Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸುಂಟಿಕೊಪ್ಪದಲ್ಲಿ ಶಾಲಾ ಪ್ರವಾಸದ ಬಸ್...

ಸುಂಟಿಕೊಪ್ಪದಲ್ಲಿ ಶಾಲಾ ಪ್ರವಾಸದ ಬಸ್ ಅಪಘಾತ: ವಿದ್ಯಾರ್ಥಿ ಮೃತ್ಯು

ನಾಲ್ವರಿಗೆ ಗಂಭೀರ ಗಾಯ

ವಾರ್ತಾಭಾರತಿವಾರ್ತಾಭಾರತಿ29 Dec 2018 6:10 PM IST
share
ಸುಂಟಿಕೊಪ್ಪದಲ್ಲಿ ಶಾಲಾ ಪ್ರವಾಸದ ಬಸ್ ಅಪಘಾತ: ವಿದ್ಯಾರ್ಥಿ ಮೃತ್ಯು

ಮಡಿಕೇರಿ, ಡಿ.29: ಶೈಕ್ಷಣಿಕ ಪ್ರವಾಸಕ್ಕೆಂದು ಬಂದಿದ್ದ ಖಾಸಗಿ ಬಸ್‍ವೊಂದು ಸುಂಟಿಕೊಪ್ಪ ಸಮೀಪ ರಸ್ತೆ ಬದಿಗೆ ಮಗುಚಿಕೊಂಡ ಪರಿಣಾಮ ಓರ್ವ ವಿದ್ಯಾರ್ಥಿ ಸಾವಿಗೀಡಾಗಿದ್ದಾನೆ. ಚಾಲಕ, ಅಡುಗೆ ಸಹಾಯಕ ಮತ್ತು ಇತರ ನಾಲ್ವರು ತೀವ್ರವಾಗಿ ಗಾಯಗೊಂಡಿರುವ ಘಟನೆ ಶನಿವಾರ ಬೆಳಗಿನ ಜಾವ ಶಾಂತಗಿರಿ ತೋಟದ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ.

ಮೃತ ವಿದ್ಯಾರ್ಥಿಯನ್ನು ಗೆಣಿಕೆಹಾಳ್ ಗ್ರಾಮದ ದ್ಯಾವಣ್ಣ ಎಂಬವರ ಪುತ್ರ ಎನ್.ಯು. ಬಸವರಾಜ್(16) ಎಂದು ಗುರುತಿಸಲಾಗಿದೆ.

ಘಟನೆಯ ವಿವರ: ಬಳ್ಳಾರಿ ಜಿಲ್ಲೆ ಕುರುಗೋಡು ತಾಲೂಕು ಗೆಣಿಕೆಹಾಳ್ ಸರಕಾರಿ ಪ್ರೌಢಶಾಲೆಯಿಂದ  27 ಬಾಲಕರು ಹಾಗೂ 21 ಬಾಲಕಿಯರು ಹಾಗೂ 6 ಮಂದಿ ಶಿಕ್ಷಕರು, ಒಬ್ಬ ಡಿ’ಗ್ರೂಪ್ ನೌಕರ, ಇಬ್ಬರು ಚಾಲಕರು ಮತ್ತು ಓರ್ವ ಕ್ಲೀನರ್ ಸೇರಿದಂತೆ 58 ಮಂದಿಯ ತಂಡ ಶೈಕ್ಷಣಿಕ ಪ್ರವಾಸಕ್ಕೆಂದು ಡಿ.25ರಂದು ಖಾಸಗಿ ಬಸ್‍ನಲ್ಲಿ ಹೊರಟಿತ್ತು.

ಶುಕ್ರವಾರ ರಾತ್ರಿ ಸುಮಾರು 11.30 ರ ಸಮಯದಲ್ಲಿ ಮೈಸೂರಿನ ಕೆ.ಆರ್.ಎಸ್. ವೀಕ್ಷಣೆ ಮುಗಿಸಿ ಮಡಿಕೇರಿಯತ್ತ ಬಸ್ ಹೊರಟಿದ್ದು, ಚಾಲಕ  ಹೊರತುಪಡಿಸಿ ಇನ್ನುಳಿದವರು ನಿದ್ದೆಗೆ ಜಾರಿದ್ದರು. ಇನ್ನೇನು ಸುಂಟಿಕೊಪ್ಪ ತಲುಪಬೇಕೆನ್ನುವಷ್ಟರಲ್ಲಿ ಸುಂಟಿಕೊಪ್ಪ ಸಮೀಪದ ಶಾಂತಗಿರಿ ತೋಟದ ಬಳಿ ಚಾಲಕನ ಹತೋಟಿ ತಪ್ಪಿದ ಬಸ್ ರಾಷ್ಟ್ರೀಯ ಹೆದ್ದಾರಿ ಬದಿಯ ಚರಂಡಿಗೆ ಮಗುಚಿಕೊಂಡಿದೆ.

