ಮೈಸೂರು: ಖಾಸಗಿ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ

ಮೈಸೂರು,ಜ.3: ಖಾಸಗಿ ಕಾಲೇಜೊಂದರಲ್ಲಿ ಕಲಿಯುತ್ತಿದ್ದ ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವರಾತ್ರೀಶ್ವರ ನಗರದಲ್ಲಿ ನಡೆದಿದೆ.
ಮೃತ ವಿದ್ಯಾರ್ಥಿನಿಯನ್ನು ಅರುಣಾಚಲ ಪ್ರದೇಶ ರಾಜ್ಯದ ಲೆಮೋ ಡ್ರೆಮೋ(22) ಎಂದು ಗುರುತಿಸಲಾಗಿದ್ದು, ಈಕೆ ಶಿವರಾತ್ರೀಶ್ವರ ನಗರದ ಪಿಜಿಯೊಂದರಲ್ಲಿದ್ದಳು. ಸೇಂಟ್ ಫುಲೋಮಿನಾ ಕಾಲೇಜಿನಲ್ಲಿ ಅಂತಿನ ಬಿಎ ವ್ಯಾಸಂಗ ಮಾಡುತ್ತಿದ್ದ ಈಕೆ ಟಿಬೆಟಿಯನ್ ಬಾಯ್ ಫ್ರೆಂಡ್ ಜೊತೆ ಲಿವಿಂಗ್ ಟುಗೆದರ್ ನಲ್ಲಿದ್ದಳು ಎನ್ನಲಾಗಿದೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.
ಈ ಸಂಬಂಧ ಎನ್.ಆರ್.ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





