Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ರೋನಿತ್ ದಾಳಿಗೆ ನಡುಗಿದ ಛತ್ತೀಸ್‌ಗಡ:...

ರೋನಿತ್ ದಾಳಿಗೆ ನಡುಗಿದ ಛತ್ತೀಸ್‌ಗಡ: ಕರ್ನಾಟಕಕ್ಕೆ 198 ರನ್ ಗಳ ಭರ್ಜರಿ ಜಯ

ರಣಜಿ ಟ್ರೋಫಿ

ವಾರ್ತಾಭಾರತಿವಾರ್ತಾಭಾರತಿ2 Jan 2019 11:51 PM IST
share
ರೋನಿತ್ ದಾಳಿಗೆ ನಡುಗಿದ ಛತ್ತೀಸ್‌ಗಡ: ಕರ್ನಾಟಕಕ್ಕೆ 198 ರನ್ ಗಳ ಭರ್ಜರಿ ಜಯ

► ನಾಯಕ ಪಾಂಡೆ ಅಜೇಯ ಶತಕ

► 9 ವಿಕೆಟ್ ಪಡೆದ ಮೋರೆಗೆ ಪಂದ್ಯಶ್ರೇಷ್ಠ ಗೌರವ

ಆಲೂರು, ಜ.2: ಮನೀಷ್ ಪಾಂಡೆ ಬಳಗ ಕರುನಾಡ ಕ್ರಿಕೆಟ್ ಅಭಿಮಾನಿಗಳ ನಿರೀಕ್ಷೆ ಹುಸಿಗೊಳಿಸಲಿಲ್ಲ. ಚಳಿಯ ವಾತಾವರಣದಲ್ಲೂ ಛತ್ತೀಸ್‌ಗಡಕ್ಕೆ ರೋನಿತ್ ಮೋರೆ ಹಾಗೂ ಶ್ರೇಯಸ್ ಗೋಪಾಲ್ ಬಿಸಿಗಾಳಿಯಾಗಿ ಪರಿಣಮಿಸಿದರು. ಪಾಂಡೆ ಅಜೇಯ ಶತಕ ಬಾರಿಸಿ ನಾಯಕತ್ವಕ್ಕೆ ತಕ್ಕ ಆಟವಾಡಿದರು. ಅಂತಿಮವಾಗಿ ಕರ್ನಾಟಕ ತಂಡ ಛತ್ತೀಸ್‌ಗಡ ವಿರುದ್ಧದ ಪಂದ್ಯದಲ್ಲಿ 198 ರನ್‌ಗಳ ಭರ್ಜರಿ ಜಯ ಸಾಧಿಸಿ ಕ್ವಾರ್ಟರ್‌ಫೈನಲ್‌ನತ್ತ ದಿಟ್ಟ ಹೆಜ್ಜೆ ಇಟ್ಟಿದೆ. ಈ ಗೆಲುವಿನಿಂದ 6 ಅಂಕ ಗಳಿಸಿರುವ ಕರ್ನಾಟಕ, ‘ಎ’ ಗುಂಪಿನ 7 ಪಂದ್ಯಗಳಲ್ಲಿ ಒಟ್ಟು 27 ಅಂಕ ಗಳಿಸಿ ಎರಡನೇ ಸ್ಥಾನಕ್ಕೆ ಲಗ್ಗೆ ಇಟ್ಟಿದೆ. ಕರ್ನಾಟಕ ತಲಾ 3ರಲ್ಲಿ ಜಯ, ಡ್ರಾ ಹಾಗೂ 1ರಲ್ಲಿ ಸೋತಿದೆ.

