Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ವಸತಿ ರಹಿತ ಬಡವರಿಗೆ ಮನೆ ನಿರ್ಮಾಣಕ್ಕೆ...

ವಸತಿ ರಹಿತ ಬಡವರಿಗೆ ಮನೆ ನಿರ್ಮಾಣಕ್ಕೆ ಆದ್ಯತೆ: ಜಿಲ್ಲಾಧಿಕಾರಿ ಸೆಂಥಿಲ್

ವಾರ್ತಾಭಾರತಿವಾರ್ತಾಭಾರತಿ29 Dec 2018 8:39 PM IST
share
ವಸತಿ ರಹಿತ ಬಡವರಿಗೆ ಮನೆ ನಿರ್ಮಾಣಕ್ಕೆ ಆದ್ಯತೆ: ಜಿಲ್ಲಾಧಿಕಾರಿ ಸೆಂಥಿಲ್

ಮಂಗಳೂರು, ಡಿ.29: ದ.ಕ. ಜಿಲ್ಲೆಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ/ ಅರೆ ಅಲೆಮಾರಿ, ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಸಮುದಾಯಗಳ ನಿವೇಶನ ರಹಿತರಿಗೆ ಭೂಮಿ ಮತ್ತು ಮನೆ ನಿರ್ಮಾಣಕ್ಕೆ ಜಿಲ್ಲಾಧಿಕಾರಿ ಮತ್ತು ಜಿಪಂ ಸಿಇಒ ಜಂಟಿಯಾಗಿ ಕ್ರಿಯಾ ಯೋಜನೆ ರೂಪಿಸಿದ್ದು, ಯೋಜನೆ ಅನುಷ್ಠಾನಕ್ಕೆ ತರಲಾಗುವುದು ಎಂದು ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಹೇಳಿದರು.

ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶನಿವಾರ ನಡೆದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ/ ಅರೆ ಅಲೆಮಾರಿ, ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಸಮುದಾಯ ಯೋಜನೆಗಳ ಅನುಷ್ಠಾನದ ಜಿಲ್ಲಾ ಮಟ್ಟದ ಸಮಿತಿ ಸಭೆ, ಸಫಾಯಿ ಕರ್ಮಚಾರಿ ಪ್ರಗತಿ ಪರಿಶೀಲನಾ ಸಭೆ, ಜಿಲ್ಲಾ ಜಾಗೃತಿ ಉಸ್ತುವಾರಿ ಸಭೆ, ವಿಶೇಷ ಘಟಕ ಮತ್ತು ಗಿರಿಜನ ಉಪಯೋಜನೆ ಸಭೆ, ದೌರ್ಜನ್ಯ ಸಮಿತಿ ಸಭೆಗಳ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

ಜಿಲ್ಲೆಯಲ್ಲಿ ಹಿಂದುಳಿದಿರುವ ಪರಿಶಿಷ್ಟ ಜಾತಿ ಮತ್ತು ಪಂಗಡದವರ ಸಮಸ್ಯೆಗಳನ್ನು ಆಲಿಸಲು ಜನವರಿ ತಿಂಗಳಲ್ಲಿ ತಾಲೂಕು ಮಟ್ಟದಲ್ಲಿ ಸಭೆ ಕರೆದು ಸಮಸ್ಯೆ ಆಲಿಸಿ ಪರಿಹರಿಸಲು ದಿನಾಂಕ ನಿಗದಿಪಡಿಸಿದ್ದು, ಎಲ್ಲರಿಗೂ ಮಾಹಿತಿ ನೀಡಿ ಭೇಟಿ ನೀಡುವುದಾಗಿ ಸಭೆಯಲ್ಲಿ ಜಿಲ್ಲಾಧಿಕಾರಿ ಹೇಳಿದರು.

ವಸತಿ ಜೊತೆಗೆ ವಿದ್ಯಾವಂತ ನಿರುದ್ಯೋಗಿಗಳಿಗೆ ಉದ್ಯೋಗ ನೀಡಲು ಕೌಶಲ್ಯ ತರಬೇತಿ ನೀಡಲೂ ಯೋಜಿಸಲಾಗಿದೆ. ವಸತಿ ಮತ್ತು ಉದ್ಯೋಗಕ್ಕೆ ಸಂಬಂಧಿಸಿದಂತೆ ವಿಶೇಷ ಆಂದೋಲನವನ್ನು ಹಮ್ಮಿಕೊಳ್ಳುವ ಯೋಜನೆಯಿದೆ ಎಂದರು.

