ಶಬರಿಮಲೆಗೆ ಮಹಿಳೆಯರ ಪ್ರವೇಶದ ವಿರುದ್ಧ ಪ್ರತಿಭಟನೆ

ಮಂಗಳೂರು, ಜ.3: ಶಬರಿಮಲೆಯೊಳಗೆ ಮಹಿಳೆಯರ ಪ್ರವೇಶ ಖಂಡಿಸಿ ಮತ್ತು ಶಬರಿಮಲೆ ಕ್ಷೇತ್ರದ ಪ್ರಾವಿತ್ರ್ಯತೆ ಉಳಿಸಬೇಕು ಎಂದು ಒತ್ತಾಯಿಸಿ ಶಬರಿಮಲೆ ಕ್ಷೇತ್ರ ಸಂರಕ್ಷಣಾ ಸಮಿತಿಯ ವತಿಯಿಂದ ಗುರುವಾರ ನಗರದ ಹಂಪನಕಟ್ಟೆಯ ಗಾಂಧಿ ಪಾರ್ಕ್ ಬಳಿ ಪ್ರತಿಭಟನೆ ನಡೆಯಿತು.
ಜಿಪಂ ಉಪಾಧ್ಯಕ್ಷೆ ಕಸ್ತೂರಿ ಪಂಜ, ವಿಶ್ವ ಹಿಂದೂ ಪರಿಷತ್ ವಿಭಾಗ ಕಾರ್ಯದರ್ಶಿ ಶರಣ್ ಪಂಪ್‌ವೆಲ್, ವಿಶ್ವನಾಥ ಗುರುಸ್ವಾಮಿ, ಹಿಂಜಾವೇ ಮುಖಂಡ ಕಿಶೋರ್‌ಕುಮಾರ್ ಮಾತನಾಡಿದರು.
ಈ ಸಂದರ್ಭ ಶಾಸಕ ಡಾ.ವೈ. ಭರತ್ ಶೆಟ್ಟಿ, ಮಾಜಿ ವಿಧಾನ ಪರಿಷತ್ ಸದಸ್ಯರಾದ ಕೆ. ಮೋನಪ್ಪ ಭಂಡಾರಿ, ಗಣೇಶ್ ಕಾರ್ಣಿಕ್, ಶಿವಾನಂದ ಮೆಂಡನ್, ಶರತ್ ಕೆಂಬಾರು ಮತ್ತಿತರರು ಉಪಸ್ಥಿತರಿದ್ದರು.
Next Story





