Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. 'ಮೆಲ್ಕಾರ್ ಮಹಿಳಾ ಪದವಿ ಪೂರ್ವ - ಪದವಿ...

'ಮೆಲ್ಕಾರ್ ಮಹಿಳಾ ಪದವಿ ಪೂರ್ವ - ಪದವಿ ಕಾಲೇಜಿ'ನ ದಶಮಾನೋತ್ಸವ ಸಂಭ್ರಮಾಚರಣೆಗೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ3 Jan 2019 2:32 PM IST
share
ಮೆಲ್ಕಾರ್ ಮಹಿಳಾ ಪದವಿ ಪೂರ್ವ - ಪದವಿ ಕಾಲೇಜಿನ ದಶಮಾನೋತ್ಸವ ಸಂಭ್ರಮಾಚರಣೆಗೆ ಚಾಲನೆ

ಬಂಟ್ವಾಳ, ಜ.3: ಮಂಗಳೂರು ಎಜುಕೇಶನ್ ಎನ್‌ಹ್ಯಾನ್ಸ್ ಮೆಂಟ್ ಟ್ರಸ್ಟ್‌ನಡಿ ಸಜೀಪ ಮುನ್ನೂರಿನ ಮಾರ್ನಬೈಲ್‌ನಲ್ಲಿ ಕಾರ್ಯಾಚರಿಸುತ್ತಿರುವ 'ಮೆಲ್ಕಾರ್ ಮಹಿಳಾ ಪದವಿ ಪೂರ್ವ ಹಾಗೂ ಪದವಿ ಕಾಲೇಜಿ'ನ ದಶಮಾನೋತ್ಸವದ ಉದ್ಘಾಟನೆ ಹಾಗೂ ಮೊದಲ ದಿನದ ಕಾರ್ಯಕ್ರಮ ಗುರುವಾರ ಕಾಲೇಜಿನ ವಠಾರದಲ್ಲಿ ನಡೆಯಿತು.

ಶಾಸಕ ರಾಜೇಶ್ ನಾಯ್ಕ್ ಗಿಡಕ್ಕೆ ನೀರುಣಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಗ್ರಾಮೀಣ ಮಟ್ಟದ ಹೆಣ್ಣು ಮಕ್ಕಳಿಗೆ ಸ್ವತಂತ್ರ ಶಿಕ್ಷಣ ನೀಡುವುದರೊಂದಿಗೆ ಶೈಕ್ಷಣಿಕವಾಗಿ ಉತ್ತಮ ಸಾಧನೆ ಮಾಡಿರುವ ಈ ವಿದ್ಯಾಸಂಸ್ಥೆಯ ಬಗ್ಗೆ ತುಂಬಾ ಸಂತೋಷವಾಗುತ್ತಿದೆ. ಗ್ರಾಮೀಣ ಪ್ರದೇಶದಲ್ಲಿರುವ ಈ ಸಂಸ್ಥೆಯ ಬಗ್ಗೆ ತಿಳಿದುಕೊಳ್ಳಲು ತಡವಾಯಿತು ಎಂದು ಬೇಸರ ವ್ಯಕ್ತಪಡಿಸಿದರು.

ಶಿಕ್ಷಣವು ಕೇವಲ ದುಡಿಯುವ ಸಾಧನವಾಗದೇ ಜ್ಞಾನ, ಸಂಸ್ಕಾರ ಬೆಳೆಸುವ ಹಾಗೂ ಬೆಸೆಯುವ ಕೇಂದ್ರವಾಗಬೇಕು. ಸಮಾಜದಲ್ಲಿ ವಿಫಲ ಅವಕಾಶದೊಂದಿಗೆ ಸಾಕಷ್ಟು ಪೈಪೋಟಿಯು ಕೂಡಾ ಇದೆ. ಇದರೊಂದಿಗೆ ಉತ್ತಮ ಸಮಾಜಕ್ಕಾಗಿ ಕೊಡುಗೆ ನೀಡುವಲ್ಲಿ ಶ್ರಮಿಸಬೇಕಾಗಿದೆ ಎಂದ ಅವರು, ಶಾಸಕನಾಗಿ ಈ ವಿದ್ಯಾಸಂಸ್ಥೆಯ ಅಭಿವೃದ್ಧಿಗಾಗಿ ಸಹಕಾರ ನೀಡುತ್ತೇನೆ ಎಂದರು.

ಕಣ್ಣೂರು ಮತ್ತು ಕ್ಯಾಲಿಕಟ್ ವಿಶ್ವವಿದ್ಯಾನಿಲಯದ ವಿಶ್ರಾಂತ ಉಪಕುಲಪತಿ ಪ್ರೊ.ಎಂ.ಅಬ್ದುಲ್ ರಹಿಮಾನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಶ್ರದ್ಧೆ, ಶ್ರಮ, ಶಿಸ್ತು, ಸಾಧಿಸುವ ಛಲ ಇದ್ದರೆ ಮಾತ್ರ ಗುರಿ ತಲುಪಲು ಸಾಧ್ಯ. ಇದಕ್ಕಾಗಿ ಓದುವ ಹವ್ಯಾಸವನ್ನು ಹೆಚ್ಚೆಚ್ಚು ರೂಢಿಸಿಕೊಳ್ಳಬೇಕು ಎಂದರು.

