ಟಿಪ್ಪರ್ ಢಿಕ್ಕಿ: ಬೈಕ್ ಸಹಸವಾರ ಮೃತ್ಯು
ಕಾಪು, ಡಿ.30: ಟಿಪ್ಪರ್ ಲಾರಿಯೊಂದು ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಸವಾರರೊಬ್ಬರು ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕಾಪು ಫ್ಲೈಓವರ್ ನಲ್ಲಿ ಶನಿವಾರ ನಡೆದಿದೆ.
ಮೃತರನ್ನು ಸಹಸವಾರ ಶ್ರೀಕಾಂತ್ ಎಂದು ಗುರುತಿಸಲಾಗಿದೆ. ಇವರ ಸಂಬಂಧಿ ಸವಾರ ಶಿರಿಯಾರ ಗ್ರಾಮದ ಸಂದೇಶ್ (34) ಎಂಬವರು ಗಾಯ ಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಉಡುಪಿಯಿಂದ ಮಂಗಳೂರು ಕಡೆ ಹೋಗುತ್ತಿದ್ದ ಬೈಕಿಗೆ ಹಿಂದಿನಿಂದ ಬಂದ ಟಿಪ್ಪರ್ ಢಿಕ್ಕಿ ಹೊಡೆಯಿತು. ಇದರಿಂದ ಶ್ರೀಕಾಂತ್ ಬೈಕಿನಿಂದ ಎಸೆಯ ಲ್ಪಟ್ಟು ಟಿಪ್ಪರಿನ ಹಿಂಬದಿಯ ಟಯರಿನಡಿಗೆ ಬಿದ್ದರೆನ್ನಲಾಗಿದೆ. ಗಂಭೀರವಾಗಿ ಗಾಯಗೊಂಡ ಶ್ರೀಕಾಂತ್ ಉಡುಪಿ ಖಾಸಗಿ ಆಸ್ಪತ್ರೆ ಕರೆದುಕೊಂಡು ಹೋಗುವ ದಾರಿ ಮಧ್ಯೆ ಮೃತಪಟ್ಟರು.
ಈ ಬಗ್ಗೆ ಕಾಪು ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.
Next Story