Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುಗ್ಗಿ
  3. ‘ಏಕ್ ದಿನ್ ಪ್ರತಿ ದಿನ್’ ಆ ರಾತ್ರಿ ಚಿನು...

‘ಏಕ್ ದಿನ್ ಪ್ರತಿ ದಿನ್’ ಆ ರಾತ್ರಿ ಚಿನು ಎಲ್ಲಿದ್ದುಳು?

ಬಿ. ಶ್ರೀಪಾದ ಭಟ್ಬಿ. ಶ್ರೀಪಾದ ಭಟ್6 Jan 2019 12:23 AM IST
share
‘ಏಕ್ ದಿನ್ ಪ್ರತಿ ದಿನ್’ ಆ ರಾತ್ರಿ ಚಿನು ಎಲ್ಲಿದ್ದುಳು?

ಕುಟುಂಬದ ತಾಯಿ ಕ್ಲೈಮಾಕ್ಸಿನಲ್ಲಿ ದಿಢೀರನೆ ಮುನ್ನೆಲೆಗೆ ಬಂದು, ಇದು ನನ್ನ ಬದುಕು, ಇದಕ್ಕೆ ನಾನೇ ಯಜಮಾನಿ, ಹಾಗೆಯೇ ಚಿನು ರಾತ್ರಿ ಎಲ್ಲಿದ್ದಳೆಂಬುದು ಅವಳ ವೈಯಕ್ತಿಕ ಬದುಕು. ಅದಕ್ಕೆ ಅವಳು ಮಾತ್ರ ಯಜಮಾನಿ, ಅದನ್ನು ಪ್ರಶ್ನಿಸಲು ನಮಗಾರಿಗೂ ಹಕ್ಕಿಲ್ಲ ಎಂದು ವೌನವಾಗಿಯೇ ಒಂದು ಶಬ್ದವನ್ನಾಡದೇ ಇಡೀ ವ್ಯವಸ್ಥೆಗೆ ದಿಟ್ಟ ಉತ್ತರ ನೀಡುತ್ತಾಳೆ. ಇಲ್ಲಿಯೇ ಏಕ್ ದಿನ್ ಪ್ರತಿದಿನ್ ಗೆಲ್ಲುವುದು. ಇದೇ ಅದರ ಮಾನವೀಯತೆ. ಇದೇ ನಿರ್ದೇಶಕನ ಜೀವಪರವಾದ ಸ್ತ್ರೀವಾದಿ ಮನಸ್ಸು.

ಮೃಣಾಲ್ ಸೇನ್ ಅವರ ಮಹತ್ವದ ಚಿತ್ರಗಳಾದ ‘ಪ್ರತಿನಿಧಿ’, ‘ಭುವನ್ ಶೋಮ್’, ‘ಏಕ್ ಅಧೂರಿ ಕಹಾನಿ’, ‘ಮೃಗಯಾ’ಗಳಿಗೆ ಹೋಲಿಸಿದರೆ ಕಥಾ ಹಂದರದಲ್ಲಿ ಅತ್ಯಂತ ಸರಳವಾದ ಆದರೆ ಸಂವೇದನೆಯ ಮಟ್ಟದಲ್ಲಿ ಇವೆಲ್ಲಕ್ಕಿಂತಲೂ ಹೆಚ್ಚು ಪರಿಣಾಮಕಾರಿಯಾದ ಸಿನೆಮಾ ‘ಏಕ್ ದಿನ್ ಪ್ರತಿ ದಿನ್’. ಇಂಡಿಯಾದ ಬದಲಾಗುತ್ತಿರುವ ನಗರ, ಈ ಬದಲಾವಣೆಯ ಮೂಲಧಾತು ನಗರಗಳ ವಾಣಿಜ್ಯೀಕರಣ ಮತ್ತು ಈ ಅನಿರೀಕ್ಷಿತ ಬದಲಾವಣೆಗಳೊಂದಿಗೆ ನೇರವಾಗಿ ಮುಖಾಮುಖಿಯಾಗುತ್ತಿರುವ ನಗರದ ಎಪ್ಪತ್ತರ ದಶಕದ ಮಧ್ಯಮ ವರ್ಗ ಇವೆಲ್ಲವನ್ನು ಕೇಂದ್ರವಾಗಿಟ್ಟುಕೊಂಡು ಮೊತ್ತ ಮೊದಲ ಬಾರಿಗೆ ಮೃಣಾಲ್ ನಿರ್ದೇಶಿಸಿದ ಸಿನೆಮಾ ಇದು.

