Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ‘500 ಮಂದಿ ಆಹಾರದ ಬಿಲ್ ಪಡೆಯುತ್ತಿರುವ...

‘500 ಮಂದಿ ಆಹಾರದ ಬಿಲ್ ಪಡೆಯುತ್ತಿರುವ ಗುತ್ತಿಗೆದಾರರು’

ಇಂದಿರಾ ಕ್ಯಾಂಟೀನ್‌ನಲ್ಲಿ ಅವ್ಯವಹಾರ: ಆರೋಪ

ವಾರ್ತಾಭಾರತಿವಾರ್ತಾಭಾರತಿ3 Jan 2019 8:41 PM IST
share
‘500 ಮಂದಿ ಆಹಾರದ ಬಿಲ್ ಪಡೆಯುತ್ತಿರುವ ಗುತ್ತಿಗೆದಾರರು’

ಮಂಗಳೂರು, ಜ.3: ನಗರದ ಐದು ಇಂದಿರಾ ಕ್ಯಾಂಟೀನ್‌ಗಳಿಗೆ ಮನಪಾ ಮತ್ತು ಕಾರ್ಮಿಕ ಇಲಾಖೆಯಿಂದ ಬಿಲ್ ಪಾವತಿಯಲ್ಲಿ ಅವ್ಯವಹಾರ ನಡೆಯುತ್ತಿದೆ. ಪ್ರತಿ ಇಂದಿರಾ ಕ್ಯಾಂಟೀನ್‌ಗೆ ಪ್ರತಿದಿನ 150 ಮಂದಿಯಷ್ಟೇ ಗ್ರಾಹಕರು ಆಗಮಿಸುತ್ತಿದ್ದರೂ, 500 ಮಂದಿ ಆಹಾರ ಸೇವನೆ ಮಾಡಿದ್ದಾರೆ ಎಂದು ಗುತ್ತಿಗೆದಾರರು ಬಿಲ್ ಪಡೆಯುತ್ತಿದ್ದಾರೆ ಎಂದು ಮಂಗಳೂರು ಮಹಾನಗರ ಪಾಲಿಕೆ ಪ್ರತಿಪಕ್ಷ ನಾಯಕ ಪ್ರೇಮಾನಂದ ಶೆಟ್ಟಿ ಆರೋಪಿಸಿದ್ದಾರೆ.

ಇಂದಿರಾ ಕ್ಯಾಂಟೀನ್‌ನಲ್ಲಿ ಬೆಳಗ್ಗಿನ ತಿಂಡಿಗೆ 5 ರೂ., ಮಧ್ಯಾಹ್ನ, ರಾತ್ರಿ ಊಟಕ್ಕೆ 10 ರೂ. ನಿಗದಿಪಡಿಸಲಾಗಿದೆ. ಸ್ಥಳೀಯ ಸಂಸ್ಥೆ ಮತ್ತು ಕಾರ್ಮಿಕ ಇಲಾಖೆಯಿಂದ ಒಂದು ತಿಂಡಿಗೆ ಏಳು ರೂ., ಊಟಕ್ಕೆ 14 ರೂ. ಗುತ್ತಿಗೆದಾರರಿಗೆ ಪಾವತಿಯಾಗುತ್ತಿದೆ. ಈ ಪೈಕಿ ನಗರಪಾಲಿಕೆ ಶೇ.70ರಷ್ಟು ಹಣ, ಕಾರ್ಮಿಕ ಇಲಾಖೆ ಶೇ.30ರಷ್ಟು ಹಣ ಭರಿಸುತ್ತಿದೆ. ಇಂದಿರಾ ಕ್ಯಾಂಟೀನ್‌ನಲ್ಲಿ ಪ್ರತಿದಿನ 100ರಿಂದ 150 ಮಂದಿಯಷ್ಟೇ ತಿಂಡಿ, ಊಟಕ್ಕೆ ಆಗಮಿಸುತ್ತಿದ್ದಾರೆ. ಆದರೆ, ಗುತ್ತಿಗೆದಾರರಿಗೆ ಪ್ರತಿದಿನದ 500 ಮಂದಿಯ ಬಿಲ್ ಮೊತ್ತ ಪಾವತಿಯಾಗುತ್ತಿದೆ. ಈ ಬಗ್ಗೆ ಮೇಯರ್ ಮತ್ತು ಅಧಿಕಾರಿಗಳು ಉತ್ತರಿಸಬೇಕು ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಅವರು ಆಗ್ರಹಿಸಿದರು.

