Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಲ್ಲಡ್ಕ ಕಬಡ್ಡಿ : ಸೆವೆನ್ ಸ್ಟಾರ್...

ಕಲ್ಲಡ್ಕ ಕಬಡ್ಡಿ : ಸೆವೆನ್ ಸ್ಟಾರ್ ತಂಡಕ್ಕೆ ಪ್ರಶಸ್ತಿ

ವಾರ್ತಾಭಾರತಿವಾರ್ತಾಭಾರತಿ2 Jan 2019 11:28 PM IST
share
ಕಲ್ಲಡ್ಕ ಕಬಡ್ಡಿ : ಸೆವೆನ್ ಸ್ಟಾರ್ ತಂಡಕ್ಕೆ ಪ್ರಶಸ್ತಿ

ವಿಟ್ಲ, ಜ. 2: ಕಲ್ಲಡ್ಕದ ನೇತಾಜಿ ಯುವಕ ಮಂಡಲದ ವತಿಯಿಂದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಸ್ಮರಣಾರ್ಥ 70 ಕೆಜಿ ವಿಭಾಗದ ಜಿಲ್ಲಾ ಮಟ್ಟದ ಮ್ಯಾಟ್ ಕಬಡ್ಡಿ ಪಂದ್ಯಾಟವು ರವಿವಾರ ಕಲ್ಲಡ್ಕ ಸರಕಾರಿ ಶಾಲಾ ಮೈದಾನದಲ್ಲಿ ನಡೆಯಿತು.

ಪಂದ್ಯಾಟವನ್ನು ಪುತ್ತೂರು ವಿವೇಕಾನಂದ ವಿದ್ಯಾವರ್ದಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ್ ಭಟ್ ಉದ್ಘಾಟಿಸಿದರು. ಕಲ್ಲಡ್ಕ ಶ್ರೀರಾಮ ವಿದ್ಯಾ ಕೇಂದ್ರದ ಅಧ್ಯಕ್ಷ ನಾರಾಯಣ ಸೋಮಯಾಜಿ ಅಧ್ಯಕ್ಷತೆ ವಹಿಸಿದ್ದರು.

ಮಾಜಿ ಶಾಸಕರಾದ ಎ. ರುಕ್ಮಯ್ಯ ಪೂಜಾರಿ, ಕೆ. ಪದ್ಮನಾಭ ಕೊಟ್ಟಾರಿ, ಉದ್ಯಮಿ ಸಂತೋಷ್ ಕುಮಾರ್ ಶೆಟ್ಟಿ, ನೇತಾಜಿ ಯುವಕ ಮಂಡಲ ಮಾಜಿ ಅಧ್ಯಕ್ಷ ಲಿಂಗಪ್ಪ ಕರ್ಕೇರಾ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಕಲ್ಲಡ್ಕ ವಲಯ ಮೇಲ್ವಿಚಾರಕಿ ನಳಿನಾಕ್ಷಿ, ಉದ್ಯಮಿ ದಿನೇಶ್ ಶೆಣೈ ಕಲ್ಲಡ್ಕ, ಬಂಟ್ವಾಳ ವಿಧಾನಸಭಾ ಕ್ಷೇತ್ರ ಬಿಜೆಪಿ ಅಧ್ಯಕ್ಷ ಬಿ. ದೇವದಾಸ ಶೆಟ್ಟಿ, ಹಜಾಜ್ ಸಮೂಹ ಸಂಸ್ಥೆಯ ಪಾಲುದಾರ ಹಾಜಿ ಜಿ. ಯೂಸುಫ್ ಗೋಳ್ತಮಜಲು, ಉದ್ಯಮಿ ಜಯಪ್ರಕಾಶ್ ತುಂಬೆ, ಕಲ್ಲಡ್ಕ ಶ್ರೀ ಶಾರದಾ ಸೇವಾ ಪ್ರತಿಷ್ಠಾನದ ಅಧ್ಯಕ್ಷ ನರಸಿಂಹ ಮಡಿವಾಳ, ಬಂಟ್ವಾಳ ತಾಲೂಕು ಅಮೆಚೂರು ಕಬಡ್ಡಿ ಎಸೋಸಿಯೇಶನ್ ಅಧ್ಯಕ್ಷ ಬೇಬಿ ಕುಂದರ್, ಕಾರ್ಯಾಧ್ಯಕ್ಷ ಪುಷ್ಪರಾಜ್ ಚೌಟ, ತೀರ್ಪುಗಾರರ ಮಂಡಳಿಯ ಜಿಲ್ಲಾ ಸಂಚಾಲಕ ಕೃಷ್ಣಪ್ಪ ಬಂಗೇರಾ, ಕಲ್ಲಡ್ಕ ಮ್ಯೂಸಿಯಂ ಮಾಲಕ ಕೆ.ಎಸ್. ಯಾಸೀರ್ ಮೊದಲಾದವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ಕಲ್ಲಡ್ಕ ಶ್ರೀರಾಮ ಭಜನಾ ಮಂದಿರದ ಅಧ್ಯಕ್ಷ ಆರ್. ಚೆನ್ನಪ್ಪ ಕೋಟ್ಯಾನ್ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಅತಿಥಿಗಳಾಗಿ ಬಿಜೆಪಿ ಎಸ್.ಟಿ. ಮೋರ್ಚಾದ ಜಿಲ್ಲಾಧ್ಯಕ್ಷ ದಿನೇಶ್ ಅಮ್ಟೂರು, ಉದ್ಯಮಿ ಜಯಾನಂದ ಆಚಾರ್, ಗೋಳ್ತಮಜಲು ಗ್ರಾ.ಪಂ. ಸದಸ್ಯ ರಾಜೇಶ್ ಕೊಟ್ಟಾರಿ, ವಿಎಚ್‍ಪಿ ಸಂಚಾಲಕ ಕ. ಕೃಷ್ಣಪ್ಪ ಕಲ್ಲಡ್ಕ, ನೇತಾಜಿ ಯುವಕ ಮಂಡಲ ಅಧ್ಯಕ್ಷ ಧನುಷ್, ಕಾರ್ಯದರ್ಶಿ ಅಜಿತ್ ಕುಮಾರ್, ಕ್ರೀಡಾ ಕಾರ್ಯದರ್ಶಿ ಹರೀಶ್ ಸುವರ್ಣ, ರಾಜೀವ್ ಕೊಟ್ಟಾರಿ ಕಲ್ಲಡ್ಕ ಮೊದಲಾದವರು ಭಾಗವಹಿಸಿದ್ದರು.

