ಮಂಗಳೂರು ವಿಮಾನ ನಿಲ್ದಾಣ ತಲುಪಿದ ಡಾ. ಮಧುಕರ್ ಶೆಟ್ಟಿ ಪಾರ್ಥಿವ ಶರೀರ
ಸಚಿವ ಖಾದರ್, ನ್ಯಾ.ಸಂತೋಷ್ ಹೆಗ್ಡೆ ಸೇರಿ ಗಣ್ಯರಿಂದ ಅಂತಿಮ ದರ್ಶನ

ಮಂಗಳೂರು, ಡಿ.29: ದಕ್ಷ ಹಿರಿಯ ಪೊಲೀಸ್ ಅಧಿಕಾರಿ ಡಾ. ಮಧುಕರ್ ಶೆಟ್ಟಿ ಅವರ ಪಾರ್ಥಿವ ಶರೀರವು ಡಿ. 29ರಂದು ರಾತ್ರಿ ಬೆಂಗಳೂರಿನಿಂದ ಹೊರಟು ಮಂಗಳೂರು ವಿಮಾನ ನಿಲ್ದಾಣಕ್ಕೆ 10 ಗಂಟೆಗೆ ತಲುಪಿದ್ದು, ನಗರಾಭಿವೃದ್ಧಿ ಸಚಿವ ಯು.ಟಿ.ಖಾದರ್, ಮಾಜಿ ಲೋಕಾಯುಕ್ತ ನ್ಯಾ.ಸಂತೋಷ್ ಹೆಗ್ಡೆ ಅಂತಿಮ ದರ್ಶನ ಪಡೆದರು.
ಮಂಗಳೂರು ನಗರ ಪೊಲೀಸರು ಅಂತಿಮ ಗೌರವ ಸಲ್ಲಿಸಿ, ಶ್ರದ್ಧಾಂಜಲಿ ಸಲ್ಲಿಸಿದರು. ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, ಡಾ. ಮಧುಕರ್ ಶೆಟ್ಟಿ ಅವರ ಬಂಧು-ಮಿತ್ರರು ಹಾಗೂ ಸಾರ್ವಜನಿಕರು ಆಗಮಿಸಿ ಅಂತಿಮ ದರ್ಶನ ಪಡೆದರು.
ಡಾ.ಮಧುಕರ್ ಶೆಟ್ಟಿ ಪಾರ್ಥೀವ ಶರೀರ ಅಂತಿಮ ದರ್ಶನಕ್ಕೆ ಮಂಗಳೂರು ಪೊಲೀಸ್ ಕಮಿಷನರೇಟ್‌ನಿಂದ ವ್ಯವಸ್ಥೆ ಕಲ್ಪಿಸಲಾಗಿತ್ತು. ಇನ್ನು ಒಂದು ಗಂಟೆಯ ಕಾಲ ಮಂಗಳೂರಿನ ವಿಮಾನ ನಿಲ್ದಾಣದಲ್ಲಿಯೇ ಸಾರ್ವಜನಿಕ ಅಂತಿಮ ದರ್ಶನ ಕಲ್ಪಿಸಲಾಗಿತದ್ದು, ಬಳಿಕ ಡಾ.ಮಧುಕರ್ ಶೆಟ್ಟಿ ಪಾರ್ಥಿವ ಶರೀರವನ್ನು ಕುಂದಾಪುರಕ್ಕೆ ಕೊಂಡೊಯ್ಯಲಿದ್ದಾರೆ.
Next Story