ಮಂಜೇಶ್ವರ, ಪಾಲಕ್ಕಾಡ್ ನಲ್ಲಿ ನಿಷೇಧಾಜ್ಞೆ
ತಿರುವನಂತಪುರ, ಜ. 3: ಶಬರಿಮಲೆ ಅಯ್ಯಪ್ಪ ದೇವಾಲಯಕ್ಕೆ ಋತುಚಕ್ರದ ವಯಸ್ಸಿನ ಇಬ್ಬರು ಮಹಿಳೆಯರ ಪ್ರವೇಶಿಸಿದ ಹಿನ್ನೆಲೆಯಲ್ಲಿ ನಡೆದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ ಹಿನ್ನೆಲೆಯಲ್ಲಿ ಉತ್ತರ ಕೇರಳದ ಕಾಸರಗೋಡು ಜಿಲ್ಲೆಯ ಮಂಜೇಶ್ವರ ತಾಲೂಕಿನಲ್ಲಿ ಹಾಗೂ ಪಾಲಕ್ಕಾಡ್‌ನಲ್ಲಿ ಗುರುವಾರ ತಡ ರಾತ್ರಿ ನಿಷೇಧಾಜ್ಞೆ ಜಾರಿಗೊಳಿಸಲಾಯಿತು.
ಕಾಸರಗೋಡು ಜಿಲ್ಲಾಧಿಕಾರಿ ಡಿ. ಸಜಿತ್ ಬಾಬು ಮಂಜೇಶ್ವರದಲ್ಲಿ ಗುರುವಾರ ರಾತ್ರಿ 11 ಗಂಟೆಯಿಂದ 24 ಗಂಟೆಗಳ ಕಾಲ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ ಹೊರಡಿಸಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠರ ಸಹಿತ ವಿವಿಧ ಅಧಿಕಾರಿಗಳು ವರದಿ ದಾಖಲಿಸಿರುವುದನ್ನು ಪರಿಗಣಿಸಿದ ಬಳಿಕ ಪಾಲೆಕ್ಕಾಡ್ ಪಟ್ಟಣದಲ್ಲಿ ಪಾಲಕ್ಕಾಡ್ ಜಿಲ್ಲಾಧಿಕಾರಿ ಡಿ. ಬಾಲಮುರಳಿ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ. ಶುಕ್ರವಾರ ಸಂಜೆ 6 ಗಂಟೆ ವರಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು ಎಂದು ಬಾಲಮುರಳಿ ತಿಳಿಸಿದ್ದಾರೆ. ಪಾಲಕ್ಕಾಡ್ ಪಟ್ಟಣ ಬುಧವಾರ ನಡೆದ ಪ್ರತಿಭಟನೆ ಸಂದರ್ಭ ವ್ಯಾಪಕ ಹಿಂಸಾಚಾರಕ್ಕೆ ಸಾಕ್ಷಿಯಾಗಿತ್ತು.
Next Story





