ಒಂಟಿ ಮಹಿಳೆಗೆ ಹಲ್ಲೆ ನಡೆಸಿ ದರೋಡೆ: ಆರೋಪಿ ಬಂಧನ

ಬೆಂಗಳೂರು, ಜ.5: ಒಂಟಿ ಮಹಿಳೆಯರನ್ನು ಗುರಿಯಾಗಿಸಿಕೊಂಡು ಹಲ್ಲೆ, ದರೋಡೆ ನಡೆಸುತ್ತಿದ್ದ ಆರೋಪದಡಿ ವ್ಯಕ್ತಿಯೋರ್ವನನ್ನು ಇಲ್ಲಿನ ಚಂದ್ರಾ ಲೇಔಟ್ ಠಾಣಾ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತನನ್ನು ಎಚ್.ಡಿ.ಸುಬ್ರಮಣ್ಯ ಪ್ರಸಾದ್ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿ ಯಲಹಂಕದಲ್ಲಿ ಮನೆ ನಿರ್ಮಾಣಕ್ಕಾಗಿ ಬ್ಯಾಂಕ್‌ನಲ್ಲಿ ಸಾಲ ಮಾಡಿದ್ದ. ಆನಂತರದಲ್ಲಿ ಸಾಲದ ಕಂತು ಕಟ್ಟಲು ಆಗದೆ, ಕಡಿಮೆ ಸಮಯದಲ್ಲಿ ಹೆಚ್ಚು ಹಣಗಳಿಸುವ ಉದ್ದೇಶದಿಂದ ಚಂದ್ರಲೇಔಟ್, ಕಲ್ಯಾಣ ನಗರದಲ್ಲಿರುವ ತನ್ನ ಸಂಬಂಧಿ ಸುಜಾತ ಅವರನ್ನು ಗಮನಿಸಿ ಅವರ ಮನೆಗೆ ಹೋಗಿ, ಹಲ್ಲೆ ಮಾಡಿ ಅವರ ಬಳಿಯಿದ್ದ ನಗದು, ಚಿನ್ನಾಭರಣ ಕಳವು ಮಾಡಿ ಪರಾರಿಯಾಗಿದ್ದ ಎನ್ನಲಾಗಿದೆ.
ಈ ಸಂಬಂಧ ಸುಜಾತ, ಚಂದ್ರಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಇದೀಗ ಆರೋಪಿಯನ್ನು ಬಂಧಿಸಿರುವ ಪೊಲೀಸರು, ನಗದು, ಚಿನ್ನಾಭರಣ ಜಪ್ತಿ ಮಾಡಿ ತನಿಖೆ ಕೈಗೊಂಡಿದ್ದಾರೆ.
Next Story





