ಶಿಕ್ಷೆಗೊಳಗಾಗಿ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ
ಮಂಗಳೂರು, ಡಿ.31: ಪಾಂಡೇಶ್ವರ ಠಾಣಾ ವ್ಯಾಪ್ತಿಯಲ್ಲಿ ನಡೆದ ಪ್ರಕರಣವೊಂದರಲ್ಲಿ ನ್ಯಾಯಾಲಯದಿಂದ ಶಿಕ್ಷೆಗೊಳಗಾಗಿ ತಲೆಮರೆಸಿಕೊಂಡಿದ್ದ ಅಪರಾಧಿಯನ್ನು ಪೊಲೀಸರು ಬಂಧಿಸಿದ್ದಾರೆ.
ಕುಪ್ಪೆಪದವು ನಿವಾಸಿ ಗಣೇಶ್ ಬಂಧಿತ ಆರೋಪಿ.
ಪ್ರಕರಣವೊಂದರಲ್ಲಿ ಈತನಿಗೆ ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯ 3 ವರ್ಷ ಕಠಿಣ ಶಿಕ್ಷೆ ವಿಧಿಸಿತ್ತು. ಅಪರಾಧಿ ತಲೆ ಮರೆಸಿಕೊಂಡಿದ್ದು, ಈತನಿಗೆ ಪೊಲೀಸರು ಶೋಧ ನಡೆಸುತ್ತಿದ್ದರು. ಈತ ಹುಬ್ಬಳ್ಳಿಯ ಹೊಟೇಲೊಂದರಲ್ಲಿ ಕೆಲಸದಲ್ಲಿರುವ ಬಗ್ಗೆ ಖಚಿತ ಮಾಹಿತಿ ಪಡೆದು ದಾಳಿ ನಡೆಸಿದ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಹಿರಿಯ ಅಧಿಕಾರಿಗಳ ಮಾರ್ಗದರ್ಶನ ಹಾಗೂ ಇನ್‌ಸ್ಪೆಕ್ಟರ್ ಮುಹಮ್ಮದ್ ಶರ್ೀ ನಿರ್ದೇಶನದಂತೆ ಸಿಬ್ಬಂದಿ ಸೂರಜ್ ಶೆಟ್ಟಿ, ಭಾಸ್ಕರ, ಆಂಜನಪ್ಪ, ಭೀಮಪ್ಪ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
Next Story





