟಿ ಅವರ ಸಾವು ಕುರಿತ ವರದಿಯನ್ನು ಆಧರಿಸಿ ಸಂಶಯವಿದ್ದರೆ ತನಿಖೆಗೆ ಆದೇಶ ಮಾಡುವುದಾಗಿ ಗೃಹ ಸಚಿವ ಎಂ.ಬಿ.ಪಾಟೀಲ್ ತಿಳಿಸಿದರು.
ಶನಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಧುಕರ್ ಶೆಟ್ಟಿ ಸಾವಿನ ಬಗ್ಗೆ ತನಿಖೆ ನಡೆಸುವ ಬಗ್ಗೆ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದು. ಅವರಿಗೆ ಚಿಕಿತ್ಸೆ ನೀಡಿದ ಆಸ್ಪತ್ರೆಯಿಂದ ವರದಿ ಪಡೆಯುವುದಾಗಿ ಹೇಳಿದರು.
ಹೈದರಾಬಾದ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಐಪಿಎಸ್ ಅಧಿಕಾರಿ ಮಧುಕರ್ ಶೆಟ್ಟಿಯವರು ಎಚ್1ಎನ್1 ಖಾಯಿಲೆಯಿಂದ ಬಳಲುತ್ತಿದ್ದು, ಶ್ವಾಸಕೋಶದ ಸಮಸ್ಯೆಯಿಂದ ನಿನ್ನೆ ನಿಧನರಾಗಿದ್ದರು. ಅವರ ಸಾವು ಸಹಜವಾಗಿದೆಯೇ ಅಥವಾ ಅಸಹಜವೇ ಎಂಬ ಬಗ್ಗೆ ತನಿಖೆ ನಡೆಸುತ್ತೇವೆ ಎಂದು ತಿಳಿಸಿದರು.
Next Story





