ಜ.29ರಿಂದ ಮಂಗಳೂರು ಪುರಭವನದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ
ಮಂಗಳೂರು, ಡಿ.29: ದ.ಕ. ಜಿಲ್ಲಾ 23ನೇ ಕನ್ನಡ ಸಾಹಿತ್ಯ ಸಮ್ಮೇಳನವು ಜ. 29, 30, 31ರಂದು ನಗರದ ಪುರಭವನದಲ್ಲಿ ಏರ್ಪಡಿಸಲು ನಿರ್ಧರಿಸಲಾಗಿದೆ.
ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್, ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಭಾಸ್ಕರ್ ಕೆ., ಪಾಲಿಕೆಯ ಆಯುಕ್ತ ಮುಹಮ್ಮದ್ ನಝೀರ್, ಶಾಸಕ ವೇದವ್ಯಾಸ ಕಾಮತ್, ಮಾಜಿ ಮೇಯರ್ ಶಶಿಧರ್ ಹೆಗ್ಡೆ, ಪಾಲಿಕೆಯ ವಿಪಕ್ಷ ನಾಯಕ ಪ್ರೇಮನಂದ ಶೆಟ್ಟಿ ಹಾಗೂ ಸಾಹಿತ್ಯ ಪರಿಷತ್‌ನ ಪದಾಧಿಕಾರಿ ಗಳೊಂದಿಗೆ ಸಮಾಲೋಚಿಸಿ ಈ ಬಗ್ಗೆ ನಿರ್ಣಯಿಸಲಾಯಿತು.
ಪ್ರಸ್ತುತ ಸನ್ನಿವೇಶದ ಬಗ್ಗೆ ಒತ್ತು ನೀಡಿ ಸಮ್ಮೇಳನದ ಕಾರ್ಯ ಕಲಾಪಗಳನ್ನು ರೂಪಿಸಲಾಗುವುದು ಹಾಗೂ ಸಾಂಸ್ಕೃತಿಕ ಪ್ರತಿಭೆಗಳಿಗೆ ಪ್ರತಿಭಾ ಪ್ರದರ್ಶನ ನೀಡುವುದಕ್ಕೆ ವಿಶೇಷ ಅವಕಾಶ ನೀಡಲಾಗುವುದು. ಆಸಕ್ತರೆಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಸಮ್ಮೇಳನದ ಯಶಸ್ಸಿನಲ್ಲಿ ಭಾಗಿಗಳಾಗುವಂತೆ ಜಿಲ್ಲಾ ಕಸಾಪ ಅಧ್ಯಕ್ಷ ಎಸ್. ಪ್ರದೀಪ ಕುಮಾರ ಕಲ್ಕೂರ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story