ಹನೂರು: ವಿದ್ಯಾರ್ಥಿಗಳಿಂದ ಬಸ್ ತಡೆದು ಪ್ರತಿಭಟನೆ

ಹನೂರು,ಜ.3: ನಿಗದಿತ ಸಮಯಕ್ಕೆ ಸರ್ಕಾರಿ ಬಸ್‍ಗಳು ಗ್ರಾಮಗಳಿಗೆ ಆಗಮಿಸುತ್ತಿಲ್ಲ. ಇದರಿಂದ ಶಾಲಾ ಕಾಲೇಜುಗಳಿಗೆ ತೆರಳಲು ತೊಂದರೆಯಾಗುತ್ತಿದೆ ಎಂದು ವಿದ್ಯಾರ್ಥಿಗಳು ಕೆಲ ಕಾಲ ಕೆಎಸ್‍ಆರ್‍ಟಿಸಿ ಬಸ್‍ಗಳನ್ನು ತಡೆದು ಪ್ರತಿಭಟನೆ ಮಾಡಿದ ಪ್ರಸಂಗ ಹನೂರು ತಾಲೂಕಿನ ಅಜ್ಜಿಪುರ ಗ್ರಾಮದಲ್ಲಿ ನಡೆದಿದೆ.
ಹನೂರು ತಾಲೂಕಿನ ಅಜ್ಜಿಪುರ ಗ್ರಾಮದ ಬಸ್ ನಿಲ್ದಾಣದಲ್ಲಿ ಗುರುವಾರ ಮುಂಜಾನೆ ನೂರಾರು ವಿದ್ಯಾರ್ಥಿಗಳು ಜಮಾಯಿಸಿ ಕಳೆದ ಹಲವು ದಿನಗಳಿಂದ ಸಮಯಕ್ಕೆ ಸರಿಯಾಗಿ ಕೆಎಸ್‍ಆರ್‍ಟಿಸಿ ಬಸ್‍ಗಳು ಬಾರದಿರುವುದರಿಂದ ಶಾಲಾ ಕಾಲೇಜುಗಳಿಗೆ ತೆರಳಲು ತೊಂದರೆ ಆಗುತ್ತಿದ್ದು, ಅಲ್ಲದೇ, ಮಲೈಮಹದೇಶ್ವರಬೆಟ್ಟದಿಂದ ಆಗಮಿಸುವ ಸರ್ಕಾರಿ ಬಸ್‍ಗಳು ಅನ್ಯಮಾರ್ಗವಾಗಿ ಹೋಗುವುದರಿಂದ ನಾವು ಸಮಯಕ್ಕೆ ತರಗತಿಗಳಿಗೆ ತೆರಳಲ ತೊಂದರೆ ಆಗುತ್ತಿದೆ ಎಂದು ದೂರಿದರು.
ಈ ವೇಳೆ ಸ್ಥಳಕ್ಕೆ ಆಗಮಿಸಿದ ಹನೂರು ಸಾರಿಗೆ ಅಧಿಕಾರಿ ಸತೀಶ್, ಮುಂದಿನ ದಿನಗಳಲ್ಲಿ ಸಕಾಲಕ್ಕೆ ಸರಿಯಾಗಿ ಗ್ರಾಮಗಳಿಗೆ ಬಸ್‍ಗಳನ್ನು ಒದಗಿಸಲಾಗುವುದು ಎಂದು ಭರವಸೆ ನೀಡಿದರು.
Next Story





