Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಹುಟ್ಟೂರು ಯಡಾಡಿಯಲ್ಲಿ ಹಿರಿಯ ಐಪಿಎಸ್...

ಹುಟ್ಟೂರು ಯಡಾಡಿಯಲ್ಲಿ ಹಿರಿಯ ಐಪಿಎಸ್ ಅಧಿಕಾರಿ ಮಧುಕರ್ ಶೆಟ್ಟಿ ಅಂತ್ಯಕ್ರಿಯೆ

ವಾರ್ತಾಭಾರತಿವಾರ್ತಾಭಾರತಿ30 Dec 2018 1:53 PM IST
share
ಹುಟ್ಟೂರು ಯಡಾಡಿಯಲ್ಲಿ ಹಿರಿಯ ಐಪಿಎಸ್ ಅಧಿಕಾರಿ ಮಧುಕರ್ ಶೆಟ್ಟಿ ಅಂತ್ಯಕ್ರಿಯೆ

ಉಡುಪಿ, ಡಿ.30: ದಕ್ಷ ಐಪಿಎಸ್ ಅಧಿಕಾರಿ ಮಧುಕರ್ ಶೆಟ್ಟಿ ಅವರ ಅಂತ್ಯಕ್ರಿಯೆಯನ್ನು ಹುಟ್ಟೂರು ಕುಂದಾಪುರ ತಾಲೂಕಿನ ಶಿರಿಯಾರ ಸಮೀಪದ ಯಡಾಡಿಯಲ್ಲಿ ರವಿವಾರ ಪೂರ್ವಾಹ್ನ ಜಿಲ್ಲಾಡಳಿತದ ವತಿಯಿಂದ ಸಕಲ ಸರಕಾರಿ ಗೌರವಗಳೊಂದಿಗೆ ನೆರವೇರಿಸಲಾಯಿತು.

ಶನಿವಾರ ತಡರಾತ್ರಿ ಮಂಗಳೂರು ವಿಮಾನ ನಿಲ್ದಾಣದಿಂದ ಪಾರ್ಥಿವ ಶರೀರವನ್ನು ತನ್ನ ತಂದೆ ತಾಯಿ ಕೊನೆಯ ವರ್ಷಗಳನ್ನು ಕಳೆದ ಯಡಾಡಿಯ ರೈ ಫಾರ್ಮ್ ಹೌಸ್‌ಗೆ ತರಲಾಗಿತ್ತು. ರವಿವಾರ ಬೆಳಗ್ಗೆ 8ಗಂಟೆಯಿಂದ ಗಾಜಿನ ಶವಪೆಟ್ಟಿಯೊಳಗೆ ಇರಿಸಲಾದ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಸಾವಜರ್ನಿಕರಿಗೆ ಅವಕಾಶ ಕಲ್ಪಿಸಲಾಗಿತ್ತು.

ಸಹಸ್ರಾರು ಸಂಖ್ಯೆಯಲ್ಲಿ ಆಗಮಿಸಿದ ಸಾರ್ವಜನಿಕರು, ಕುಟುಂಬಸ್ಥರು, ಅಧಿಕಾರಿಗಳು, ಹೊರ ಜಿಲ್ಲೆಯ ಗಣ್ಯರು ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದರು. ಬಳಿಕ ಪಾರ್ಥಿವ ಶರೀರದ ಧಾರ್ಮಿಕ ವಿಧಿ ವಿಧಾನಗಳನ್ನು ನೆರವೇರಿಸಿ, ಸರಕಾರಿ ಗೌರವಕ್ಕಾಗಿ ಪಾರ್ಥಿವ ಶರೀರಕ್ಕೆ ರಾಷ್ಟ್ರಧ್ವಜ ಹೊದಿಸಿ ಮನೆಯ ಅಂಗಳದಲ್ಲಿ ಇರಿಸಲಾಗಿತ್ತು.

