ಮಂಗಳೂರು ವಿವಿ ಮಟ್ಟದ ರೋವರ್ಸ್ -ರೇಂಜರ್ಸ್ ಮೂಟ್ ಕ್ಯಾಂಪ್

ಉಡುಪಿ, ಜ.1: ಪ್ರತಿಯೊಬ್ಬ ವ್ಯಕ್ತಿಯ ಜೀವನದ ಸಾರ್ಥಕತೆ ಸೇವೆಯಲ್ಲಿದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವ ಧೈರ್ಯ, ಸಾಹಸ, ನಾಯಕತ್ವ ತರಬೇತಿ ಮತ್ತು ವ್ಯಕ್ತಿತ್ವ ವಿಕಸನಗೊಳಿಸುವಲ್ಲಿ ಭಾರತ ಸ್ಕೌಟ್ ಮತ್ತು ಗೈಡ್ಸ್, ಕಾಲೇಜು ವಿದ್ಯಾರ್ಥಿಗಳಲ್ಲಿ ರೋವರ್ಸ್ ರೇಂಜರ್ಸ್‌ನಂತಹ ಶಿಬಿರಗಳು ಮುಖ್ಯಪಾತ್ರ ವಹಿಸುತ್ತವೆ ಎಂದು ರಾಜೋತ್ಸವ ಪ್ರಶಸ್ತಿ ಪುರಸ್ಕೃತ ಸಮಾಜ ಸೇವಕ ಹಾಗೂ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಉಪಾಧ್ಯಕ್ಷ ಆನಂದ್ ಸಿ.ಕುಂದರ್ ಹೇಳಿದ್ದಾರೆ.
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್‌ನ ಶತಮಾನೋತ್ಸವ ಪ್ರಯುಕ್ತ ಉಡುಪಿ ಅಜ್ಜರಕಾಡು ಡಾ.ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಸಭಾಂಗಣದಲ್ಲಿ ಇತ್ತೀಚೆಗೆ ಆಯೋಜಿಸಲಾದ ಮಂಗಳೂರು ವಿವಿ ಮಟ್ಟದ ರೋವರ್ಸ್ ಮತ್ತು ರೇಂಜರ್ಸ್ ಮೂಟ್ ಕ್ಯಾಂಪ್ 2018ನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.
ಮುಖ್ಯ ಅತಿಥಿಗಳಾಗಿ ಮೀನುಗಾರಿಕಾ ಮಹಾಮಂಡಲ ಅಧ್ಯಕ್ಷ ಯಶ್ ಪಾಲ್ ಸುವರ್ಣ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್‌ನ ಜಿಲ್ಲಾ ಮುಖ್ಯ ಆಯುಕ್ತೆ ಶಾಂತಾ ವಿ.ಆಚಾರ್ಯ, ಜಿಲ್ಲಾ ಆಯುಕ್ತ ಡಾ.ವಿಜೇಂದ್ರ ವಸಂತ್ ಮಾತನಾಡಿದರು.ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಾ.ಭಾಸ್ಕರ್ ಶೆಟ್ಟಿ ಎಸ್. ವಹಿಸಿದ್ದರು.
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್‌ನ ಉಡುಪಿ ಜಿಲ್ಲಾ ಕಾರ್ಯದರ್ಶಿ ಐ.ಕೆ. ಜಯಚಂದ್ರ ರಾವ್, ಜಿಲ್ಲಾ ಸಂಘಟಕ ನಿತಿನ್ ಅಮಿನ್, ಜಿಲ್ಲಾ ಸಂಘಟಕಿ ಸುಮನಾ ಶೇಖರ್, ಜ್ಯೋತಿ ಆಚಾರ್ಯ ಮೊದಲಾದವರು ಉಪಸ್ಥಿತರಿದ್ದರು.
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್‌ನ ಮಂಗಳೂರು ವಿವಿ ನೋಡಲ್ ಅಧಿಕಾರಿ ವಾರಿಜ ಸ್ವಾಗತಿಸಿದರು. ಶಿಬಿರದ ನಾಯಕ ಡಾ.ಗುರುರಾಜ ಪ್ರಭು ವಂದಿಸಿ ದರು. ಶಿಬಿರಾರ್ಥಿ ಪೂಜಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಮಂಗಳೂರು ವಿ.ವಿ ವ್ಯಾಪ್ತಿಯ ಸುಮಾರು 110ಕ್ಕೂ ಅಧಿಕ ರೋವರ್ಸ್ ಮತ್ತು ರೇಂಜರ್ಸ್ ಸದಸ್ಯು ಶಿಬಿರದ ಪ್ರಯೋಜನ ಪಡೆದರು.