ಉಡುಪಿ ಜಿಲ್ಲೆಯ ಮೂರು ಗ್ರಾಪಂ ಚುನಾವಣೆ: ರಜೆ ಘೋಷಣೆ
ಉಡುಪಿ, ಡಿ.29: ಉಡುಪಿ ಜಿಲ್ಲೆಯ ಮೂರು ಗ್ರಾಪಂಗಳಿಗೆ ಹಾಗೂ ಇತರ ಎಂಟು ಗ್ರಾಪಂಗಳ ಎಂಟು ಸ್ಥಾನಗಳಿಗೆ ಜ. 2ರಂದು ನಡೆಯುವ ಚುನಾವಣೆಯಲ್ಲಿ ಈ ಎಲ್ಲಾ ಕ್ಷೇತ್ರಗಳ ವ್ಯಾಪ್ತಿಯಲ್ಲಿರುವ ಮತದಾರರು ಮತ ಚಲಾಯಿಸಲು ಅನುಕೂಲವಾಗುವಂತೆ ಆಯಾ ಮತ ಕ್ಷೇತ್ರಗಳ ಎಲ್ಲಾ ರಾಜ್ಯ ಸರಕಾರಿ ಕಚೇರಿಗಳಿಗೆ, ಶಾಲಾ-ಕಾಲೇಜುಗಳಿಗೆ ಹಾಗೂ ಸರಕಾರಿ ಸ್ವಾಮ್ಯದ ಅಂಗ ಸಂಸ್ಥೆಗಳು ಸೇರಿದಂತೆ ಎಲ್ಲರಿಗೂ ಸಾರ್ವತ್ರಿಕ ರಜೆಯನ್ನು ಘೋಷಿಸಲಾಗಿದೆ.
Next Story