Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ನಟ-ನಿರ್ಮಾಪಕರ ಮನೆ ಮೇಲೆ ಐಟಿ ದಾಳಿ...

ನಟ-ನಿರ್ಮಾಪಕರ ಮನೆ ಮೇಲೆ ಐಟಿ ದಾಳಿ ಪ್ರಕರಣ: ವಿಚಾರಣೆಗೆ ಹಾಜರಾಗುವಂತೆ ಸೂಚನೆ

ವಾರ್ತಾಭಾರತಿವಾರ್ತಾಭಾರತಿ5 Jan 2019 7:48 PM IST
share
ನಟ-ನಿರ್ಮಾಪಕರ ಮನೆ ಮೇಲೆ ಐಟಿ ದಾಳಿ ಪ್ರಕರಣ: ವಿಚಾರಣೆಗೆ ಹಾಜರಾಗುವಂತೆ ಸೂಚನೆ

ಬೆಂಗಳೂರು, ಜ.5: ಕನ್ನಡ ಚಿತ್ರರಂಗದ ನಟ-ನಿರ್ಮಾಪಕರ ನಿವಾಸಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ಶೋಧ ಕಾರ್ಯ ಅಂತ್ಯವಾಗಿದ್ದು, ಕೆಲ ನಟರಿಗೆ ಆಸ್ತಿ ದಾಖಲೆ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಸತತ ಎರಡು ದಿನಗಳ ಕಾಲ ಶಿವರಾಜ್‌ ಕುಮಾರ್, ಪುನೀತ್ ರಾಜ್‌ಕುಮಾರ್, ಸುದೀಪ್, ಯಶ್, ಇವರ ಪತ್ನಿ ರಾಧಿಕಾ ಪಂಡಿತ್, ನಿರ್ಮಾಪರಾದ ರಾಕ್‌ಲೈನ್ ವೆಂಕಟೇಶ್, ವಿಜಯ್ ಕಿರಗಂದೂರು ಅವರ ನಿವಾಸದಲ್ಲಿ ಶೋಧ ನಡೆಸಿದ ಅಧಿಕಾರಿಗಳು, ಕೆಲ ದಾಖಲೆಗಳನ್ನು ಸಂಗ್ರಹಿಸಿದ್ದು, ವಿಚಾರಣೆಗೆ ಹಾಜರಾಗಬೇಕೆಂದು ಹೇಳಿದ್ದಾರೆ ಎಂದು ಮೂಲಗಳು ತಿಳಿಸಿವೆ.

ನಟ ಪುನೀತ್ ರಾಜ್‌ಕುಮಾರ್ ನಿವಾಸದ ಮೇಲೆ ಐಟಿ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ತಡ ರಾತ್ರಿಯವರೆಗೆ ಆದಾಯ ತೆರಿಗೆ ಅಧಿಕಾರಿಗಳು ಪರಿಶೀಲನೆಯಲ್ಲಿ ತೊಡಗಿದ್ದರು. ಸತತ ಎರಡು ದಿನಗಳ ಕಾಲ ನಡೆದ ವಿಚಾರಣೆ ಅಂತ್ಯಗೊಂಡಿದ್ದು, ಅಲ್ಲಿಂದ ಶನಿವಾರ ಅಧಿಕಾರಿಗಳು ನಿರ್ಗಮಿಸಿದರು.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಪುನೀತ್ ರಾಜ್‌ಕುಮಾರ್, ಐಟಿ ಅಧಿಕಾರಿಗಳ ದಾಳಿಗೆ ಒಬ್ಬ ನಾಗರಿಕನಾಗಿ ಸ್ಪಂದಿಸುವುದು ನನ್ನ ಕರ್ತವ್ಯ. ಅಧಿಕಾರಿಗಳಿಗೆ ಸೂಕ್ತವಾಗಿ ಶೇ.100ರಷ್ಟು ಸ್ಪಂದಿಸಿದ್ದೇವೆ ಎಂದು ತಿಳಿಸಿದರು.

ವಿಚಾರಣೆಗೆ ಹೋಗುತ್ತೇನೆ: ನಟ ಶಿವರಾಜ್ ಕುಮಾರ್ ಮಾತನಾಡಿ, ಈ ಹಿಂದೊಮ್ಮೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದರು. 1984-85ರಲ್ಲಿ ಚೆನ್ನೈನಲ್ಲಿದ್ದಾಗ ಒಮ್ಮೆ ದಾಳಿ ನಡೆದಿತ್ತು. ನಮ್ಮ ಮನೆ ತುಂಬ ದೊಡ್ಡದಾಗಿದ್ದರಿಂದ ಹುಡುಕಲು ಸಮಯ ಹಿಡಿದಿರಬಹುದು. ಕೆಲ ಕಡತಗಳನ್ನು ತಗೊಂಡು ಹೋಗಿದ್ದಾರೆ. ಮತ್ತೆ ವಿಚಾರಣೆಗೆ ಕರೆದರೆ ಹೋಗುತ್ತೇನೆ ಎಂದರು.