ಆಧುನಿಕ ಯುಗದಲ್ಲಿ ತಂತ್ರಜ್ಞಾನದಿಂದ ಅಂಗೈಯಲ್ಲಿ ಎಲ್ಲ ಮಾಹಿತಿ ಲಭ್ಯವಾಗುತ್ತಿದೆ. ಇದು ಒಂದು ಸಾಧನ ಮಾತ್ರ. ಆದರೆ, ಹೆಚ್ಚೆಚ್ಚು ಪುಸ್ತಕ ಓದುವುದರಿಂದ ಜ್ಞಾನ ವೃದ್ಧಿಯ ಜೊತೆಗೆ ಸಂಶೋಧನಾ ಮನೋಭಾವ ಬೆಳೆಯಲು ಸಾಧ್ಯ ಎಂದ ಅವರು, ಬಡತನದಿಂದ ಅದೆಷ್ಟು ಗ್ರಾಮೀಣ ಮಕ್ಕಳು ಶಿಕ್ಷಣದಿಂದ ವಂಚಿರಾಗುತ್ತಿದ್ದಾರೆ. ಈ ವಿಚಾರದಲ್ಲಿ ಹೆಣ್ಣು ಮಕ್ಕಳಿಗೋಸ್ಕರ ಎಸ್.ಎಂ.ರಶೀದ್ ಹಾಜಿ ವಿದ್ಯಾ ಸಂಸ್ಥೆಯನ್ನು ಸ್ಥಾಪಿಸಿರುವುದು ಅಭಿನಂದನೀಯ ಎಂದರು.

ಮಂಗಳೂರು ವಿಶ್ವವಿದ್ಯಾನಿಲಯದ ಉಪಕುಲಪತಿ ಪ್ರೊ.ಈಶ್ವರ್ಮು ಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿ, ಕಳೆದ 10 ವರ್ಷಗಳಿಂದ ಗ್ರಾಮೀಣ ಹೆಣ್ಣು ಮಕ್ಕಳನ್ನು ಗುರಿಯಾಗಿಸಿಕೊಂಡು ಗುಣಮಟ್ಟ ಹಾಗೂ ಮೌಲ್ಯಯುತ ಶಿಕ್ಷಣವನ್ನು ನೀಡುವುದರೊಂದಿಗೆ ವಿದ್ಯಾರ್ಥಿನಿಯರ ಸಂಖ್ಯೆ ಹೆಚ್ಚಿಸುತ್ತಾ ಬಂದಿದ್ದು, ಈ ಸಂಸ್ಥೆಯು ಮುಂದೆಯು ಶೈಕ್ಷಣಿಕವಾಗಿ ಗುರುತಿಸಿಕೊಳ್ಳಲಿ ಎಂದು ಹಾರೈಸಿದರು.

ವೇದಿಕೆಯಲ್ಲಿ ಎಕೆ ಗ್ರೂಪ್ ಆಫ್ ಕಂಪೆನಿಯ ಎಂ.ಡಿ. ಎ.ಕೆ.ನಿಯಾಝ್, ಅಬ್ದುಲ್ ಸಮದ್ ಸಿಎ, ಅಬ್ದುಲ್ ಅಝೀಝ್ ಅಡ್ವಕೇಟ್, ರಿಫಾಝ್ ಅಹ್ಮದ್ ಉಪಸ್ಥಿತರಿದ್ದರು.

ಮಂಗಳೂರು ಎಜುಕೇಶನ್ ಎನ್‌ಹ್ಯಾನ್ಸ್ ಮೆಂಟ್ ಟ್ರಸ್ಟ್ ಅಧ್ಯಕ್ಷ ಎಸ್.ಎಂ.ರಶೀದ್ ಹಾಜಿ ಸಂಸ್ಥೆ ನಡೆದು ಬಂದ ಹಾದಿಯ ಬಗ್ಗೆ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು.

ಕಾಲೇಜು ಪ್ರಾಂಶುಪಾಲ ಅಬ್ದುಲ್ಲತೀಫ್ ವಾರ್ಷಿಕ ವರದಿ ಮಂಡಿಸಿದರು. ಉಪ ಪ್ರಾಂಶುಪಾಲೆ ಸುನೀತಾ ಬಹುಮಾನ ವಿಜೇತರ ಪಟ್ಟಿ ವಾಚಿಸಿದರು. ಇದೇ ವೇಳೆ ಮುಖ್ಯ ಅತಿಥಿಗಳಿಗೆ ದಶಮಾನೋತ್ಸವದ ಸ್ಮರಣಿಕೆ ನೀಡಿ ಗೌರವಿಸಲಾಯಿತು. ಕಳೆದ ಸಾಲಿನಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಲಾಯಿತು.

ವಿದ್ಯಾರ್ಥಿಗಳಾದ ಫಝೀನಾ, ತಂಶೀರಾ ಕಿರಾಅತ್ ಪಠಿಸಿದರು. ಲುತ್ಫಾ ವಂದಿಸಿದರು. ಫಾತಿಮಾ ಸುಹಾನ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X