‘ಈಗಾಗಲೇ ತಹಶೀಲ್ದಾರ್‌ರಿಗೆ ಸರಕಾರಿ ಭೂಮಿ ಗುರುತಿಸಲು ಸೂಚನೆ ನೀಡಲಾಗಿದೆ. ಈ ಸಂಬಂಧ ಕಾರ್ಯಪ್ರಗತಿಯಲ್ಲಿದೆ’ ಎಂದು ಸಹಾಯಕ ಆಯುಕ್ತ ರವಿಚಂದ್ರ ನಾಯಕ್ ಜಿಲ್ಲಾಧಿಕಾರಿಗೆ ಉತ್ತರಿಸಿದರು.

ಜಿಲ್ಲೆಯಲ್ಲಿ ಅಲೆಮಾರಿ ಜನಾಂಗದವರ ಒಟ್ಟು 814 ಕುಟುಂಬಗಳನ್ನು ಗುರುತಿಸಲಾಗಿದೆ. ಈಗಾಗಲೇ ಕೊರಗ ಜನಾಂಗದ ಅಭಿವೃದ್ಧಿಗೆ ಸಂಬಂಧಿಸಿದಂತೆ ಶೈಕ್ಷಣಿಕ ಮತ್ತು ಆರೋಗ್ಯ ಸಮೀಕ್ಷೆಗೂ ಕ್ರಮ ಕೈಗೊಳ್ಳಲಾಗಿದೆ ಎಂದು ಐಟಿಡಿಪಿ ಅಧಿಕಾರಿ ಹೇಮಲತಾ ಮಾಹಿತಿ ನೀಡಿದರು.

ದೌರ್ಜನ್ಯ ತಡೆ ಕಾಯ್ದೆ ಪ್ರಕರಣದಲ್ಲಿ ನ್ಯಾಯಾಲಯದಲ್ಲಿ ಹಲವು ವರ್ಷಗಳಿಂದ ಬಾಕಿ ಉಳಿದಿರುವ ಪ್ರಕರಣಗಳ ಬಗ್ಗೆ ಹಾಗೂ ಈ ಪ್ರಕರಣಗಳ ತ್ವರಿತ ವಿಲೇವಾರಿಗೆ ಸಂಬಂಧಿಸಿದಂತೆ ಸಭೆಯಲ್ಲಿ ಉಪಸ್ಥಿತರಿದ್ದ ಪಬ್ಲಿಕ್ ಪ್ರಾಸಿಕ್ಯೂಟರ್ ಜೊತೆ ಚರ್ಚಿಸಲಾಯಿತು. ಕೆಲವು ಹಳೆಯ ಪ್ರಕರಣಗಳು ಹೈಕೋರ್ಟ್‌ ನಲ್ಲಿ ತಡೆಯಿರುವುದರಿಂದ ವಿಳಂಬಗೊಂಡಿದೆ ಎಂದು ಅವರು ಹೇಳಿದರು.

ಸಫಾಯಿ ಕರ್ಮಚಾರಿಗಳಿಗೆ ಸಂಬಂಧಿಸಿದಂತೆ ನಿರ್ದಿಷ್ಟ ಪ್ರಕರಣಗಳಿಗೆ ಮಹಾನಗರ ಪಾಲಿಕೆಗೆ ನಿರ್ದೇಶನಗಳನ್ನು ನೀಡಿದ ಜಿಲ್ಲಾಧಿಕಾರಿ, ಕಾರ್ಮಿಕ ಭವನ ಬೇಡಿಕೆ ಈಡೇರಿಸಲು ಅಗತ್ಯ ಮತ್ತು ತುರ್ತು ಕ್ರಮ ಕೈಗೊಂಡು ಮುಂದಿನ ಕಾರ್ಯಸೂಚಿಯಲ್ಲಿ ಈ ವಿಷಯ ಬಾರದಿರಲಿ ಎಂದು ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿಗೆ ಸೂಚನೆ ನೀಡಿದರು. ಸಮುದಾಯದ ಮುಖಂಡರು ಕುಂದು ಕೊರತೆಗಳನ್ನು ಸಭೆಯಲ್ಲಿ ಹಂಚಿಕೊಂಡರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X