‘ಕೌಶಲ’ ರಾಷ್ಟ್ರೀಯ ಮಟ್ಟದ ವಿಚಾರ ಸಂಕಿರಣ

ಉಡುಪಿ, ಜ.2: ಕುತ್ಪಾಡಿ ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಆಯು ರ್ವೇದ ಕಾಲೇಜು ಮತ್ತು ಆಸ್ಪತ್ರೆಯ ದಕ್ಷ ಮೆನ್ಸ್ ಕ್ಲಬ್ ವತಿಯಿಂದ ಕೌಶಲ ಒಂದು ದಿನದ ರಾಷ್ಟ್ರೀಯ ಮಟ್ಟದ ವಿಚಾರ ಸಂಕಿರಣವನ್ನು ಕಾಲೇಜಿನಲ್ಲಿ ಇತ್ತೀಚೆಗೆ ಆಯೋಜಿಸಲಾಗಿತ್ತು.
ಸಂಪನ್ಮೂಲ ವ್ಯಕ್ತಿಗಳಾಗಿ ಡಾ.ಜಿ.ಶ್ರೀನಿವಾಸ ಆಚಾರ್ಯ, ಡಾ.ರವಿಶಂಕರ್ ಪೆರ್ವಾಜೆ, ಡಾ.ಆದಿತ್ಯ ಕೆ., ಡಾ.ಮುರಳೀಧರ ಶರ್ಮ ಹಾಗೂ ಡಾ.ತನ್ಮಯ್ ಗೋಸ್ವಾಮಿ ವಿಶೇಷ ಉಪನ್ಯಾಸ ನೀಡಿದರು. ಸಹಪ್ರಾಧ್ಯಾಪಕ ಡಾ.ಯೋಗೀಶ್ ಆಚಾರ್ಯ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಹಾಯಕ ಪ್ರಾಧ್ಯಾಪಕ ರಾದ ಡಾ.ಅರ್ಹಂತ್ ಕುಮಾರ್ ಎ. ಹಾಗೂ ಡಾ. ಅರುಣ್ ಕುಮಾರ್ ಎಂ. ಕಾರ್ಯಕ್ರಮ ನಿರೂಪಿಸಿದರು. ಕಿರಿಯ ವೈದ್ಯರಿಗಾಗಿ ಆಯೋಜಿಸಲಾ ಗಿದ್ದ ಈ ವಿಚಾರ ಸಂಕಿರಣದಲ್ಲಿ 250ಕ್ಕೂ ಹೆಚ್ಚು ವೈದ್ಯರು ಪಾಲ್ಗೊಂಡಿದ್ದರು.
ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಪ್ರಾಂಶುಪಾಲ ಡಾ.ಜಿ. ಶ್ರೀನಿವಾಸ ಆಚಾರ್ಯ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಪ್ರಾಧ್ಯಾಪಕ ಡಾ.ನಿರಂಜನ್ ರಾವ್ ಉಪಸ್ಥಿತರಿದ್ದರು. ಸಹ ಪ್ರಾಧ್ಯಾಪಕ ಡಾ.ವೀರಕುಮಾರ ಕೆ. ಸ್ವಾಗತಿಸಿದರು. ಸಹ ಪ್ರಾಧ್ಯಾಪಕ ಡಾ.ಪ್ರಸನ್ನ ಮೊಗಸಾಲೆ ವರದಿ ವಾಚಿಸಿ ದರು. ಸಹಾಯಕ ಪ್ರಾಧ್ಯಾಪಕ ಡಾ.ರವಿ ಕೆ.ವಿ. ವಂದಿಸಿದರು. ಸಹಪ್ರಾಧ್ಯಾಪಕ ಡಾ.ರಾಕೇಶ್ ಆರ್.ಎನ್. ಕಾರ್ಯಕ್ರಮ ನಿರೂಪಿಸಿದರು.