ನಗರಾಭಿವೃದ್ಧಿ ಸಚಿವ ಯು.ಟಿ.ಖಾದರ್, ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್, ಮಂಗಳೂರು ಪಶ್ಚಿಮ ವಲಯ ಐಜಿಪಿ ಅರುಣ್ ಚಕ್ರವರ್ತಿ, ಕುಟುಂಬದವರ ಮಾರ್ಗದರ್ಶನದಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕ ಲಕ್ಷ್ಮಣ್ ನಿಂಬರ್ಗಿ ನೇತೃತ್ವದಲ್ಲಿ ಅಂತಿಮ ಸಂಸ್ಕಾರಕ್ಕೆ ಸರ್ವ ಸಿದ್ಧತೆಗಳನ್ನು ಮಾಡಲಾಗಿತ್ತು. ಶಾಸಕರಾದ ಹಾಲಾಡಿ ಶ್ರೀನಿವಾಸ ಶೆಟ್ಟಿ, ಸುಕುಮಾರ್ ಶೆಟ್ಟಿ, ಮಾಜಿ ಸಚಿವ ಜಯಪ್ರಕಾಶ್ ಹೆಗ್ಡೆ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ, ಚಿಂತಕ ದಿನೇಶ್ ಅಮೀನ್ ಮಟ್ಟು, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎ.ಗಫೂರ್, ಬಿಜೆಪಿ ಜಿಲ್ಲಾಧ್ಯಕ್ಷ ಮಟ್ಟಾರು ರತ್ನಾಕರ ಶೆಟ್ಟಿ ಅಂತಿಮ ನಮನ ಸಲ್ಲಿಸಿದರು.

ಪೊಲೀಸ್ ಅಧಿಕಾರಿಗಳಾದ ಡಿಜಿಪಿ ಎನ್‌ಪಿಎ ಬರ್ಮನ್, ಡಿಐಜಿ ಎನ್‌ಪಿಎ ಅಮೃತ ದಾಸ್, ಎಡಿಜಿಪಿ ಪ್ರತಾಪ್ ರೆಡ್ಡಿ, ಐಜಿಪಿಗಳಾದ ಸ್ಟಿಪನ್ ರವೀಂದ್ರ, ಮಧುಸೂದನ್ ರೆಡ್ಡಿ, ಜಿ.ಎಸ್.ರಾವ್, ವಿಪುಲ್ ಕುಮಾರ್, ಎಸ್ಪಿ ಭೂಷಣ್ ಬೊರಸೆ, ಲಾಬುರಾಮ್, ವಿನಾಯಕ ಪಾಟೀಲ್ ಮೊದಲಾದ ವರು ತಮ್ಮ ಸಹೋದ್ಯೋಗಿಗೆ ಅಂತಿಮ ಗೌರವ ಸಲ್ಲಿಸಿದರು.

ತದನಂತರ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಆರ್‌ಪಿಐ ರಾಘವೇಂದ್ರ ನೇತೃತ್ವದಲ್ಲಿ ಪಾರ್ಥಿವ ಶರೀರಕ್ಕೆ ಗೌರವವನ್ನು ಸಲ್ಲಿಸಲಾಯಿತು. ಮೂರು ಸುತ್ತು ಗಾಳಿಯಲ್ಲಿ ಕುಶಾಲತೋಪು ಹಾರಿಸಿ ಗೌರವ ಸೂಚಿಸಲಾಯಿತು. ಬಳಿಕ ಮನೆಯ ಎದುರಿನ ತೋಟದಲ್ಲಿ ಧಾರ್ಮಿಕ ವಿಧಿ ವಿಧಾನಗಳ ಪ್ರಕಾರ ಬಂಟ ಸಂಪ್ರದಾಯದಂತೆ ಅಂತಿಮ ಸಂಸ್ಕಾರವನ್ನು ನೆರವೇರಿಸಲಾಯಿತು. 

ತಂದೆ ಹಿರಿಯ ಪತ್ರಕರ್ತ ವಡ್ಡರ್ಸೆ ರಘುರಾಮ ಶೆಟ್ಟಿ ಹಾಗೂ ತಾಯಿ ಪ್ರಫುಲ್ಲಾ ಶೆಟ್ಟಿಯವರ ಸಮಾಧಿಗಳ ಬಳಿಯೇ ಮಗ ಮಧುಕರ ಶೆಟ್ಟಿಯ ಅಂತ್ಯ ಕ್ರಿಯೆ ನಡೆಸಲಾಯಿತು. ಮಗಳು ಶಮ್ಯ, ಸಹೋದರನ ಮಗ ಸಾರಂಗ್ ಹಾಗೂ ಸಹೋದರರಾದ ಮುರಳಿಧರ್ ಶೆಟ್ಟಿ, ಸುಧಾಕರ್ ಶೆಟ್ಟಿ ಚಿತೆಗೆ ಅಗ್ನಿ ಸ್ಪರ್ಶ ಮಾಡಿದರು. ಈ ಸಂದರ್ಭದಲ್ಲಿ ಪತ್ನಿ ಸ್ವರ್ಣ, ಕುಟುಂಬಸ್ಥರು, ಗಣ್ಯರು, ಹಿರಿಯ ಐಪಿಎಸ್ ಅಧಿಕಾರಿಗಳು, ಗ್ರಾಮಸ್ಥರು ನೂರಾರು ಸಂಖ್ಯೆ ಯಲ್ಲಿ ನೆರೆದಿದ್ದರು.

