ನಾಳೆ ರಾಜ್ಯಸಭೆಯಲ್ಲಿ ತ್ರಿವಳಿ ತಲಾಖ್ ನಿಷೇಧ ಮಸೂದೆ ಮಂಡನೆ

ಹೊಸದಿಲ್ಲಿ, ಡಿ.30: ವಿವಾದಾಸ್ಪದ ತ್ರಿವಳಿ ತಲಾಖ್ ನಿಷೇಧ ಮಸೂದೆ ರಾಜ್ಯ ಸಭೆಯಲ್ಲಿ ಸೋಮವಾರ ಮಂಡನೆಯಾಗಲಿದ್ದು, ವಿಪಕ್ಷ ಕಾಂಗ್ರೆಸ್ ಈ ಮಸೂದೆ ಅಂಗೀಕಾರಕ್ಕೆ ಅವಕಾಶ ನೀಡುವುದಿಲ್ಲ ಎಂದು ಹೇಳಿದೆ.
ಕಾನೂನು ಸಚಿವ ರವಿಶಂಕರ್ ಪ್ರಸಾದ್ ತ್ರಿವಳಿ ತಲಾಖ್ ನಿಷೇಧಿಸುವ ಮಸೂದೆಯನ್ನು ರಾಜ್ಯಸಭೆಯಲ್ಲಿ ಮಂಡಿಸಲಿದ್ದಾರೆ. ಬಿಜೆಪಿ ಈ ವೇಳೆ ತನ್ನ ಎಲ್ಲ ಸದಸ್ಯರು ಹಾಜರಿರುವಂತೆ ವಿಪ್ ಜಾರಿಗೊಳಿಸಿದೆ.
ಲೋಕಸಭೆಯು ಧ್ವನಿಮತದ ಮೂಲಕ ಗುರುವಾರ ತ್ರಿವಳಿ ತಲಾಖ್ ನಿಷೇಧಿಸುವ ಮಸೂದೆ ಒಪ್ಪಿಗೆ ನೀಡಿದ್ದು, ರಾಜ್ಯಸಭೆಯಲ್ಲಿ ಅಂಗೀಕಾರಗೊಂಡರೆ ಈ ಮಸೂದೆ ಕಾಯ್ದೆಯಾಗಿ ಜಾರಿಗೆ ಬರಲಿದೆ .
ರಾಜ್ಯಸಭೆಯಲ್ಲಿ ತ್ರಿವಳಿ ತಲಾಖ್ ನಿಷೇಧ ಮಸೂದೆ ಅಂಗೀಕಾರಗೊಳ್ಳದಂತೆ ಕಾಂಗ್ರೆಸ್ ಹೋರಾಟ ನಡೆಸಲಿದೆ ಎಂದು ಎಐಸಿಸಿ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ತಿಳಿಸಿದ್ದಾರೆ.
Next Story





