ಶಬರಿಮಲೆ ವಿವಾದ: ಜ. 3ರಂದು ಪ್ರತಿಭಟನೆ
ಉಡುಪಿ, ಜ.2: ಉಡುಪಿ ಜಿಲ್ಲಾ ಶಬರಿಮಲೆ ಕ್ಷೇತ್ರ ಸಂರಕ್ಷಣಾ ಸಮಿತಿ ವತಿಯಿಂದ ಗುರುವಾರ ಅಪರಾಹ್ನ 3 ಗಂಟೆಗೆ ಉಡುಪಿಯ ಅಜ್ಜರಕಾಡು ಸೈನಿಕರ ಹುತಾತ್ಮರ ಸ್ಮಾರಕದ ಮುಂಭಾಗದಲ್ಲಿ ವಿವಿಧ ಸಂಘಟನೆಗಳ ಜಂಟಿ ಸಹಯೋಗದಲ್ಲಿ ಶಬರಿಮಲೆ ದೇವಸ್ಥಾನದೊಳಗೆ ಇಬ್ಬರು ಮಹಿಳೆಯರು ದೇವಸ್ಥಾನದ ನಿಯಮದ ವಿರುದ್ಧ ಪ್ರವೇಶಕ್ಕೆ ಅವಕಾಶ ನೀಡಿದ ಕೇರಳ ಸರಕಾರದ ವಿರುದ್ಧ ಪ್ರತಿಭಟನೆಯನ್ನು ಆಯೋಜಿಸಲಾಗಿದೆ.
ಉಡುಪಿ ಜಿಲ್ಲೆಯ ಸಮಸ್ತರೂ ಈ ಪ್ರತಿಭಟನೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story