ಯುವಕ ಮಂಡಲ ಗೌರವಾಧ್ಯಕ್ಷ ನಾಗೇಶ್ ಸ್ವಾಗತಿಸಿ, ಸಂಪತ್ ಕುಮಾರ್ ಕಡೇಶ್ವಾಲ್ಯ ವಂದಿಸಿದರು. ಗೋಪಾಲ ಬಲ್ಯಾಯ ಕಾರ್ಯಕ್ರಮ ನಿರೂಪಿಸಿದರು.

ಸೆವೆನ್ ಸ್ಟಾರ್ ಕಲ್ಪನೆ ತಂಡಕ್ಕೆ ಪ್ರಶಸ್ತಿ

16 ತಂಡಗಳು ಭಾಗವಹಿಸಿದ್ದ ಈ ಕಬಡ್ಡಿ ಪಂದ್ಯಾಟದಲ್ಲಿ ಸೆವೆನ್ ಸ್ಟಾರ್ ಕಲ್ಪನೆ ತಂಡವು ಪ್ರಥಮ, ಎಲ್‍ವಿಎಸ್‍ಎಸ್ ಜಾರಂದಗುಡ್ಡೆ ತಂಡವು ದ್ವಿತೀಯ, ಟಿಕ್ಕಾ ಪಾಯಿಂಟ್ ಕಲ್ಲಡ್ಕ ತಂಡ ತೃತೀಯ ಹಾಗೂ ಫ್ರೆಂಡ್ಸ್ ಸುದೇಕಾರು ತಂಡವು ಚತುರ್ಥ ಸ್ಥಾನವನ್ನು ಪಡೆದುಕೊಂಡಿತು.

ಮಾರುತಿ ಫ್ರೆಂಡ್ಸ್ ಕೋಡಪದವು ತಂಡವು ಶಿಸ್ತುಬದ್ದ ತಂಡ ಪ್ರಶಸ್ತಿಯನ್ನು ಪಡೆದುಕೊಂಡಿತು. ಸೆವೆನ್ ಸ್ಟಾರ್ ತಂಡದ ನವಾಝ್ ಉತ್ತಮ ಹಿಡಿತಗಾರ, ರಶೀದ್ ಆಲ್‍ರೌಂಡರ್, ಜಾರಂದಗುಡ್ಡೆ ತಂಡದ ರಂಜಿತ್ ಉತ್ತಮ ದಾಳಿಗಾರ ಹಾಗೂ ಪೂರ್ಣೇಶ್ ಮೂವ್‍ಮೆಂಟ್ ಆಫ್ ದಿ ಪ್ಲೇಯರ್ ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X