Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಹೃದಯಾಘಾತವಾಗಿ ಮೃತಪಟ್ಟರೂ ವಿಮಾ ಕಂಪೆನಿ...

ಹೃದಯಾಘಾತವಾಗಿ ಮೃತಪಟ್ಟರೂ ವಿಮಾ ಕಂಪೆನಿ ಪರಿಹಾರ ನೀಡಬೇಕು: ಹೈಕೋರ್ಟ್

ವಾರ್ತಾಭಾರತಿವಾರ್ತಾಭಾರತಿ29 Dec 2018 8:23 PM IST
share
ಹೃದಯಾಘಾತವಾಗಿ ಮೃತಪಟ್ಟರೂ ವಿಮಾ ಕಂಪೆನಿ ಪರಿಹಾರ ನೀಡಬೇಕು: ಹೈಕೋರ್ಟ್

ಬೆಂಗಳೂರು, ಡಿ.29: ಉದ್ಯೋಗದ ಸಮಯದಲ್ಲಿ ಅಪಘಾತದಿಂದ ಮಾತ್ರವಲ್ಲದೆ ಹೃದಯಘಾತ ಸಂಭವಿಸಿ ಸಾವನ್ನಪ್ಪಿದರೂ ಉದ್ಯೋಗಿಗೆ ಪರಿಹಾರವನ್ನು ವಿಮಾ ಕಂಪೆನಿಯೇ ನೀಡಬೇಕೆಂದು ಹೈಕೋರ್ಟ್ ಆದೇಶ ಹೊರಡಿಸಿದೆ. 

ಅಂಜನ್‌ ಕುಮಾರ್ ಎಂಬ ಲಾರಿ ಚಾಲಕ ಉದ್ಯೋಗದ ಸಮಯದಲ್ಲಿ ವಿಶ್ರಾಂತಿ ಪಡೆಯುತ್ತಿದ್ದ ವೇಳೆ ಹೃದಯಾಘಾತ ಸಂಭವಿಸಿ ಸಾವನ್ನಪ್ಪಿದ ಪ್ರಕರಣದಲ್ಲಿ ಆತನ ಕುಟುಂಬಕ್ಕೆ ಪರಿಹಾರ ಕಲ್ಪಿಸಲು ವಿಮಾ ಕಂಪೆನಿಯೊಂದು ನಿರಾಕರಿಸಿ ಹೈಕೋರ್ಟ್ ಮೆಟ್ಟಿಲೇರಿತ್ತು. ವಾಹನ ಅಪಘಾತ ಸಂಭವಿಸಿದರೆ ಮಾತ್ರ ಪರಿಹಾರ ಕಲ್ಪಿಸಲು ವಿಮಾ ಕಂಪೆನಿ ಹೊಣೆಯಾಗುತ್ತದೆ. ಹೃದಯಾಘಾತದಿಂದ ಸಾವನ್ನಪ್ಪಿದಾಗ ಚಾಲಕನ ಕುಟುಂಬಕ್ಕೆ ಪರಿಹಾರ ಕಲ್ಪಿಸಲು ತಾನು ಹೊಣೆಗಾರನಾಗುವುದಿಲ್ಲ ಎಂದು ವಿಮಾ ಕಂಪೆನಿ ಪ್ರತಿಪಾದಿಸಿತ್ತು.

ಈ ವಾದವನ್ನು ಸಾರಾಸಗಟಾಗಿ ತಿರಸ್ಕರಿಸಿದ ಹೈಕೋರ್ಟ್, ಡ್ರೈವರ್ ಕೆಲಸ ತುಂಬಾ ಒತ್ತಡದ ಉದ್ಯೋಗ, ಟಯರ್ ಪಂಕ್ಟರ್ ಆಗಿದ್ದರಿಂದ ಚಾಲಕ ಅಂಜನ್‌ ಕುಮಾರ್ ಲಾರಿಯನ್ನು ರಸ್ತೆ ಬದಿ ನಿಲ್ಲಿಸಿ ವಿಶ್ರಾಂತಿ ಪಡೆಯುತ್ತಿದ್ದಾಗ ಹೃದಯಾಘಾತ ಸಂಭವಿಸಿ ಸಾವನ್ನಪ್ಪಿದ್ದಾನೆ. ಆತನ ಆ ದಿನದ ಕೆಲಸ ಪೂರ್ಣಗೊಂಡಿರಲಿಲ್ಲ. ಹೀಗಾಗಿ, ಇದು ಉದ್ಯೋಗದ ಸಮಯದಲ್ಲಿಯೇ ಸಾವು ಸಂಭವಿಸಿದ ಪ್ರಕರಣ ಎಂಬುದಾಗಿ ಪರಿಗಣಿಸಬೇಕಿದೆ ಎಂದು ಹೈಕೋರ್ಟ್ ತೀರ್ಮಾನಿಸಿತು. ಅಲ್ಲದೆ, ಅಂಜನ್ ಕುಮಾರ್ ಡ್ರೈವರ್ ಆಗಿ ಉದ್ಯೋಗ ಮಾಡುತ್ತಿದ್ದಾಗ ಅಪಘಾತ ನಡೆದು ಗಾಯಗೊಂಡು ಸಾವನ್ನಪ್ಪಿಲ್ಲ. ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ. ಹೃದಯಾಘಾತವು ಒಂದು ಸಹಜ ಪ್ರಕ್ರಿಯೆ. ಹೀಗಾಗಿ, ಇದೊಂದು ಸಹಜ ಸಾವು ಎಂದು ವಿಮಾ ಕಂಪೆನಿ ಮಂಡಿಸಿದ ವಾದ ಒಪ್ಪಲಾಗದು ಎಂದು ಅಭಿಪ್ರಾಯಪಟ್ಟ ಹೈಕೋರ್ಟ್, ಕಾರ್ಮಿಕ ಆಯುಕ್ತರ ಆದೇಶದಲ್ಲಿ ಮಧ್ಯಪ್ರವೇಶಿಸಲು ಸಕಾರಣ ಕಂಡುಬರುತ್ತಿಲ್ಲ ಎಂದು ತಿಳಿಸಿ ವಿಮಾ ಕಂಪೆನಿಯ ಮೇಲ್ಮನವಿ ವಜಾಗೊಳಿಸಿತು. ಹಾಗೆಯೇ ಅಂಜನ್‌ ಕುಮಾರ್ ಕುಟುಂಬ ಸದಸ್ಯರನ್ನು ಗುರುತಿಸಿ ಅವರ ಹೆಸರಿನಲ್ಲಿ ಕಾರ್ಮಿಕ ಆಯುಕ್ತರು ಘೋಷಿಸಿದ ಪರಿಹಾರ ಮೊತ್ತ ಠೇವಣಿ ಇರಿಸುವಂತೆ ವಿಮಾ ಕಂಪೆನಿಗೆ ಆದೇಶಿಸಿದೆ.