ಈ ಸಂದರ್ಭ ತೀವ್ರ ಗಾಯಗೊಂಡು ಚಿಂತಾಜನಕ ಸ್ಥಿತಿಯಲ್ಲಿದ್ದ ಶಾಲೆಯ 10ನೇ ತರಗತಿ ವಿದ್ಯಾರ್ಥಿ ಬಸವರಾಜ್ (16) ಎಂಬಾತನನ್ನು ಆಂಬ್ಯುಲೆನ್ಸ್‍ನಲ್ಲಿ ಮಡಿಕೇರಿ ಜಿಲ್ಲಾಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗ ಮಧ್ಯದಲ್ಲಿ ಕೊನೆಯುಸಿರೆಳೆದಿದ್ದಾನೆ. ಅದೇ ತರಗತಿಯ ಎಂ.ಮಂಜುನಾಥ, ಕೆ. ರಾಜ, ಮಹಮ್ಮದ್ ಫಯಾಜ್ ಎಂಬ ವಿದ್ಯಾರ್ಥಿಗಳಿಗೆ ತೀವ್ರವಾಗಿ ಗಾಯವಾಗಿದ್ದು ಮಡಿಕೇರಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹೆಚ್. ವೀರೇಶ್ ಎಂಬ ವಿದ್ಯಾರ್ಥಿಯ ಕಾಲಿಗೆ ಗಾಯವಾಗಿದ್ದು, ಇವರೆಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಸ್ ಚಲಾಯಿಸುತ್ತಿದ್ದ ಜಾನ್ಸನ್ ಅಲಿಯಾಸ್ ಚಿಂಟು ಮತ್ತು ಅಡುಗೆ ಸಹಾಯಕ ಸಿದ್ದಲಿಂಗ ಅವರ ಸ್ಥಿತಿ ಚಿಂತಾಜನಕವಾಗಿದ್ದು, ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆಯೇ ಸುಂಟಿಕೊಪ್ಪ ಠಾಣೆಯ ಸಬ್ ಇನ್ಸ್‍ಪೆಕ್ಟರ್ ಜಯರಾಮ್ ಮತ್ತು ರಾತ್ರಿ ಪಾಳಿಯ ಪೊಲೀಸರು ಸ್ಥಳಕ್ಕೆ ಧಾವಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸುವಲ್ಲಿ ಮತ್ತು ಕ್ರೇನ್‍ನಿಂದ ಬಸ್‍ನ್ನು ಮೇಲಕ್ಕೆತ್ತಲು ತುರ್ತು ಕ್ರಮಕೈಗೊಂಡರಲ್ಲದೆ, ಇತರ ವಿದ್ಯಾರ್ಥಿಗಳಿಗೆ ಮತ್ತು ಇನ್ನಿತರರಿಗೆ ವಾಸ್ತವ್ಯದ ವ್ಯವಸ್ಥೆ ಕಲ್ಪಿಸಿಕೊಡುವಲ್ಲಿ ನೆರವಾದರು.  

ಅವಘಡದಿಂದ ಪಾರಾದ 7 ತಿಂಗಳ ಕೂಸು: ಅದೇ ಬಸ್‍ನಲ್ಲಿ ಶಿಕ್ಷಕ ಉಮೇಶ್ ಹಾಗೂ ಅವರ ಪತ್ನಿ ಸುಮಲತಾ ಎಂಬುವವರಿದ್ದು, ಜೊತೆಗೆ 7 ತಿಂಗಳ ಹೆಣ್ಣು ಮಗುವನ್ನು ಕರೆದುಕೊಂಡು ಬಂದಿದ್ದಾರೆ. ಬಸ್ಸಿನ 3ನೇ ಸೀಟ್‍ನಲ್ಲಿ ತಾಯಿಯ ಮಡಿಲಿನಲ್ಲಿ ಬೆಚ್ಚಗೆ ಮಲಗಿದ್ದ ಧನ್ಯಶ್ರೀ ಎಂಬ ಹಸುಗೂಸು ಅದೃಷ್ಟವಶಾತ್ ಯಾವುದೇ ಗಾಯವಿಲ್ಲದೆ ಪಾರಾಗಿದೆ. 