ಯಶ್ ಪ್ರತಿಕ್ರಿಯಿಸಿ, ನನ್ನ ಮನೆಯ ಮೇಲೆ ಮೊದಲ ಬಾರಿ ದಾಳಿ ನಡೆದಿದೆ. ಇದು ಹೊಸ ವಿಚಾರ. ನಮಗೂ ಅರ್ಥ ಮಾಡಿಕೊಳ್ಳುವುದು ಇರುತ್ತೆ, ಅಧಿಕಾರಿಗಳು ಅವರ ಕರ್ತವ್ಯ ನಿರ್ವಹಿಸಿದ್ದಾರೆ. ಕೆಲವು ಊಹಾಪೋಹ ಸುದ್ದಿಗಳನ್ನು ನಂಬಬೇಡಿ ಎಂದು ನುಡಿದರು.

ನಿರ್ಮಾಪಕ ವಿಜಯ್ ಕಿರಗಂದೂರು ಮಾತನಾಡಿ, ಇತ್ತೀಚಿಗೆ ತೆರೆ ಕಂಡ ಕೆಜಿಎಫ್ ಸಿನಿಮಾ ಒಳ್ಳೆಯ ಯಶಸ್ಸು ತಂದಿತ್ತು. ಈ ಚಿತ್ರ ಬಿಡುಗಡೆಯಾದ ಎರಡನೆ ವಾರವೇ ಐಟಿ ಅಧಿಕಾರಿಗಳು ನನ್ನ ಮನೆ ಮತ್ತು ಕಚೇರಿಯ ಮೇಲೆ ದಾಳಿ ನಡೆಸಿದರು. ಸಿನಿಮಾ ಮತ್ತು ನನ್ನ ವೈಯಕ್ತಿಕ ಆದಾಯಕ್ಕೆ ಸಂಬಂಧಿಸಿದ ದಾಖಲಾತಿಗಳನ್ನು ಪರಿಶೀಲನೆ ನಡೆಸಿ, ನಮ್ಮಿಂದ ಕೆಲ ಮಾಹಿತಿಗಳನ್ನು ಪಡೆದುಕೊಂಡರು ಎಂದರು.

ದಾಳಿ ವೇಳೆ, ಅಧಿಕಾರಿಗಳು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ್ದೇವೆ. ಇನ್ನೂ, ಬೇರೆ ನಟ ಮತ್ತು ನಿರ್ಮಾಪಕರ ಮೇಲೆ ಯಾವ ಕಾರಣಕ್ಕೆ ದಾಳಿ ಆಗಿದೆ ಎಂಬುದರ ಬಗ್ಗೆ ನನಗೆ ಮಾಹಿತಿ ಇಲ್ಲ. ಅಧಿಕಾರಿಗಳ ದಾಳಿ ಅಂತ್ಯವಾಗಿದ್ದು, ವಿಚಾರಣೆಗೆ ಕರೆದಾಗ ಹಾಜರಾಗಬೇಕೆಂದು ಸೂಚಿಸಿದ್ದಾರೆ ಎಂದು ತಿಳಿಸಿದರು.

ಅಧಿಕಾರಿಗಳೊಂದಿಗೆ ರಾಕ್‌ಲೈನ್

ಚಿತ್ರ ನಿರ್ಮಾಪಕ ರಾಕ್‌ಲೈನ್ ವೆಂಕಟೇಶ್ ಮನೆ ಮೇಲಿನ ಆದಾಯ ತೆರಿಗೆ ಅಧಿಕಾರಿಗಳ ದಾಳಿ ಮುಕ್ತಾಯಗೊಂಡಿದೆ ಎನ್ನಲಾಗಿದ್ದು, ಪರಿಶೀಲನೆ ಬಳಿಕ ಅಧಿಕಾರಿಗಳು ವೆಂಕಟೇಶ್ ಅವರನ್ನು ತಮ್ಮ ಜೊತೆಯೇ ಕರೆದುಕೊಂಡು ಹೋಗಿದ್ದಾರೆ. ಜೊತೆಗೆ ಕಪ್ಪುಬಣ್ಣದ ಸೂಟ್‌ಕೇಸ್‌ನಲ್ಲಿ ಐಟಿ ಅಧಿಕಾರಿಗಳು ದಾಖಲೆಗಳನ್ನು ಹೊತ್ತೊಯ್ದಿದ್ದಾರೆ ಎನ್ನಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X