ಇನ್ಸ್ಪೈರ್ ಅವಾರ್ಡ್ ಸ್ಪರ್ಧೆಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ

ಕಡೂರು, ಜ.4: ನಗರದ ಹೈವೇ ಇಂಗ್ಲಿಷ್ ಶಾಲೆಯ 8ನೇ ತರಗತಿ ವಿದ್ಯಾರ್ಥಿ ಪ್ರಣೀತ್.ಪಿ. ಇವರು ಇತ್ತೀಚೆಗೆ ಮೈಸೂರಿನಲ್ಲಿ ನಡೆದ ರಾಜ್ಯ ಮಟ್ಟದ ಇನ್ಸ್ಪೈರ್ ಅವಾರ್ಡ್ ಮಾನಕ್ ವಿಜ್ಞಾನ ಮಾದರಿ ವಸ್ತು ಪ್ರದರ್ಶನ ಮತ್ತು ಸ್ಪರ್ಧಾ ಕಾರ್ಯಕ್ರಮದಲ್ಲಿ ಭಾಗವಹಿಸಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಇವರು ಪಟ್ಟಣದ ಕೆ.ಸಿ. ಪಾಂಡುರಂಗಪ್ಪ, ಕೆ.ಜಿ. ಶಶಿರೇಖಾ ಇವರ ಪುತ್ರನಾಗಿದ್ದು, ಮುಂಬರುವ ಫೆಬ್ರವರಿಯಲ್ಲಿ ದಿಲ್ಲಿಯಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಇನ್ಸ್ಪೈರ್ ಅವಾರ್ಡ್ ಸ್ಪರ್ಧೆಯಲ್ಲಿ ಭಾಗವಹಿಸುವ ಪ್ರಣೀತ್ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸುವುದರೊಂದಿಗೆ ಚಿಕ್ಕಮಗಳೂರು ಜಿಲ್ಲೆಗೆ ಕೀರ್ತಿತಂದಿದ್ದಾರೆ. ಇವರಿಗೆ ಶಾಲೆಯ ಆಡಳಿತ ಮಂಡಳಿ, ಪ್ರಾಂಶುಪಾಲರು ಅಧ್ಯಾಪಕ ವೃಂದ ಮತ್ತು ಪೋಷಕರು ಅಭಿನಂದಿಸಿದ್ದಾರೆ ಎಂದು ಶಾಲೆಯ ಪ್ರಾಚಾರ್ಯ ಯೋಗೀಶ್ ಸಹ್ಯಾದ್ರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story