ಬಸ್ ಚಾಲಕ ಜಾನ್ಸನ್ ಅಲಿಯಾಸ್ ಚಿಂಟು ಕೆ.ಆರ್.ಎಸ್. ನಿಂದ ಹೊರಡುವಾಗಲೇ ಪಾನಮತ್ತನಾಗಿದ್ದು, ಚಾಲನೆ ಸಂದರ್ಭದಲ್ಲಿ ನಿದ್ದೆಗೆ ಜಾರಿದ್ದರಿಂದ ಅಪಘಾತ ಸಂಭವಿಸಿರಬಹುದೆಂದು ಕೆಲವು ವಿದ್ಯಾರ್ಥಿಗಳು ಹೇಳಿಕೊಂಡಿದ್ದಾರೆ. ವಿಷಯವರಿತ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ. ಪನ್ನೇಕರ್, ಡಿವೈಎಸ್ಪಿ ಮುರಳೀಧರ್ ಅವರು ಸ್ಥಳಕ್ಕೆ ಭೇಟಿ ನೀಡಿ ಅಗತ್ಯ ಕ್ರಮಕೈಗೊಂಡಿದ್ದಾರೆ. ವೃತ್ತ ನಿರೀಕ್ಷಕ ಕ್ಯಾತೇಗೌಡ ಅವರು ವಿದ್ಯಾರ್ಥಿಗಳು ತಂಗಿರುವ ಶ್ರೀರಾಮ ಮಂದಿರಕ್ಕೆ ಭೀಟಿ ನೀಡಿ ಪರಿಶೀಲನೆ ನಡೆಸಿದರು.

ಅಧಿಕಾರಿ-ಶಾಸಕರ ಭೇಟಿ: ಜಿಲ್ಲಾಸ್ಪತ್ರೆಗೆ ಜಿಲ್ಲಾಧಿಕಾರಿ ಶ್ರೀವಿದ್ಯಾ ಭೇಟಿ ನೀಡಿ ಸಾಂತ್ವನ ಹೇಳಿದರು. ಗಾಯಗೊಂಡ ವಿದ್ಯಾರ್ಥಿಗಳ ಯೋಗಕ್ಷೇಮ ವಿಚಾರಿಸಿ ಧೈರ್ಯ ತುಂಬಿದರು.

ಪ್ರವಾಸಿ ತಂಡದವರಿಗೆ ಹಿಂದಿರುಗಲು ಸೂಕ್ತ ಬಸ್ ಹಾಗೂ ಅಗತ್ಯ ಕ್ರಮಕೈಗೊಳ್ಳುವಂತೆ ಸಂಬಂಧಿಸಿದ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಪಿ.ಎಸ್ ಮಚ್ಚಾಡೋ, ಮಡಿಕೇರಿ ಕ್ಷೇತ್ರ ಶಿಕ್ಷಣಾಧಿಕಾರಿ ಗಾಯತ್ರಿ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು. ವಿಧಾನಪರಿಷತ್ ಸದಸ್ಯ ಸುನೀಲ್ ಸುಬ್ರಮಣಿ ಅವರು ಭೇಟಿ ನೀಡಿ ಸಾಂತ್ವನ ಹೇಳಿದರು.

ಕಾರ್ಮಿಕ ಮತ್ತು ಜಿಲ್ಲಾ ಚಾಲಕರ ಸಂಘದ ಮಾಜಿ ಅಧ್ಯಕ್ಷ ಹಾಗೂ ವಾಹನ ಚಾಲಕರು, ವಿವಿಧ ಸಂಘ ಸಂಸ್ಥೆ ಹಾಗೂ ಸಾರ್ವಜನಿಕರು ಘಟನೆಯ ಸಂದರ್ಭ ಅವರನ್ನು ಸ್ಥಳಾಂತರಿಸುವ ಕಾರ್ಯದಲ್ಲಿ ತೊಡಗಿದ್ದರು.

ಸುಂಟಿಕೊಪ್ಪ ರಾಮಮಂದಿರದಲ್ಲಿ ತಂಗಿದ್ದ ವಿದ್ಯಾರ್ಥಿಗಳಿಗೆ ಜಿ.ಪಂ.ಸದಸ್ಯ ಪಿ.ಎಂ.ಲತೀಫ್, ತಾ.ಪಂ.ಸದಸ್ಯೆ ಓಡಿಯಪ್ಪನ ವಿಮಾಲಾವತಿ ಸುಧೀಶ್ ಹಾಗೂ ಗ್ರಾ.ಪಂ.ಅಧ್ಯಕ್ಷೆ ರೋಸ್‍ಮೇರಿ ರಾಡ್ರಿಗಸ್, ಸದಸ್ಯರು ಸಾಂತ್ವನ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X