Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ​ಸಾಹಿತ್ಯ ಸಮ್ಮೇಳನಕ್ಕೆ ಸಿಂಗಾರಗೊಂಡ...

​ಸಾಹಿತ್ಯ ಸಮ್ಮೇಳನಕ್ಕೆ ಸಿಂಗಾರಗೊಂಡ ಧಾರವಾಡ

ವಾರ್ತಾಭಾರತಿವಾರ್ತಾಭಾರತಿ31 Dec 2018 5:42 PM IST
share

ಧಾರವಾಡ, ಡಿ.31: ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕಾಗಿ ಧಾರವಾಡ ನಗರ ಮಧುವಣಗಿತ್ತಿಯಂತೆ ಶೃಂಗಾರಗೊಂಡಿದ್ದು, ನಾಡಿನ ಸಮಸ್ತ ಜನತೆಯನ್ನು ಕೈ ಬೀಸಿ ಕರೆಯುತ್ತಿದೆ.ಸುಮಾರು 60 ವರ್ಷಗಳ ನಂತರ ಧಾರವಾಡ ನಗರದಲ್ಲಿ ಡಿ.4ರಿಂದ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯುತ್ತಿದ್ದು, ರಾಜ್ಯ, ಹೊರರಾಜ್ಯ ಸೇರಿ ರಾಷ್ಟ್ರದ ಲಕ್ಷಾಂತರ ಸಾಹಿತಿಗಳು, ಸಾಹಿತ್ಯ ಆರಾಧಕರು ಆಗಮಿಸುವ ನಿರೀಕ್ಷೆಯಿದೆ.

ಹೀಗಾಗಿ ಸ್ವಯಂಸೇವಕರು, ಪ್ರೀತಿ, ವಿಶ್ವಾಸದಿಂದ ಸಾಹಿತ್ಯ ಪ್ರೇಮಿಗಳನ್ನು ಬರಮಾಡಿಕೊಳ್ಳಲು ಅಂತಿಮ ಸಿದ್ಧತೆಯಲ್ಲಿ ತೊಡಗಿದ್ದಾರೆ. ನಗರದ ಪ್ರಮುಖ ರಸ್ತೆಗಳ ಬದಿಯ ಸರಕಾರಿ ಕಚೇರಿ ಗೋಡೆ, ಕಾಂಪೌಂಡ್‌ಗಳ ಮೇಲೆ ಅಕ್ಷರ ಜಾತ್ರೆಯ ಚಿತ್ತಾರ ಮೂಡಿಸುವ ಮೂಲಕ ಸಮ್ಮೇಳನಕ್ಕೆ ಸಾಕಷ್ಟು ಮೆರಗು ತರಲಾಗುತ್ತಿದೆ.

ಆಲೂರು ವೆಂಕಟರಾವ್ ವೃತ್ತದಲ್ಲಿ ಬಟ್ಟೆಯಿಂದ ಮಾಡಿದ ಕನ್ನಡ ಬಾವುಟಗಳನ್ನು ಕಟ್ಟಲಾಗುತ್ತಿದ್ದು, ಇಡೀ ವೃತ್ತ ಕೆಂಪು ಮತ್ತು ಹಳದಿ ಬಣ್ಣದಿಂದ ರಂಗೇರಲಿದೆ, ಡಯಟ್ ಆವರಣದ ಕಾಂಪೌಂಡ್ ಮೇಲೆ ಶಿಕ್ಷಕರು ಬಣ್ಣ-ಬಣ್ಣದ ಚಿತ್ತಾರ ಬಿಡಿಸಲು ಆರಂಭಿಸಿದ್ದು ನೋಡುಗರಿಗೆ ಕಣ್ಮನ ಸೆಳೆಯುತ್ತಿದೆ. ಇನ್ನು ಕೆಲ ಗೋಡೆಗಳ ಮೇಲೆ ಅನ್ನಭಾಗ್ಯ, ಕ್ಷೀರಭಾಗ್ಯ, ಸೈಕಲ್ ವಿತರಣೆ, ಕಲೋತ್ಸವ, ಪ್ರತಿಭಾ ಕಾರಂಜಿ, ಶಾಲಾ ಮಕ್ಕಳಿಗೆ ಬಿಸಿಯೂಟ ವಿತರಣೆ ಸೇರಿದಂತೆ 35ಕ್ಕೂ ಹೆಚ್ಚು ಸರಕಾರಿ ಯೋಜನೆಗಳನ್ನು ಚಿತ್ರಗಳ ಮೂಲಕ ಅನಾವರಣಗೊಳಿಸಲಾಗುತ್ತಿದೆ.

