Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರಫೇಲ್...

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರಫೇಲ್ ಒಪ್ಪಂದದ ಕ್ರಿಮಿನಲ್ ತನಿಖೆ: ರಾಹುಲ್ ಗಾಂಧಿ

ವಾರ್ತಾಭಾರತಿವಾರ್ತಾಭಾರತಿ4 Jan 2019 11:47 PM IST
share
ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರಫೇಲ್ ಒಪ್ಪಂದದ ಕ್ರಿಮಿನಲ್ ತನಿಖೆ: ರಾಹುಲ್ ಗಾಂಧಿ

ಹೊಸದಿಲ್ಲಿ, ಜ. 3: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ, ರಫೇಲ್ ಒಪ್ಪಂದದ ಕುರಿತು ಕ್ರಿಮಿನಲ್ ತನಿಖೆ ನಡೆಸಲಾಗುವುದು ಹಾಗೂ ಅಪರಾಧಿಗಳನ್ನು ಶಿಕ್ಷಿಸಲಾಗುವುದು ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.

ಸಂಸತ್ತಿನ ಹೊರಗೆ ಪತ್ರಿಕಾಗೋಷ್ಠಿ ನಡೆಸಿದ ರಾಹುಲ್ ಗಾಂಧಿ, ಬಹುಕೋಟಿ ಯುದ್ಧ ವಿಮಾನ ಖರೀದಿ ಕುರಿತ ಕಾಂಗ್ರೆಸ್ ಎತ್ತಿದ ಪ್ರಶ್ನೆಗೆಳಿಗೆ ರಕ್ಷಣಾ ಸಚಿವರು ಉತ್ತರ ನೀಡಬೇಕು ಎಂದರು. ಪ್ರಧಾನಿ ನರೇಂದ್ರ ಮೋದಿ ಅವರು ರಫೇಲ್ ಚರ್ಚೆಯಿಂದ ದೂರ ಓಡಿ ಹೋಗುತ್ತಾರೆ. ಹಣಕಾಸು ಸಚಿವ ಅರುಣ್ ಜೇಟ್ಲಿ ದೀರ್ಘ ಭಾಷಣ ಮಾಡಿ ನನ್ನನ್ನು ನಿಂದಿಸುತ್ತಿದ್ದಾರೆ. ಆದರೆ, ನನ್ನ ಪ್ರಶ್ನೆಗಳಿಗೆ ಅವರು ಉತ್ತರ ನೀಡುತ್ತಿಲ್ಲ ಎಂದು ಅವರು ಹೇಳಿದರು. ರಕ್ಷಣಾ ಸಚಿವೆ ಪ್ರಧಾನಿ ಅವರ ಪರವಾಗಿ ಮಾತನಾಡುವ ಸಂದರ್ಭ ಈ ಪ್ರಶ್ನೆಗಳಿಗೆ ಉತ್ತರಿಸುವುದನ್ನು ನಾವು ಹಾಗೂ ಪ್ರತಿಪಕ್ಷಗಳು ಬಯಸುತ್ತಿವೆ ಎಂದು ಅವರು ತಿಳಿಸಿದರು.

ವಾಯು ಪಡೆಗೆ ಅಗತ್ಯ ಇರುವ 126 ರಫೇಲ್ ಯುದ್ಧ ವಿಮಾನದ ಬೆಲೆಯನ್ನು 526 ಕೋ. ರೂ.ನಿಂದ 1,000 ಕೋ. ರೂ.ಗೆ ಏರಿಸಲು ಯಾರು ನಿರ್ಧರಿಸಿದರು ?., ವಾಯುಪಡೆ, ರಕ್ಷಣಾ ಸಚಿವಾಲಯವೇ? ಅಥವಾ ಪ್ರಧಾನ ಮಂತ್ರಿಯೇ ? ವಿಮಾನಗಳ ಸಂಖ್ಯೆಯನ್ನು 36ಕ್ಕೆ ಇಳಿಸಿದವರು ಯಾರು ?, ಅನಿಲ್ ಅಂಬಾನಿ ಅವರಿಗೆ ಗುತ್ತಿಗೆ ನೀಡಿದವರು ಯಾರು ? ಎಂದು ಅವರು ಪ್ರಶ್ನಿಸಿದರು. ‘‘ಭ್ರಷ್ಟಾಚಾರದೊಂದಿಗೆ ರಫೇಲ್ ಯುದ್ಧ ವಿಮಾನದ ಗುತ್ತಿಗೆಯನ್ನು ಅನಿಲ್ ಅಂಬಾನಿಗೆ ನೀಡುವ ಮೂಲಕ ರಾಷ್ಟ್ರೀಯ ಭದ್ರತೆಯನ್ನು ದುರ್ಬಲಗೊಳಿಸಿರುವುದರ ಬಗ್ಗೆ ಕೂಡ ಪ್ರಧಾನಿ ಅವರು ತನಿಖೆ ನಡೆಸಬೇಕು’’ ಎಂದು ಅವರು ಆಗ್ರಹಿಸಿದರು.

ರಫೇಲ್ ಕಡತಗಳಿಂದ ಕೊಳಕು ರಹಸ್ಯ, ಭ್ರಷ್ಟಾಚಾರ ಹಾಗೂ ದುಷ್ಕೃತ್ಯ ಹೊರಬಿದ್ದಿದೆ ಎಂದು ಹೇಳಿದ ಅವರು, ಜಂಟಿ ಸಂಸದೀಯ ಸಮಿತಿ ತನಿಖೆಗೆ ಆಗ್ರಹಿಸಿದರು. ಕತರ್ ಹಾಗೂ ಈಜಿಪ್ಟ್‌ಗೆ ಹೋಲಿಸಿದರೆ ಪ್ರಧಾನಿ ನರೇಂದ್ರ ಮೋದಿ ಅವರು ರಫೇಲ್ ಯುದ್ಧ ವಿಮಾನಕ್ಕೆ ಅತ್ಯಧಿಕ ಬೆಲೆ ನೀಡಿದ್ದಾರೆ. ಯುರೋಫೈಟರ್ ನೀಡಿದ ಕಡಿತದ ಕೊಡುಗೆ ನಿರಾಕರಿಸಿ ಭಾರತದ ಹಿತಾಸಕ್ತಿಯನ್ನು ಅವರು ಕಡೆಗಣಿಸಿದ್ದಾರೆ ಎಂದು ರಾಹುಲ್ ಗಾಂಧಿ ವರದಿಯೊಂದನ್ನು ಉಲ್ಲೇಖಿಸಿ ತಿಳಿಸಿದ್ದಾರೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X