ದ.ಕ.ಲೋಕಸಭಾ ಕ್ಷೇತ್ರ: ಟಿಕೆಟ್‌ಗಾಗಿ ಕಣಚೂರು ಮೋನು ಡಿಸಿಸಿಗೆ ಮನವಿ

ಮಂಗಳೂರು, ಜ.2: ಮುಂದಿನ ಲೋಕಸಭಾ ಚುನಾವಣೆಯಲ್ಲಿ ದ.ಕ. ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲು ಟಿಕೆಟ್ ನೀಡುವಂತೆ ಹಿರಿಯ ಕಾಂಗ್ರೆಸ್ಸಿಗ ಕಣಚೂರು ಮೋನು ಡಿಸಿಸಿ ಅಧ್ಯಕ್ಷ ಹರೀಶ್ ಕುಮಾರ್ ಅವರಿಗೆ ಮನವಿ ಸಲ್ಲಿಸಿದರು.
ಕಳೆದ 48 ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯರಾಗಿರುವ ಕಣಚೂರು ಮೋನು ಪಕ್ಷದ ವಿವಿಧ ಹುದ್ದೆಯನ್ನು ನಿರ್ವಹಿಸಿದ್ದಾರೆ. ಉದ್ಯಮಿಯಾಗಿರುವ ಕಣಚೂರು ಮೋನು ‘ಕಣಚೂರು ಮೆಡಿಕಲ್ ಕಾಲೇಜಿನ ಅಧ್ಯಕ್ಷರಾಗಿ, ದ.ಕ. ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
Next Story