ಕರ್ನಾಟಕ ಕಾಲೇಜಿನ ಮುಖ್ಯದ್ವಾರದಿಂದ ಸಾಹಿತ್ಯ ಸಮ್ಮೇಳನದ ಮೆರವಣಿಗೆ ಆರಂಭವಾಗಲಿದ್ದು, ಕಾಲೇಜು ರಸ್ತೆಯಲ್ಲಿರುವ ಕಲಾಕೃತಿಗಳಿಗೆ ಹುಬ್ಬಳ್ಳಿಯ ‘ಕಲರ್ ಮೈ ಸಿಟಿ’ ಸಂಘಟನೆ ವತಿಯಿಂದ ಬಣ್ಣ ಹಚ್ಚಿಸಲಾಗುತ್ತಿದೆ. ಅಷ್ಟೇ ಅಲ್ಲದೇ ಕಾಲೇಜಿನ ಆವರಣದಲ್ಲಿರುವ ಸುತ್ತ ಗೋಡೆಗಳ ಮೇಲೆ ಯಕ್ಷಗಾನ, ಸಾಹಿತ್ಯ ಹಾಗೂ ಐತಿಹಾಸಿಕ ಕಲಾಕೃತಿಗಳ ಅನಾವರಣ ಮಾಡುತ್ತಿರುವುದು ವಿಶೇಷವಾಗಿದೆ.

ವಸತಿ ವ್ಯವಸ್ಥೆ

ಸಮ್ಮೇಳನಕ್ಕೆ ಆಗಮಿಸುವ ಗಣ್ಯರಿಗೆ, ಅತಿಥಿಗಳಿಗೆ ಹಾಗೂ ನೋಂದಾಯಿತ ಸದಸ್ಯರಿಗೆ ಸೂಕ್ತ ವಸತಿ ಹಾಗೂ ಸಾರಿಗೆ ವ್ಯವಸ್ಥೆ ಒದಗಿಸಲು ಜಿಲ್ಲಾಡಳಿತದ ನಿರ್ದೇಶನದಂತೆ ವಸತಿ ಮತ್ತು ಸಾರಿಗೆ ಸಮಿತಿ ಎಲ್ಲ ರೀತಿಯ ಕ್ರಮಗಳನ್ನು ಕೈಗೊಂಡಿದೆ. ನಾಡಿನ ವಿವಿಧ ಜಿಲ್ಲೆಗಳಿಂದ 620 ಅತಿಥಿ ಗಣ್ಯರು, 1000 ವಿಶೇಷ ಆಹ್ವಾನಿತರು, 400 ಕಾರ್ಯಕಾರಿ ಸಮಿತಿ ಸದಸ್ಯರು, 17,000 ನೋಂದಾಯಿತ ಪ್ರತಿನಿಧಿಗಳು, 50 ಕ್ಕೂ ಹೆಚ್ಚು ಸಾಹಿತ್ಯ ಪರಿಷತ್ ಕೇಂದ್ರ ಸಮಿತಿ ಪದಾಧಿಕಾರಿಗಳು, ಸಿಬ್ಬಂದಿ ಸೇರಿದಂತೆ 18,000 ಜನರು ಆಗಮಿಸಲಿದ್ದು ಎಲ್ಲರಿಗೂ ಸೂಕ್ತ ವ್ಯವಸ್ಥೆ ಮಾಡಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X