ಎಚ್1ಎನ್1 ಜ್ವರ ಹಾಗೂ ಶ್ವಾಸಕೋಶದ ಸಮಸ್ಯೆಯಿಂದ ಬಳಲುತ್ತಿದ್ದ ಐಪಿಎಸ್ ಅಧಿಕಾರಿ ಮಧುಕರ್ ಶೆಟ್ಟಿ(47) ಶುಕ್ರವಾರ ರಾತ್ರಿ ಹೈದರಾಬಾದ್ ನ ಆಸ್ಪತ್ರೆಯಲ್ಲಿ ನಿಧನರಾಗಿದ್ದರು.

ಬಿಕ್ಕಿಬಿಕ್ಕಿ ಅತ್ತ ಮಗಳು !

ಬೆಳಗ್ಗೆಯಿಂದಲೂ ತಂದೆಯ ಪಾರ್ಥಿವ ಶರೀರದ ಮುಂದೆ ಗಟ್ಟಿ ಮನಸ್ಸು ಮಾಡಿ ತಾಯಿಯೊಂದಿಗೆ ಕುಳಿತಿದ್ದ ಮಧುಕರ್ ಶೆಟ್ಟಿಯ ಏಕೈಕ ಪುತ್ರಿ ಶಮ್ಯಾ, ತಂದೆಯ ಚಿತೆಗೆ ಅಗ್ನಿ ಸ್ಪರ್ಶ ಮಾಡುತ್ತಿದ್ದಂತೆ ತಂದೆಯನ್ನು ನೆನೆದು ಬಿಕ್ಕಿ ಬಿಕ್ಕಿ ಅತ್ತಳು. ಈ ವೇಳೆ ಜೊತೆ ಇದ್ದ ಅಮ್ಮ, ದೊಡ್ಡಪ್ಪ-ಚಿಕ್ಕಪ್ಪಂದಿರುವ ಶಮ್ಯಾಳನ್ನು ಸಮಾಧಾನ ಪಡಿಸಿದರು. ಈ ಕ್ಷಣವನ್ನು ನೋಡಿದ ಎಲ್ಲರ ಕಣ್ಣುಗಳು ಕೂಡ ತೇವಗೊಂಡವು.

‘ಗುಪ್ತಶೆಟ್ಟಿ’ ಹಳ್ಳಿಯವರಿಂದ ಗೌರವ

ದೂರದ ಚಿಕ್ಕಮಗಳೂರು ಜಿಲ್ಲೆಯ ಆಲ್ದೂರು ಹೋಬಳಿಯ ಗುಪ್ತಶೆಟ್ಟಿ ಹಳ್ಳಿಯಿಂದ ಆಗಮಿಸಿದ ಗ್ರಾಮಸ್ಥರು ತಮ್ಮ ನೆಚ್ಚಿನ ಅಧಿಕಾರಿ ಮಧುಕರ್ ಶೆಟ್ಟಿಯ ಪಾರ್ಥಿವ ಶರೀರಕ್ಕೆ ಗೌರವ ಸಲ್ಲಿಸಿದರು.

ಜನಪರ, ಬಡವರ ಪರ, ದೀನದಲಿತರ ಪರ ದುಡಿದ ಪ್ರಾಮಾಣಿಕ ಪೊಲೀಸ್ ಅಧಿಕಾರಿಯ ಆತ್ಮಕ್ಕೆ ಚಿರಶಾಂತಿ ಕೋರುವ ಎಂಬ ಬ್ಯಾನರ್ ಹಿಡಿದು ಆಗಮಿಸಿದ ಗುಪ್ತಶೆಟ್ಟಿ ಹಳ್ಳಿಯ ಸುಮಾರು 50ರಷ್ಟು ಗ್ರಾಮಸ್ಥರು ಪಾರ್ಥಿವ ಶರೀರಕ್ಕೆ ಹೂವು ಅರ್ಪಿಸಿ ಗೌರವ ನಮನ ಸಲ್ಲಿಸಿದರು.

