ಜ.3: ಎಸ್ಸೆಸ್ಸೆಫ್ ಉಳ್ಳಾಲ ಡಿವಿಷನ್ ವಾರ್ಷಿಕ ಕೌನ್ಸಿಲ್
ಕೊಣಾಜೆ, ಜ.2: ಎಸ್ಸೆಸ್ಸೆಫ್ ಉಳ್ಳಾಲ ಡಿವಿಷನ್ ವಾರ್ಷಿಕ ಕೌನ್ಸಿಲ್ ಎಸ್ಸೆಸ್ಸೆಫ್ ಉಳ್ಳಾಲ ಡಿವಿಷನ್ ಅಧ್ಯಕ್ಷ ಮುನೀರ್ ಅಹ್ಮದ್ ಕಾಮಿಲ್ ಸಖಾಫಿ ಅಧ್ಯಕ್ಷತೆಯಲ್ಲ್ಲಿ ಜ.3ರಂದು ಸಂಜೆ 6 ಗಂಟೆಗೆ ತಿಪ್ಲೆಪದವಿನ ಅಲ್- ಮದೀನಾ ಹಾಲ್ ನಲ್ಲಿ ನಡೆಯಲಿದೆ.
ಎಸ್ಸೆಸ್ಸೆಫ್ ದ.ಕ. ಜಿಲ್ಲಾ ಸದಸ್ಯ ಸೈಯದ್ ಖುಬೈಬ್ ತಂಙಳ್ ದುಆಗೈಯುವರು. ರಾಜ್ಯ ಸಮಿತಿ ಸದಸ್ಯ ಇಸ್ಮಾಯೀಲ್ ಮಾಸ್ಟರ್ ಮೊಂಟೆಪದವು ಕಾರ್ಯಕ್ರಮ ಉದ್ಘಾಟಿಸುವರು. ಎಸ್ಸೆಸ್ಸೆಫ್ ದ.ಕ. ಜಿಲ್ಲಾಧ್ಯಕ್ಷ ಕೆ.ಪಿ.ಸಿರಾಜುದ್ದೀನ್ ಸಖಾಫಿ ಕನ್ಯಾನ ತರಗತಿ ನಡೆಸಲಿರುವರು.
ಎಸ್ಸೆಸ್ಸೆಫ್ ದ.ಕ. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಖಲಂದರ್ ಪದ್ಮುಂಜ ಹಾಗೂ ಜಿಲ್ಲಾ ಸದಸ್ಯ ರಶೀದ್ ಹಾಜಿ ವಗ್ಗ ಚುನಾವಣಾ ಪ್ರಕ್ರಿಯೆ ನಡೆಸಿಕೊಡುವರು.
ಎಸ್ಸೆಸ್ಸೆಫ್ ಉಳ್ಳಾಲ ಡಿವಿಷನ್ ಪ್ರಧಾನ ಕಾರ್ಯದರ್ಶಿ ಹಮೀದ್ ತಲಪಾಡಿ, ಕೋಶಾಧಿಕಾರಿ ಶರೀಫ್ ಮುಡಿಪು, ಉಪಾಧ್ಯಕ್ಷ ತೌಸೀಫ್ ಸಅದಿ ಹರೇಕಳ, ಫಾರೂಕ್ ಸಖಾಫಿ ಮದನಿ ನಗರ, ಜಮಾಲುದ್ದೀನ್ ಸಖಾಫಿ ಮುದುಂಗಾರುಕಟ್ಟೆ, ಕ್ಯಾಂಪಸ್ ಕಾರ್ಯದರ್ಶಿ ಇಲ್ಯಾಸ್ ಪೊಟ್ಟೊಳಿಕೆ ಮೊದಲಾದವರು ಭಾಗವಹಿಸಲಿದ್ದಾರೆ ಎಂದು ಎಸ್ಸೆಸ್ಸೆಫ್ ಉಳ್ಳಾಲ ಡಿವಿಷನ್ ಪ್ರಧಾನ ಕಾರ್ಯದರ್ಶಿ ಹಮೀದ್ ತಲಪಾಡಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.