Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬಿಬಿಎಂಪಿ ಸ್ಥಾಯಿ ಸಮಿತಿ ಅಧ್ಯಕ್ಷ...

ಬಿಬಿಎಂಪಿ ಸ್ಥಾಯಿ ಸಮಿತಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿಗಳಿಗೆ ತೀವ್ರ ನಿರಾಸೆ

ವಾರ್ತಾಭಾರತಿವಾರ್ತಾಭಾರತಿ31 Dec 2018 10:20 PM IST
share

ಬೆಂಗಳೂರು, ಡಿ.31: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಸ್ಥಾಯಿ ಸಮಿತಿ ಚುನಾವಣೆಗೆ ಹಿಡಿದಿರುವ ಗ್ರಹಣ ಇನ್ನೂ ಬಿಟ್ಟಿಲ್ಲ. ಜನವರಿ 5ರಂದು ಚುನಾವಣೆ ನಡೆಯಬಹುದು ಎಂಬ ನಿರೀಕ್ಷೆಯೂ ಇದೀಗ ಹುಸಿಯಾಗಿದ್ದು ಅಧ್ಯಕ್ಷ ಸ್ಥಾನದ ಆಕಾಂಕ್ಷಿಗಳಿಗೆ ತೀವ್ರ ನಿರಾಸೆಯಾಗಿದೆ.

ಕಳೆದ ಡಿ.14ರಂದು ಬಿಬಿಎಂಪಿಯಲ್ಲಿ 12 ಸ್ಥಾಯಿ ಸಮಿತಿಗಳ ಅಧ್ಯಕ್ಷರ ಆಯ್ಕೆಗೆ ಚುನಾವಣೆ ನಿಗದಿಯಾಗಿತ್ತು. ಈ ವೇಳೆ ಬಿಜೆಪಿ ಸದಸ್ಯರು, ಜೆಡಿಎಸ್ ಸದಸ್ಯರನ್ನು ಮುಂದಿಟ್ಟುಕೊಂಡು ನಡೆಸಿದ ಹೈಡ್ರಾಮ ಹಿನ್ನೆಲೆ ಚುನಾವಣೆ ಮುಂದೂಡಿಕೆಯಾಗಿತ್ತು.

ಸಾಮಾಜಿಕ ನ್ಯಾಯ ಸಮಿತಿಗೆ ಜೆಡಿಎಸ್‌ನ ಮಂಜುಳಾ ನಾರಾಯಣಸ್ವಾಮಿ ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಲು ಉತ್ಸುಕತೆ ತೋರಿದರೆ, ಮತ್ತೊಂದೆಡೆ ವಾರ್ಡ್ ಮಟ್ಟದ ಕಾಮಗಾರಿ ಸಮಿತಿಗೆ ಜೆಡಿಎಸ್ ಸದಸ್ಯ ದೇವದಾಸ್ ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಮುಂದಾದರು, ಈ ವೇಳೆ ಆಡಳಿತ ಹಾಗೂ ಪ್ರತಿಪಕ್ಷ ಸದಸ್ಯರ ನಡುವೆ ತಿಕ್ಕಾಟ ನಡೆದು, ಕಡೆಗೆ ಚುನಾವಣೆಯನ್ನೇ ಮುಂದೂಡಲಾಯಿತು.

ನಂತರ ಸ್ಥಾಯಿ ಸಮಿತಿ ಅಧ್ಯಕ್ಷರ ಚುನಾವಣೆಯನ್ನು ಜ.5ರಂದು ನಡೆಸಲು ಉದ್ದೇಶಿಸಲಾಗಿತ್ತಾದರೂ ಈವರೆಗೆ ಸದಸ್ಯರಿಗೆ ಯಾವುದೇ ನೋಟಿಸ್ ನೀಡಿಲ್ಲ. ನಿಯಮದಂತೆ 7 ದಿನಗಳ ಮುಂಚೆಯೇ ಸದಸ್ಯರಿಗೆ ನೋಟಿಸ್ ನೀಡಬೇಕು. ಆದರೆ, ಇನ್ನು ನೋಟಿಸ್ ನೀಡದ ಕಾರಣ ಜ.5 ರಂದು ಸ್ಥಾಯಿ ಸಮಿತಿ ಅಧ್ಯಕ್ಷರ ಚುನಾವಣೆ ನಡೆಯುವುದಿಲ್ಲ.

ಮುಂದಿನ ವಾರ ಸ್ಥಾಯಿ ಸಮಿತಿ ಅಧ್ಯಕ್ಷರ ಚುನಾವಣೆ ನಡೆಸುವ ಸಾಧ್ಯತೆಯಿದ್ದು, ಆಗಲೂ ಬಿಜೆಪಿ ಹೈಡ್ರಾಮ ನಡೆಸಲಿದೆ. ಬಿಜೆಪಿಯ ಈ ತಂತ್ರಕ್ಕೆ ಕಾಂಗ್ರೆಸ್ ಪತಿ ತಂತ್ರ ಹೆಣೆದಿದ್ದು, ಕೌನ್ಸಿಲ್ ಸಭಾಂಗಣದಲ್ಲಿ ಚುನಾವಣೆ ನಡೆಸುವುದಕ್ಕಿಂತ, ಮೇಯರ್ ಅವರ ಕಚೇರಿಯಲ್ಲೇ ಅಧ್ಯಕ್ಷರ ಆಯ್ಕೆ ನಡೆಸುವ ಕುರಿತು ಚರ್ಚಿಸಲಾಗುತ್ತಿದೆ. ಈ ಬಗ್ಗೆ ಕಾನೂನು ತಜ್ಞರ ಅಭಿಪ್ರಾಯ ಕೇಳಲಾಗಿದೆ. ಹೀಗಾಗಿ, ಸ್ಥಾಯಿ ಸಮಿತಿ ಅಧ್ಯಕ್ಷರ ಚುನಾವಣೆಗೆ ಬಿಬಿಎಂಪಿ ಮೀನಮೇಷ ಎಣಿಸುತ್ತಿದ್ದು ಅಧ್ಯಕ್ಷ ಆಕಾಂಕ್ಷಿಗಳು ಚಾತಕ ಪಕ್ಷಿಯಂತೆ ಕಾದು ಕುಳಿತಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X