ಇಲ್ಲಿ ನಡೆದ ರಣಜಿ ಟ್ರೋಫಿಯ ‘ಎ’ ಗುಂಪಿನ ಪಂದ್ಯದ 2ನೇ ಇನಿಂಗ್ಸ್ ನಲ್ಲಿ ಮಂಗಳವಾರ 113 ರನ್ ಗಳಿಸಿ 4 ವಿಕೆಟ್ ಕಳೆದುಕೊಂಡಿದ್ದ ಕರ್ನಾಟಕ ಬುಧವಾರ ತನ್ನ ನಾಲ್ಕನೇ ದಿನದಾಟ ಆರಂಭಿಸಿತು. 57 ರನ್‌ಗಳಿಸಿ ಅಜೇಯರಾಗುಳಿದಿದ್ದ ನಾಯಕ ಪಾಂಡೆ ಈ ದಿನ ಭರ್ಜರಿ ಶತಕ (ಅಜೇಯ 102) ಗಳಿಸಿದರು. ಆದರೆ ಶ್ರೇಯಸ್ ಗೋಪಾಲ್ ಮಂಗಳವಾರದ ಮೊತ್ತಕ್ಕೆ ಕೇವಲ 1ರನ್(22) ಸೇರಿಸಿ ರನೌಟ್ ಆಗಿ ಪೆವಿಲಿಯನ್ ಸೇರಿಕೊಂಡರು. ಕೆ.ಗೌತಮ್ (20) ಹಾಗೂ ವಿನಯ್(7)ಅವರು ಪಾಂಡೆಗೆ ಅಲ್ಪ ಸಾಥ್ ನೀಡಿದರು. ಇವರಿಬ್ಬರ ವಿಕೆಟ್ ಪತನದ ನಂತರ ಬಂದ ಬೌಲರ್ ಮಿಥುನ್ ಅಕ್ಷರಶಃ ಅಬ್ಬರಿಸಿದರು. ಟಿ20 ಪಂದ್ಯದ ರೀತಿಯಲ್ಲಿ ಬ್ಯಾಟ್ ಬೀಸಿದ ಅವರು, 17 ಎಸೆತಗಳನ್ನು ಎದುರಿಸಿ 3 ಬೌಂಡರಿ ಹಾಗೂ 2 ಸಿಕ್ಸರ್‌ಗಳ ನೆರವಿನಿಂದ 33 ರನ್ ಕಲೆ ಹಾಕಿದರು. ಛತ್ತೀಸ್‌ಗಡ ತಂಡಕ್ಕೆ ಶೀಘ್ರ ಬ್ಯಾಟಿಂಗ್ ನೀಡಿ ಆಲೌಟ್ ಮಾಡುವ ಉದ್ದೇಶದಿಂದ ಕರ್ನಾಟಕ 7 ವಿಕೆಟ್ ಕಳೆದುಕೊಂಡು 219 ರನ್ ಗಳಿಸಿದ ವೇಳೆ ಇನಿಂಗ್ಸ್ ಡಿಕ್ಲೇರ್ ಮಾಡಿಕೊಂಡಿತು.

ಛತ್ತೀಸ್‌ಗಡ ಪರ ಪಂಕಜ್‌ಕುಮಾರ್ 4 ವಿಕೆಟ್ ಉರುಳಿಸಿ ಯಶಸ್ವಿ ಬೌಲರ್ ಎನಿಸಿದರು. 355 ರನ್‌ಗಳ ಗೆಲುವಿನ ಗುರಿ ಬೆಂಬತ್ತಿದ ಪ್ರವಾಸಿ ಬಳಗಕ್ಕೆ ವೇಗಿ ಮೋರೆ(35ಕ್ಕೆ4) ಹಾಗೂ ಸ್ಪಿನ್ನರ್ ಗೋಪಾಲ್(44ಕ್ಕೆ4) ತಲಾ 4 ವಿಕೆಟ್ ಪಡೆದು ಮರ್ಮಾಘಾತ ನೀಡಿದರು. ಛತ್ತೀಸ್‌ಗಡದ ಆರಂಭಿಕ ದಾಂಡಿಗ ಧಲಿವಾಲ್ ಅರ್ಧಶತಕ (61) ಹಾಗೂ ಅಮನ್‌ದೀಪ್ ಖರೆ(35) ಉತ್ತಮ ಮೊತ್ತ ದಾಖಲಿಸಿ ಪಂದ್ಯವನ್ನು ಡ್ರಾಗೊಳಿಸುವ ಯತ್ನ ಮಾಡಿದರಾದರೂ ಪಾಂಡೆ ಪಡೆ ಅದಕ್ಕೆ ಅವಕಾಶ ನೀಡಲಿಲ್ಲ. ಅಂತಿಮವಾಗಿ ಛತ್ತೀಸ್‌ಗಡ ತಂಡ 156 ರನ್ ಗಳಿಸಿ ಗಂಟುಮೂಟೆ ಕಟ್ಟಿತು. ಎರಡೂ ಇನಿಂಗ್ಸ್ ಸೇರಿ 9 ವಿಕೆಟ್ ಉರುಳಿಸಿದ ಮೋರೆಗೆ ಅರ್ಹವಾಗಿಯೇ ಪಂದ್ಯಶ್ರೇಷ್ಠ ಗೌರವ ಒಲಿಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X