Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಮಹಿಳೆಯರಿಂದ ಮಹಿಳೆಯರಿಗಾಗಿ ಏರ್‌ಪೋರ್ಟ್...

ಮಹಿಳೆಯರಿಂದ ಮಹಿಳೆಯರಿಗಾಗಿ ಏರ್‌ಪೋರ್ಟ್ ಪಿಂಕ್ ಟ್ಯಾಕ್ಸಿ ಪರಿಚಯ

ಒಂಟಿ ಮಹಿಳೆಯರಿಗೆ ಸುರಕ್ಷೆಯ ಭರವಸೆ, ಜಿಪಿಎಸ್ ಸಾಧನ ಅಳವಡಿಕೆ

ವಾರ್ತಾಭಾರತಿವಾರ್ತಾಭಾರತಿ5 Jan 2019 9:24 PM IST
share
ಮಹಿಳೆಯರಿಂದ ಮಹಿಳೆಯರಿಗಾಗಿ ಏರ್‌ಪೋರ್ಟ್ ಪಿಂಕ್ ಟ್ಯಾಕ್ಸಿ ಪರಿಚಯ

ಬೆಂಗಳೂರು, ಜ.5: ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮವು ಮಹಿಳಾ ಚಾಲಕಿಯರು ಚಲಾಯಿಸುವ ಏರ್‌ಪೋರ್ಟ್ ಟ್ಯಾಕ್ಸಿಗಳನ್ನು ಪರಿಚಯಿಸುತ್ತಿದ್ದು, ಜ.7ರಂದು ಬೆಳಗ್ಗೆ 9.15ಕ್ಕೆ ಬೆಂಗಳೂರು ಅಂತರ್‌ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 850 ಏರ್‌ಪೋರ್ಟ್ ಟ್ಯಾಕ್ಸಿಗಳನ್ನು ತನ್ನ ವಾಹನ ದಳಕ್ಕೆ ಸೇರಿಸಿಕೊಳ್ಳಲಿದೆ.

ಕೆಎಸ್‌ಟಿಡಿಸಿ ತನ್ನ ನೇತೃತ್ವದಲ್ಲಿ ಮುಖ್ಯವಾಗಿ ಒಂಟಿ ಮಹಿಳೆಯರಿಗೆ ಸುರಕ್ಷಿತ ಮತ್ತು ವಿಶ್ವಾಸಾರ್ಹ ಪ್ರಯಾಣದ ಭರವಸೆ ನೀಡುತ್ತಿದೆ. ಅಲ್ಲದೆ, ಮಹಿಳಾ ಚಾಲಕಿಯರಿಗೆ ಉದ್ಯೋಗಾವಕಾಶ ಒದಗಿಸುವ ಸದುದ್ದೇಶದಿಂದ ಬೆಂಗಳೂರು ಅಂತರ್‌ರಾಷ್ಟ್ರೀಯ ವಿಮಾನ ನಿಲ್ದಾಣದ ಪ್ರಯಾಣದ ನಿಯಮಗಳನ್ನು ಅನುಸರಿಸಿ ಆರಂಭಿಕವಾಗಿ 10 ಮಹಿಳಾ ಚಾಲಕಿಯರಿರುವ ಹೊಸ ಕಾರುಗಳನ್ನು ತನ್ನ ಪಡೆಗೆ ಸೇರ್ಪಡಿಸಿಕೊಳ್ಳಲಿದೆ.

ದಿನ ಪೂರ್ತಿ ಪಿಂಕ್ ಟ್ಯಾಕ್ಸಿ ಲಭ್ಯ: ಮಹಿಳಾ ಚಾಲಕಿಯರು ಉತ್ತಮ ತರಬೇತಿ ಪಡೆದಿದ್ದು, ಸ್ವರಕ್ಷಣಾ ಸಾಮರ್ಥ್ಯ ಹೊಂದಿದ್ದಾರೆ. ಇವರೆಲ್ಲರೂ ಪ್ರಯಾಣಿಕರು ಮಹಿಳೆಯರೇ ಆಗಲಿ, ಒಂಟಿ ಮಹಿಳೆ ಆಗಿರಲಿ ಚಾಕಚಕ್ಯತೆಯೊಂದಿಗೆ ಪ್ರಯಾಣಿಕರನ್ನು ಸುರಕ್ಷತೆಯಿಂದ ಅವರ ಜಾಗಕ್ಕೆ ತಲುಪಿಸಬಲ್ಲವರಾಗಿದ್ದಾರೆ. ಬೆಳಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12 ಗಂಟೆವರೆಗೆ ಪಿಂಕ್ ಟ್ಯಾಕ್ಸಿಯು ಪ್ರತಿ ಕಿ.ಮೀಗೆ 21 ರೂಪಾಯಿ 50 ಪೈಸೆ ಹಾಗೂ ರಾತ್ರಿ 12 ಗಂಟೆಯಿಂದ ಬೆಳಗ್ಗೆ 6 ಗಂಟೆವರೆಗೆ ಪ್ರತಿ ಕಿ.ಮೀಗೆ 23 ರೂಪಾಯಿ 50 ಪೈಸೆಯಂತೆ 24/7 ಕಾರ್ಯನಿರ್ವಹಿಸಲಿದೆ.

ವಾಹನಗಳ ಚಲನವಲನ ನಿಗಾ: ಪಿಂಕ್ ಟ್ಯಾಕ್ಸಿಗಳಿಗೆ ಜಿಪಿಎಸ್ ಸಾಧನ, ಆರ್‌ಎಫ್ ಐಡಿ ಟ್ಯಾಕ್ಸ್, ಎಂಡಿಟಿ ಸಾಧನಗಳನ್ನು ಅಲ್ಲದೆ ಪ್ಯಾನಿಕ್ ಬಟನ್ ಅಳವಡಿಸಿ ಸಜ್ಜಾಗಿರಿಸಲಾಗಿದೆ. 24 ಗಂಟೆಯೂ ವಾಹನಗಳ ಚಲನವಲನಗಳ ಬಗ್ಗೆ ನಿಗಾ ವಹಿಸುವ ವ್ಯವಸ್ಥೆಯೂ ಇರುತ್ತದೆ. ಈ ರೀತಿಯ ಕೆಎಸ್‌ಟಿಡಿಸಿ ಕಾರುಗಳನ್ನು ಸುಲಭವಾಗಿ ಗುರುತಿಸಲು ಗುಲಾಬಿ ಬಣ್ಣದ ಬಂಪರ್‌ಗಳನ್ನು ಹೊಂದಿರುವಂತೆ ವಿಶೇಷ ವ್ಯವಸ್ಥೆ ಮಾಡಲಾಗಿದೆ. ಅವಶ್ಯವಿರುವ ಮಹಿಳಾ ವಿಮಾನ ಪ್ರಯಾಣಿಕರು ಈ ಟ್ಯಾಕ್ಸಿಗಳ ಸೇವೆಯನ್ನು ಪಡೆದುಕೊಳ್ಳಲು ಕೆಎಸ್‌ಟಿಡಿಸಿಯ 24 ಗಂಟೆ ಕೆಲಸ ಮಾಡುವಂತ ಕಾಲ್ ಸೆಂಟರ್ ಸಂಖ್ಯೆ 080-4466 4466 ಕ್ಕೆ ಕರೆ ಮಾಡಬಹುದಾಗಿದೆ. www.kstdc.co ವೆಬ್ಸೈಟ್‌ನಲ್ಲಿ ಆನ್‌ಲೈನ್ ಮೂಲಕವೂ ಸಂಪರ್ಕಿಸಬಹುದಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X