ಅಂತಿಮ ನಮನ...
ಅನಾರೋಗ್ಯದಿಂದ ಹೈದರಾಬಾದ್‌ನಲ್ಲಿ ಮೃತಪಟ್ಟಿರುವ ಹಿರಿಯ ಐಪಿಎಸ್ ಅಧಿಕಾರಿ ಡಾ.ಕೆ.ಮಧುಕರ್ ಶೆಟ್ಟಿ ಅವರ ಪಾರ್ಥಿವ ಶರೀರಕ್ಕೆ ಗಣ್ಯರು ಅಂತಿಮ ನಮನ ಸಲ್ಲಿಸಿದರು. ಶನಿವಾರ ಹೈದರಾಬಾದ್‌ನಿಂದ ವಿಶೇಷ ವಿಮಾನದ ಮೂಲಕ ಮೃತದೇಹವನ್ನು ಮಧ್ಯಾಹ್ನ 1:15 ಸುಮಾರಿಗೆ ದೇವನಹಳ್ಳಿ ಅಂತರ್‌ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತರಲಾಗಿತ್ತು. ಅಲ್ಲಿಂದ ಯಲಹಂಕದ ಸಶಸ್ತ್ರ ಪೊಲೀಸ್ ತರಬೇತಿ ಕೇಂದ್ರದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಯಿತು.ಗೃಹ ಸಚಿವ ಎಂ.ಬಿ.ಪಾಟೀಲ್, ರಾಜ್ಯ ಪೊಲೀಸ್ ಮಹಾನಿರ್ದೇಶಕಿ ಎನ್.ನೀಲಮಣಿ ರಾಜು, ಹಿರಿಯ ಪೊಲೀಸ್ ಅಧಿಕಾರಿಗಳಾದ ಕಿಶೋರ್ ಚಂದ್ರ, ಎಂಎನ್ ರೆಡ್ಡಿ, ಎ.ಎಂ.ಪ್ರಸಾದ್, ನಗರ ಪೊಲೀಸ್ ಆಯುಕ್ತ ಟಿ.ಸುನೀಲ್ ಕುಮಾರ್, ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ(ಎಡಿಜಿಪಿ) ಕಮಲ್‌ಪಂತ್, ನಿವೃತ್ತ ಡಿಜಿಪಿಗಳಾದ ಆರ್.ಕೆ.ದತ್ತಾ, ಶಂಕರ್ ಬಿದರಿ ಸೇರಿ ಹಿರಿಯ ಅಧಿಕಾರಿಗಳು, ಸಂಬಂಧಿಕರು, ಸಾರ್ವಜನಿಕರು ಅಂತಿಮ ನಮನ ಸಲ್ಲಿಸಿದರು.
Next Story