ಸಾಯಿ ಹಾಸ್ಪಿಟಾಲಿಟಿ ಎಂಬ ಸಂಸ್ಥೆ ಇಂದಿರಾ ಕ್ಯಾಂಟೀನ್ ಗುತ್ತಿಗೆ ವಹಿಸಿಕೊಂಡಿದೆ. ಈ ಸಂಸ್ಥೆಗೆ ನೀಡುವ ಬಿಲ್ ಮಹಾನಗರ ಪಾಲಿಕೆಯಲ್ಲಿ ತಯಾರಾಗುತ್ತಿದೆ. ಇಂದಿರಾ ಕ್ಯಾಂಟೀನ್‌ಗೆ ಪ್ರತಿದಿನ ಎಷ್ಟು ಮಂದಿ ಆಗಮಿಸುತ್ತಿದ್ದಾರೆ ಎಂಬುದಕ್ಕೆ ಯಾವ ರೀತಿಯಲ್ಲಿ ನಿಗಾ ವಹಿಸಲಾಗಿದೆ ಎಂಬುದನ್ನು ಮೇಯರ್ ಸ್ಪಷ್ಟಪಡಿಸಬೇಕು.

ಇಂದಿರಾ ಕ್ಯಾಂಟೀನ್ ಕಟ್ಟಡದ ವಿದ್ಯುತ್ ಸಂಪರ್ಕ, ಚರಂಡಿ, ಆವರಣ ಗೋಡೆ, ಇಂಟರ್‌ಲಾಕ್ ಅಳವಡಿಕೆಗೂ ಮನಪಾದಿಂದ 80 ಲಕ್ಷ ರೂ. ವೆಚ್ಚ ಮಾಡಲಾಗಿದೆ. ಆದರೆ, ಮನಪಾ ಅನುದಾನವನ್ನು ಇಂದಿರಾ ಕ್ಯಾಂಟೀನ್‌ಗೆ ಬಳಸಿರುವ ಬಗ್ಗೆ ಎಲ್ಲಿಯೂ ಉಲ್ಲೇಖವಿಲ್ಲ ಎಂದು ಆರೋಪಿಸಿದರು.

ಕ್ಲಾಕ್ ಟವರ್ ಕಾಮಗಾರಿ ವಿಳಂಬ: ನಗರದ ಹಂಪನಕಟ್ಟೆ ಕ್ಲಾಕ್ ಟವರ್ ಬಳಿಯಿಂದ ಎ.ಬಿ. ಶೆಟ್ಟಿ ವೃತ್ತದವರೆಗಿನ ರಸ್ತೆಯನ್ನು ಏಕಮುಖವಾಗಿಸುವ ಪ್ರಸ್ತಾವನೆ ಪೊಲೀಸ್ ಇಲಾಖೆ ಮುಂದಿದೆ. ನೂತನ ಕ್ಲಾಕ್ ಟವರ್‌ನಿಂದ ಸಂಚಾರಕ್ಕೆ ತೊಡಗು ಉಂಟಾಗುತ್ತದೆ ಎಂಬ ಸಮಸ್ಯೆಯೂ ಇದರಿಂದ ಬಗೆಹರಿಯಲಿದೆ. ಈ ಕಾರಣದಿಂದ ಕ್ಲಾಕ್ ಟವರ್ ಕಾಮಗಾರಿ ವಿಳಂಬಗೊಂಡಿದೆ ಎಂದು ಪ್ರೇಮಾನಂದ ಶೆಟ್ಟಿ ತಿಳಿಸಿದರು.

ಮನಪಾ ಸದಸ್ಯರಾದ ಗಣೇಶ ಹೊಸಬೆಟ್ಟು, ಸುಧೀರ್ ಶೆಟ್ಟಿ ಕಣ್ಣೂರು, ರೂಪಾ ಡಿ. ಬಂಗೇರ, ವಿಜಯಕುಮಾರ್ ಶೆಟ್ಟಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X