ಕಣ್ಣೀರಿಟ್ಟ ಐಪಿಎಸ್ ಅಧಿಕಾರಿಗಳು

ಐಪಿಎಸ್ ಅಧಿಕಾರಿ ಮಧುಕರ್ ಶೆಟ್ಟಿ ಅಂತ್ಯಕ್ರಿಯೆಯಲ್ಲಿ ಸಾಕಷ್ಟು ಸಂಖ್ಯೆ ಯಲ್ಲಿ ರಾಜ್ಯ ಹಾಗೂ ಹೊರ ರಾಜ್ಯಗಳ ಐಪಿಎಸ್ ಅಧಿಕಾರಿಗಳು ಆಗಮಿಸಿ ಪಾರ್ಥಿವ ಶರೀರದ ಅಂತಿಮ ದರ್ಶನ ನಡೆಸಿದರು.

ಪಾರ್ಥಿವ ಶರೀರಕ್ಕೆ ಅಂತಿಮ ಗೌರವ ಸಲ್ಲಿಸುವ ಸಂದರ್ಭ ಹಲವು ಅಧಿಕಾರಿಗಳು ಉಮ್ಮಳಿಸಿ ಬಂದ ಅಳುವನ್ನು ನುಂಗಿ ತಮ್ಮ ಸಹಪಾಠಿಗೆ ವಿದಾಯ ಹೇಳಿದರು. ಕೆಲವು ಅಧಿಕಾರಿಗಳು ದುಃಖ ತಡೆದುಕೊಳ್ಳಲು ಸಾಧ್ಯವಾಗದೆ ಅತ್ತೇ ಬಿಟ್ಟರು. ಚಿತೆಗೆ ಬೆಂಕಿ ಸ್ಪರ್ಶ ಆಗುತ್ತಿದ್ದಂತೆ ನೆರೆದಿದ್ದ ಹೆಚ್ಚಿನ ಅಧಿಕಾರಿ ಗಳ ಕಣ್ಣುಗಳಲ್ಲಿ ನೀರಿತ್ತು.

ಮಧುಕರ ಶೆಟ್ಟಿ ಎಲ್ಲರಿಗೂ ಮಾದರಿಯಾಗುವಂತೆ ಕರ್ತವ್ಯ ನಿರ್ವಹಿಸಿ ತೋರಿಸಿದ್ದರು. ರಾಜ್ಯ ಅವರನ್ನು ಕಳೆದುಕೊಂಡಿದೆ. ಐದನೆ ತರಗತಿಯಲ್ಲಿ ನಾವು ಸಹಪಾಠಿಗಳಾಗಿದ್ದೇವು. ಉತ್ತಮ ವಿದ್ಯಾರ್ಥಿಯಾಗಿದ್ದರು. ಮಧುಕರ್ ಶೆಟ್ಟಿ ಸ್ಮಾರಕ ರಚಿಸುವ ಆ ಬೇಡಿಕೆಯನ್ನು ಸರಕಾರದ ಮುಂದೆ ಇಡಲಾಗುವುದು. ಮಧುಕರ ಶೆಟ್ಟಿಯಂತಹ ದಕ್ಷ ಅಧಿಕಾರಿಗಳನ್ನು ಶಾಶ್ವತವಾಗಿ ಯುವ ಸಮುದಾಯ ಹಾಗೂ ವಿದ್ಯಾರ್ಥಿಗಳು ನೆನಪಿಸಿಕೊಂಡು ಅವರ ವ್ಯಕ್ತಿತ್ವದಿಂದ ಸ್ಪೂರ್ತಿ ಪಡೆದುಕೊಳ್ಳಬೇಕು. ಇದರಿಂದ ರಾಜ್ಯ, ಸಮಾಜ, ಆಡಳಿತಕ್ಕೆ ಒಳಿತು. ಅಂತಹ ಕೆಲಸವನ್ನು ಸರಕಾರ ಮಾಡುವ ಕುರಿತು ಮುಖ್ಯಮಂತ್ರಿ, ಗೃಹ ಸಚಿವರೊಂದಿಗೆ ಚರ್ಚೆ ಮಾಡಲಾಗುವುದು.
-ಯು.ಟಿ. ಖಾದರ್, ನಗರಾಭಿವೃದ್ಧಿ ಸಚಿವರು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X