ಮಾಂಬಾಡಿ ಸುಬ್ರಹ್ಮಣ್ಯ ಭಟ್ಟರಿಗೆ ‘ಕನ್ನಡ ಸಿರಿ’ ಪ್ರಶಸ್ತಿ

ಮಂಗಳೂರು, ಡಿ.31: ಯಕ್ಷಗಾನ ಕ್ಷೇತ್ರದ ಪ್ರಸಿದ್ಧ ಚೆಂಡೆ ಮದ್ದಳೆಗಾರ, ಯಕ್ಷಗುರು ಮಾಂಬಾಡಿ ಸುಬ್ರಹ್ಮಣ್ಯ ಭಟ್ ಅವರಿಗೆ ಜನವರಿ 4, 5, 6ರಂದು ಧಾರವಾಡದ ಕೃಷಿ ವಿಶ್ವವಿದ್ಯಾನಿಲಯದ ಆವರಣದಲ್ಲಿ ಜರಗಲಿರುವ 84ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ‘ಕನ್ನಡ ಸಿರಿ’ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ದ.ಕ. ಜಿಲ್ಲಾ ಕಸಾಪ ಅಧ್ಯಕ್ಷ ಎಸ್.ಪ್ರದೀಪಕುಮಾರ ಕಲ್ಕೂರ ತಿಳಿಸಿದ್ದಾರೆ.
ಕಳೆದ ಎರಡು ದಶಕಗಳಿಂದ ಅನೇಕ ಯಕ್ಷಗಾನ ತಿರುಗಾಟದ ಮೇಳಗಳಲ್ಲಿ ಚೆಂಡೆ ಮದ್ದಳೆ ವಾದಕರಾಗಿ ಕಲಾಸೇವೆಗೈಯುವುದರ ಜೊತೆಗೆ ನೂರಾರು ಶಿಷ್ಯಂದಿರನ್ನು ಹಾಗೂ ಹಿಮ್ಮೇಳ ಕಲಾವಿದರನ್ನು ಮಾಂಬಾಡಿಯವರು ರೂಪಿಸಿದ್ದು, ಇವರು ದ.ಕ. ಜಿಲ್ಲೆಯ ಬಂಟ್ವಾಳ ತಾಲೂಕಿನವರಾಗಿದ್ದಾರೆ ಎಂದು ಜಿಲ್ಲಾ ಕಸಾಪ ಅಧ್ಯಕ್ಷರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story