ಪ್ರಕರಣವೇನು: ಮುಝೀಬ್‌ ಖಾನ್ ಎಂಬವರ ಬಳಿ ಚಿತ್ರದುರ್ಗದ ಹೊಸ ಟೌನ್ ನಿವಾಸಿ ಅಂಜನ್ ಕುಮಾರ್ ಲಾರಿ ಚಾಲಕರಾಗಿದ್ದರು. 2007ರಲ್ಲಿ ಕಬ್ಬಿಣದ ಅದಿರು ಹೊತ್ತು ನುಗ್ಗೇನಹಳ್ಳಿಯಿಂದ ಮಂಗಳೂರಿಗೆ ಕೊಂಡೊಯ್ಯುತ್ತಿದ್ದ ವೇಳೆ ಬೈರಾಪುರ ಬಳಿ ಲಾರಿ ಪಂಕ್ಚರ್ ಆಗಿತ್ತು. ಇದರಿಂದ ಲಾರಿಯನ್ನು ರಸ್ತೆ ಬದಿ ನಿಲ್ಲಿಸಿದ್ದ ಅಂಜನ್ ಕುಮಾರ್, ಸಮೀಪದ ಹೊಟೇಲ್‌ನಲ್ಲಿ ಆಹಾರ ಸೇವಿಸಿ, ಅಲ್ಲಿನ ಮರವೊಂದರ ಬುಡದಲ್ಲಿ ಕುಳಿತು ವಿಶ್ರಾಂತಿ ಪಡೆಯುತ್ತಿದ್ದರು. ಈ ವೇಳೆ ಹೃದಯಾಘಾತ ಸಂಭವಿಸಿ ಮೃತಪಟ್ಟಿದ್ದರು.

ಪ್ರಕರಣದಲ್ಲಿ ಪರಿಹಾರ ಕಲ್ಪಿಸಲು ಲಾರಿ ಮಾಲಕ ಹಾಗೂ ವಿಮಾ ಕಂಪೆನಿಗೆ ಆದೇಶಿಸುವಂತೆ ಕೋರಿ ಮೃತನ ಪತ್ನಿ ರೇಣುಕಮ್ಮ ಕಾರ್ಮಿಕ ಆಯುಕ್ತರಿಗೆ ಅರ್ಜಿ ಸಲ್ಲಿಸಿದ್ದರು. ಅಂಜನ್‌ ಕುಮಾರ್ ಉದ್ಯೋಗದ ಸಮಯದಲ್ಲಿ ಹೃದಯಾಘಾತ ಸಂಭವಿಸಿ ಸಾವನ್ನಪ್ಪಿದ ಕಾರಣ ಆತನ ಕುಟುಂಬದವರಿಗೆ ವಾರ್ಷಿಕ ಶೇ.12ರಷ್ಟು ಬಡ್ಡಿದರದಲ್ಲಿ ಒಟ್ಟು 3,84,280ರೂ.ಪರಿಹಾರ ನೀಡುವಂತೆ ಪ್ರಕರಣದಲ್ಲಿ ವಿಮಾ ಕಂಪೆನಿಯಾಗಿದ್ದ ನ್ಯಾಷನಲ್ ಇನ್ಷೂರೆನ್ಸ್ ಕಂಪೆನಿ ಲಿಮಿಟೆಡ್‌ಗೆ ಸೂಚಿಸಿ 2010ರ ಎ.13ರಂದು ಕಾರ್ಮಿಕ ಆಯುಕ್ತರು ಆದೇಶಿಸಿದ್ದರು. ಈ ಆದೇಶ ಪ್ರಶ್ನಿಸಿ ವಿಮಾ ಕಂಪೆನಿ ಹೆಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X