ಡಿ.31ರಂದು ಮಲ್ಪೆ ಬೀಚ್‌ನಲ್ಲಿ ಗಾಳಿಪಟ ಉತ್ಸವ
ಉಡುಪಿ, ಡಿ. 29: ಉಡುಪಿ ಜಿಲ್ಲಾಡಳಿತ ಹಾಗೂ ಮಲ್ಪೆ ಅಭಿವೃದ್ಧಿ ಸಮಿತಿ ಇವರ ಸಹಯೋಗದಲ್ಲಿ ಮಲ್ಪೆಬೀಚ್ ಗಾಳಿಪಟ ಉತ್ಸವ-2018 ಕಾರ್ಯಕ್ರಮ ಡಿ.31ರಂದು ಬೆಳಗ್ಗೆ 10ರಿಂದ ಸಂಜೆ 8ರವರೆಗೆ ಮಲ್ಪೆ ಬೀಚ್ ನಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಅಂದು ಬೆಳಗ್ಗೆ 10ಕ್ಕೆ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಡಾ. ಜಯಮಾಲಾ ಉದ್ಘಾಟಲಿಸಲಿದ್ದು, ಉಡುಪಿ ಶಾಸಕ ರಘುಪತಿ ಟ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
Next Story