ಎಸ್ಸೆಸ್ಸೆಫ್ ಉಪ್ಪಿನಂಗಡಿ ಡಿವಿಷನ್: ಅಜಿತ್ ಹನುಮಕ್ಕನವರ್ ವಿರುದ್ಧ ದೂರು ದಾಖಲು

ಉಪ್ಪಿನಂಗಡಿ, ಡಿ. 29: ಪ್ರವಾದಿ ಮುಹಮ್ಮದ್ (ಸ) ಅವರನ್ನು ನಿಂದನೆ ಮಾಡಿ, ಸಮಾಜದಲ್ಲಿ ಕೋಮು ಸಂಘರ್ಷಕ್ಕೆ ಕಾರಣವಾಗುವ ರೀತಿಯಲ್ಲಿ ಮಾಧ್ಯಮಕ್ಕೆ ಅಗೌರವ ತೋರಿ, ಮುಸ್ಲಿಮರ ಭಾವನೆಯನ್ನು ಕೆರಳಿಸಿದ ಸುವರ್ಣ ನ್ಯೂಸ್ ಚಾನಲ್ ನಿರೂಪಕ ಅಜಿತ್ ಹನುಮಕ್ಕನರ್ ಹಾಗೂ ಸುವರ್ಣ ನ್ಯೂಸ್ ಚಾನಲ್ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿರುವುದಾಗಿ ಎಸ್ಸೆಸ್ಸೆಫ್ ಉಪ್ಪಿನಂಗಡಿ ನಿಯೋಗ ತಿಳಿಸಿದೆ.
ಈ ಸಂದರ್ಭ ಎಸ್ಸೆಸ್ಸೆಫ್ ದ.ಕ. ಜಿಲ್ಲಾ ಕಾರ್ಯದರ್ಶಿ ಮುಹಮ್ಮದಾಲಿ ತುರ್ಕಳಿಕೆ, ಎಸ್ಸೆಸ್ಸೆಫ್ ಉಪ್ಪಿನಂಗಡಿ ಡಿವಿಷನ್ ಅಧ್ಯಕ್ಷ ಮಸ್ ಊದ್ ಸಅದಿ ಗಂಡಿಬಾಗಿಲು, ಪ್ರ. ಕಾರ್ಯದರ್ಶಿ ಅಬ್ದುಲ್ ರಹಿಮಾನ್ ಪದ್ಮುಂಜ, ಉಪಾಧ್ಯಕ್ಷ ಮುಹಮ್ಮದ್ ಮಿಸ್ಬಾಹಿ ಕಡಬ, ಇಸ್ಹಾಕ್ ಮದನಿ ಅಳಕೆ, ಮುಖಂಡರಾದ ಮುಹಮ್ಮದ್ ಮುಸ್ತಫಾ ಉರುವಾಲು ಪದವು, ಎ.ಕೆ ರಝಾ ಅಂಜದಿ ಹಾಗು ಇತರರು ಭಾಗವಹಿಸಿದ್ದರು.
Next Story