Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಗಾಝಿಪುರ: ಕಲ್ಲೆಸೆತದಲ್ಲಿ ಪೊಲೀಸ್ ಸಾವು...

ಗಾಝಿಪುರ: ಕಲ್ಲೆಸೆತದಲ್ಲಿ ಪೊಲೀಸ್ ಸಾವು ಪ್ರಕರಣ

90 ಜನರ ವಿರುದ್ಧ ಎಫ್‌ಐಆರ್ ; 19 ಆರೋಪಿಗಳ ಬಂಧನ

ವಾರ್ತಾಭಾರತಿವಾರ್ತಾಭಾರತಿ30 Dec 2018 11:38 PM IST
share
ಗಾಝಿಪುರ: ಕಲ್ಲೆಸೆತದಲ್ಲಿ ಪೊಲೀಸ್ ಸಾವು ಪ್ರಕರಣ

 ಲಕ್ನೊ, ಡಿ.30: ಉತ್ತರಪ್ರದೇಶದ ಗಾಝಿಪುರ ಜಿಲ್ಲೆಯಲ್ಲಿ ಪ್ರತಿಭಟನಾನಿರತರ ಕಲ್ಲೆಸೆತದಿಂದ ಪೊಲೀಸ್ ಹೆಡ್‌ಕಾನ್‌ಸ್ಟೇಬಲ್ ಮೃತಪಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿ 90 ಜನರ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, 19 ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧೀಕ್ಷಕ ಯಶ್‌ವೀರ್ ಸಿಂಗ್ ತಿಳಿಸಿದ್ದಾರೆ.

ಬಂಧಿತರಲ್ಲಿ 11 ಮಂದಿಯ ವಿರುದ್ಧ ಕೊಲೆ ಪ್ರಕರಣ ದಾಖಲಿಸಲಾಗಿದೆ ಘಟನಾ ಸ್ಥಳದ ವೀಡಿಯೊ ದೃಶ್ಯಾವಳಿಯನ್ನು ಪರಿಶೀಲಿಸಲಾಗುತ್ತಿದೆ. ದುಷ್ಕೃತ್ಯ ನಡೆಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದವರು ತಿಳಿಸಿದ್ದಾರೆ.

  ಗಾಝಿಪುರದಲ್ಲಿ ಶನಿವಾರ ಪ್ರಧಾನಿ ಮೋದಿ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ್ದರು. ಈ ಕಾರ್ಯಕ್ರಮದ ಭದ್ರತೆಗೆ ನಿಯೋಜಿತರಾಗಿದ್ದ ಹೆಡ್‌ಕಾನ್‌ಸ್ಟೇಬಲ್ ಸುರೇಶ್‌ಪ್ರತಾಪ್ ಸಿಂಗ್ ವತ್ಸ್ ಕಾರ್ಯಕ್ರಮ ಮುಗಿದ ಬಳಿಕ ಹಿಂತಿರುಗುತ್ತಿದ್ದಾಗ , ವಿವಿಧೆಡೆ ರಾಷ್ಟ್ರೀಯ ನಿಶದ್ ಪಕ್ಷದ ಕಾರ್ಯಕರ್ತರು ರಸ್ತೆ ತಡೆಸಿ ಪ್ರತಿಭಟನೆ ನಡೆಸುತ್ತಿದ್ದರು. ಈ ಸಂದರ್ಭ ಪ್ರತಿಭಟನಾಕಾರರನ್ನು ಚದುರಿಸಲು ಮುಂದಾದ ವತ್ಸ್ ಮೇಲೆ ಗುಂಪೊಂದು ಕಲ್ಲೆಸೆದಿದ್ದು ತಲೆಗೆ ತೀವ್ರ ಏಟು ಬಿದ್ದ ವತ್ಸ್ ಆಸ್ಪತ್ರೆಗೆ ಕೊಂಡೊಯ್ಯುತ್ತಿರುವಾಗ ಸಾವನ್ನಪ್ಪಿದ್ದರು.

  ಉತ್ತರಪ್ರದೇಶದಲ್ಲಿ ಡಿಸೆಂಬರ್ ತಿಂಗಳಲ್ಲಿ ಗುಂಪು ಹಲ್ಲೆಯಿಂದ ಪೊಲೀಸ್ ಸಿಬ್ಬಂದಿ ಸಾವನ್ನಪ್ಪಿರುವ ಎರಡನೇ ಘಟನೆ ಇದಾಗಿದೆ. ಡಿ.3ರಂದು ಬುಲಂದ್‌ಶಹರ್‌ನಲ್ಲಿ ನಡೆದ ಘಟನೆಯಲ್ಲಿ ಓರ್ವ ಪೊಲೀಸ್ ಅಧಿಕಾರಿಯನ್ನು ಹತ್ಯೆ ಮಾಡಲಾಗಿತ್ತು.

 ವತ್ಸ್ ಹತ್ಯೆಯನ್ನು ಖಂಡಿಸಿರುವ ಮುಖ್ಯಮಂತ್ರಿ ಆದಿತ್ಯನಾಥ್ , ವತ್ಸ್ ಪತ್ನಿಗೆ 40 ಲಕ್ಷ ರೂ. ಮತ್ತು ಪೋಷಕರಿಗೆ 10 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಅಲ್ಲದೆ ಸಮಾಜಘಾತುಕ ಶಕ್ತಿಗಳ ವಿರುದ್ಧ ಕಠಿಣ ಕ್ರಮ ಕೈಗೊಂಡು ಅವರನ್ನು ಬಂಧಿಸುವಂತೆ ಜಿಲ್ಲಾಡಳಿತಕ್ಕೆ ಸೂಚಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X