ಕುಂದಾಪುರ: ಸರ್ವಿಸ್ ರಸ್ತೆಯಲ್ಲಿ ಸಂಚಾರಕ್ಕೆ ಆದೇಶ
ಉಡುಪಿ, ಡಿ.29: ಜಿಲ್ಲೆಯ ಕುಂದಾಪುರ ನಗರದ ರಾಷ್ಟ್ರೀಯ ಹೆದ್ದಾರಿ 66ರ ಬಸ್ರೂರು ಮೂರುಕೈ ಎಂಬಲ್ಲಿ ಪ್ಲೈಓವರ್ ಕಾಮಗಾರಿ ಕಳೆದ ಅಕ್ಟೋಬರ್ ತಿಂಗಳಿನಿಂದ ನಡೆದಿದ್ದು, ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುವ ಎಲ್ಲಾ ವಾಹನಗಳ ಸುಗಮ ಸಂಚಾರಕ್ಕಾಗಿ ಹಂಗಳೂರಿನಿಂದ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದವರೆಗೆ ಹಾಗೂ ಬಸ್ ನಿಲ್ದಾಣದಿಂದ ಹಂಗಳೂರುವರೆಗಿನ ಸರ್ವಿಸ್ ರಸ್ತೆಗಳಲ್ಲಿಯೇ ಎಲ್ಲಾ ವಾಹನಗಳು ಡಿ.29ರಿಂದ ಸಂಚರಿಸುವಂತೆ ತಾತ್ಕಾಲಿಕ ಬದಲಾವಣೆ ಮಾಡಿ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಆದೇಶ ಹೊರಡಿಸಿದ್ದಾರೆ.
Next Story