ಪ್ರಸ್‌ಕ್ಲಬ್ ವರ್ಷದ ವ್ಯಕ್ತಿ ಪ್ರಶಸ್ತಿ ಪ್ರದಾನ ಮಾಡಿದ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್

ಬೆಂಗಳೂರು, ಡಿ. 31: ಮಾಧ್ಯಮ ಕ್ಷೇತ್ರವು ಹೆಚ್ಚು ಸಮಾಜಮುಖಿಯಾಗಿ, ಸಮಾಜವನ್ನು ಪ್ರತಿಬಿಂಬಿಸುವ ನಿಟ್ಟಿನಲ್ಲಿ ತಮ್ಮ ಅಭಿಪ್ರಾಯವನ್ನು ರೂಪಿಸಿಕೊಳ್ಳಬೇಕು ಎಂದು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಹೇಳಿದರು.
ಪ್ರೆಸ್‌ಕ್ಲಬ್ ಆಫ್ ಬೆಂಗಳೂರು ವತಿಯಿಂದ ಪ್ರೆಸ್‌ಕ್ಲಬ್ ಆವರಣದಲ್ಲಿ ಇಂದು ಆಯೋಜಿಸಿದ್ದ ಪ್ರೆಸ್‌ಕ್ಲಬ್ ವರ್ಷದ ವ್ಯಕ್ತಿ ಹಾಗೂ ಪ್ರೆ್‌ಸ್ ಕ್ಲಬ್ ವಾರ್ಷಿಕ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಮಾತನಾಡಿದರು.
ಇತ್ತೀಚಿನ ದಿನಗಳಲ್ಲಿ ಮಾಧ್ಯಮ ತಪ್ಪುಗ್ರಹಿಕೆಯತ್ತ ಸಾಗುತ್ತಿದೆ ಎಂಬ ಆತಂಕ ಮೂಡಿದೆ. ಪತ್ರಕರ್ತರು ಇತರರಿಗೆ ಮಾದರಿಯಾಗಿರುತ್ತಾರೆ. ಇವರ ನಡೆಯನ್ನು ಸಮಾಜ ಗಮನಿಸುತ್ತಿರುತ್ತದೆ. ಸಮಾಜದ ಅಭಿಪ್ರಾಯವನ್ನು ಪ್ರತಿಬಿಂಬಿಸುವ ಕೆಲಸವನ್ನು ಮಾಧ್ಯಮಗಳು ಇನ್ನಷ್ಟು ಪ್ರಬಲವಾಗಿ ಮಾಡ ಬೇಕಿದೆ. ಕೆಲ ವಿಚಾರಗಳನ್ನು ಸಮಾಜಕ್ಕೆ ಮುಟ್ಟಿಸುವುದರಲ್ಲಿ ಕಾಂಪ್ರುಮೈಸ್ ಆಗುವುದು ಒಳ್ಳೆಯ ಬೆಳವಣಿಗೆಯಲ್ಲ ಎಂದು ಕಿವಿಮಾತು ಹೇಳಿದರು.
ನಾನು ರಾಜಕಾರಣಿ ಆಗಬೇಕೆಂದು ಬಯಸಿರಲಿಲ್ಲ.ವಿಜ್ಞಾನಿಯಾಗುವ ಇಂಗಿತ ಹೊಂದಿದ್ದೆ.ಆದರೆ ವಿಧಿಯಾಟದಂತೆ ನಾನು ಇಂದು ರಾಜಕಾರಣಿಯಾಗಿ ದ್ದೇನೆ. ಹಾಗೆಯೇ ಸಾಕಷ್ಟು ಪತ್ರಕರ್ತರು ಸಹ ತಾವು ಪತ್ರಕರ್ತರಾಗಬೇಕೆಂದು ಅಂದುಕೊಂಡಿರಲಿಲ್ಲ. ಆದರೂ ಮಾಧ್ಯಮ ಕ್ಷೇತ್ರದಲ್ಲಿ ತೊಡಗಿದ್ದಾರೆ. ಇಂದು ಮಾಧ್ಯಮ ಕ್ಷೇತ್ರ ದೊಡ್ಡದಾಗಿ ಬೆಳೆದಿದೆ ಎಂದರು.
ಕಾರ್ಯಕ್ರಮದಲ್ಲಿ ಇನ್‌ಫೋಸಿಸ್ ಅಧ್ಯಕ್ಷೆ ಸುಧಾಮೂರ್ತಿ ಅವರಿಗೆ ಪ್ರೆಸ್‌ಕ್ಲಬ್ ವರ್ಷದ ವ್ಯಕ್ತಿ ಪ್ರಶಸ್ತಿ ಪ್ರದಾನ ಮಾಡಲಾಯಿತು.







