ಸಮಾಜದಲ್ಲಿ ಒಳ್ಳೆಯ ಕೆಲಸ ಮಾಡುವವರನ್ನು ಗುರುತಿಸುವ ಕೆಲಸ ಆಗಬೇಕಾಗಿದೆ: ಎಸ್.ಐ. ಅಜಯ್ ಗೌಡ

ವಿಟ್ಲ, ಜ. 2 : ಸಮಾಜದಲ್ಲಿ ಒಳ್ಳೆಯ ಕೆಲಸ ಮಾಡುವವರನ್ನು ಗುರುತಿಸುವ ಕೆಲಸ ಆಗಬೇಕಾಗಿದೆ ಎಂದು ಪುತ್ತೂರು ನಗರ ಪೊಲೀಸ್ ಠಾಣಾಧಿಕಾರಿ ಅಜಯ್ ಗೌಡ ಹೇಳಿದರು.
ಪುತ್ತೂರು-ಮರೀಲ್‍ನ ಇಎಸ್‍ಆರ್ ಪ್ರೆಸಿಡೆನ್ಸಿ ಸ್ಕೂಲ್ ಇದರ ವಾರ್ಷಿಕೋತ್ಸವ ಹಾಗೂ ಮಕ್ಕಳ ಸಾಂಸ್ಕøತಿಕ ಕಲರವ-2018 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಮೌಲ್ಯಾಧಾರಿತ ಶಿಕ್ಷಣ ನೀಡುವಂತಹ ಜವಾಬ್ದಾರಿಯನ್ನು ನಿಭಾಯಿಸುತ್ತಿರುವ ಇಎಸ್‍ಆರ್ ಶಿಕ್ಷಣ ಸಂಸ್ಥೆಯ ಕಾರ್ಯ ಶ್ಲಾಘನೀಯ ಎಂದರು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಕೆಪಿಸಿಸಿ ಕಾರ್ಮಿಕ ವಿಭಾಗದ ರಾಜ್ಯ ಕಾರ್ಯದರ್ಶಿ ಹನೀಫ್ ಬಗ್ಗುಮೂಲೆ ಮಾತನಾಡಿ ಕೇರಳದ ಮರ್ಕಝ್, ಬೆಂಗಳೂರಿನ ಅಲ್-ಅಮೀನ್ ಕಾನೂನು ಪದವಿ ಕಾಲೇಜಿನಂತೆಯೇ ಪುತ್ತೂರಿನಲ್ಲಿಯೂ ಇಎಸ್‍ಆರ್ ಕಾನೂನು ಪದವಿ ಕಾಲೇಜು ಆರಂಭಗೊಂಡು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಲ್ಕನೇ ಕಾನೂನು ಪದವಿ ಕಾಲೇಜು ಸ್ಥಾಪನೆಯಾಗಲಿ ಎಂದರು.
ನೋಟರಿ-ನ್ಯಾಯವಾದಿ ನೂರುದ್ದೀನ್ ಸಾಲ್ಮರ ಮಾತನಾಡಿ ಮಕ್ಕಳಿಗೆ ಆಂಗ್ಲ ಭಾಷಾ ಶಿಕ್ಷಣವನ್ನು ನೀಡಿ, ಆದರೆ ಅವರು ಪಾಶ್ಚಾತ್ಯ ಸಂಸ್ಕೃತಿಯತ್ತ ಮಾರು ಹೋಗದಂತೆ ಪೋಷಕರು ಜಾಗೃತೆ ವಹಿಸಿಕೊಳ್ಳಬೇಕು ಎಂದರು.
ವಿದ್ಯಾಕೀರ್ತಿ ಎಜ್ಯುಕೇಶನ್ ಆಂಡ್ ಚಾರಿಟೇಬಲ್ ಟ್ರಸ್ಟ್‍ನ ಚೆಯರ್‍ಮೆನ್ ವಿ.ಕೆ. ಝಾಕಿರ್ ಹುಸೈನ್ ಅಧ್ಯಕ್ಷತೆ ವಹಿಸಿದ್ದರು. ಕೂರ್ನಡ್ಕ ಜುಮಾ ಮಸೀದಿ ಅಧ್ಯಕ್ಷ ಅಬೂಬಕರ್ ಪಿಸಿಎನ್ ಧ್ವಜಾರೋಹಣಗೈದರು. ಪುತ್ತೂರು ನಗರಸಭಾ ಸದಸ್ಯ ಯೂಸುಫ್ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿದರು.
ಹಿರಿಯ ಟಿವಿ ಪತ್ರಕರ್ತ ಕೆ.ಎ. ಹಮೀದ್, ಮುಕ್ವೆ ಜುಮಾ ಮಸೀದಿ ಮಾಜಿ ಅಧ್ಯಕ್ಷ ಸಿಬಾರಾ ಇಬ್ರಾಹಿಂ ಹಾಜಿ, ನಗರಸಭಾ ಮಾಜಿ ಸದಸ್ಯ ರಾಜೇಶ್ ಬನ್ನೂರು, ವಿದ್ಯಾಕೀರ್ತಿ ಎಜ್ಯುಕೇಶನ್ ಆಂಡ್ ಚಾರಿಟೇಬಲ್ ಟ್ರಸ್ಟ್ ಸದಸ್ಯ ವಿ.ಕೆ. ಸಲೀಂ ಬಪ್ಪಳಿಗೆ, ಬಶೀರ್ ಕೂರ್ನಡ್ಕ, ಶಾಲಾ ವಿದ್ಯಾರ್ಥಿ ನಾಯಕ ಝೀಶಾನ್ ಇಬ್ರಾಹಿಂ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ಶಾಲಾ ಮುಖ್ಯ ಶಿಕ್ಷಕಿ ರೇಖಾ ನಾಗೇಂದ್ರ ಶಾಲಾ ವರದಿ ವಾಚಿಸಿದರು. ಸಹ ಶಿಕ್ಷಕಿಯರಾದ ಆಬಿದಾ, ಸುಶಾಂತಿ,ನವ್ಯಶ್ರೀ, ಸಾಂಸ್ಕøತಿಕ ಕಾರ್ಯಕ್ರಮ ನಡೆಸಿಕೊಟ್ಟರು. ಇಝಾ ರಹಮತ್ ಸ್ವಾಗತಿಸಿ, ವಿದ್ಯಾಕೀರ್ತಿ ಎಜ್ಯುಕೇಶನ್ ಆಂಡ್ ಚಾರಿಟೇಬಲ್ ಟ್ರಸ್ಟ್ ಸದಸ್ಯ ವಿ.ಕೆ. ಶರೀಫ್ ಬಪ್ಪಳಿಗೆ ವಂದಿಸಿದರು. ಪತ್ರಕರ್ತ ಲತೀಫ್ ನೇರಳಕಟ್ಟೆ ಕಾರ್ಯಕ್ರಮ ನಿರೂಪಿಸಿದರು.