ನಾನು ಯಾರು ಎಂದು ಯಾರೊಬ್ಬರೂ ನನಗೆ ಹೇಳಿಕೊಡಬೇಕಾಗಿಲ್ಲ, ನೀನು ನನ್ನ ವ್ಯಕ್ತಿತ್ವದ ಭಾಗಗಳನ್ನು ವಿವರಿಸಬಹುದು, ಆದರೆ ನಾನು ಯಾರು ಮತ್ತು ನನಗೆ ಏನು ಬೇಕು ಎನ್ನುವುದನ್ನು ನಾನೇ ಕಂಡುಕೊಳ್ಳಬೇಕು

- ಚಿನುವಾ ಅಚುಬೆ

ಎಂಬತ್ತರ ದಶಕದಲ್ಲಿ ದೂರದರ್ಶನ ಪ್ರತಿ ಶುಕ್ರವಾರ ರಾತ್ರಿಯಂದು ಭಾರತೀಯ ಭಾಷೆಗಳ ಕ್ಲಾಸಿಕ್ ಸಿನೆಮಾಗಳನ್ನು ಪ್ರದರ್ಶಿಸುತ್ತಿತ್ತು. ಆಗ ಕಾಲೇಜು ವಿದ್ಯಾರ್ಥಿ ಗಳಾಗಿದ್ದ ನಾವೆಲ್ಲ ನೋಡಿದ್ದ ಹಲವಾರು ಶ್ರೇಷ್ಠ ಚಿತ್ರಗಳಲ್ಲಿ ‘‘ಏಕ್ ದಿನ್ ಪ್ರತಿ ದಿನ್’’ ಸಿನೆಮಾ ಕೂಡ ಒಂದು. ನಮಗೆಲ್ಲ ಭಾರತೀಯ ಸಿನೆಮಾ ರಂಗದ ಹೊಸ ಲೋಕವನ್ನೇ ತೋರಿಸಿದ ದೂರದರ್ಶನವನ್ನು ನಮ್ಮ ತಲೆಮಾರು ಮರೆಯಲು ಸಾಧ್ಯವೇ ಇಲ್ಲ.

‘ಏಕ್ ದಿನ್ ಪ್ರತಿದಿನ್’ ಇದು 1979ರಲ್ಲಿ ತೆರೆಕಂಡ, ಮೃಣಾಲ್ ಸೇನ್ ನಿರ್ದೇಶನದ ಬೆಂಗಾಲಿ ಸಿನೆಮಾ. ಬೆಂಗಾಲಿ ಲೇಖಕ ಅಮಲೇಂದು ಚಕ್ರವರ್ತಿ ಅವರ ಸಣ್ಣ ಕತೆಯನ್ನಾಧರಿಸಿ ಮೃಣಾಲ್ ದಾ ಈ ಸಿನೆಮಾವನ್ನು ನಿರ್ದೇಶಿಸಿದ್ದರು. ಅದರ ಕತೆ ಸ್ಥೂಲವಾಗಿ ಹೀಗಿದೆ. ಎಪ್ಪತ್ತರ ದಶಕದ ಕಲ್ಕತ್ತ (ಈಗಿನ ಕೋಲ್ಕತಾ)ದಲ್ಲಿ ವಾಸಿಸುತ್ತಿರುವ ಏಳು ಜನ ಸದಸ್ಯರ ಮಧ್ಯಮವರ್ಗದ ಕುಟುಂಬ. ಇದರಲ್ಲಿ ತಂದೆ, ತಾಯಿ ಮತ್ತು ಐವರು ಹೆಣ್ಣು ಮಕ್ಕಳು ಮತ್ತಿಬ್ಬರು ಗಂಡು ಮಕ್ಕಳು. ಇಡೀ ಕುಟುಂಬದ ಹೊರೆ ಹೊತ್ತುಕೊಂಡಿದ್ದು ಹಿರಿಯಕ್ಕ ಚಿನು (ಮಮತಾ ಶಂಕರ್). ಕಚೇರಿಯೊಂದರಲ್ಲಿ ಕೆಲಸ ಮಾಡುತ್ತ ತನ್ನ ಉಳಿದ ಆರು ಜನರ ಬದುಕನ್ನು ನಿಭಾಯಿಸುತ್ತಿರುತ್ತಾಳೆ. ಅದರೊಂದು ದಿನ ರಾತ್ರಿಯಾದರೂ ಚಿನು ಮನೆಗೆ ಮರಳುವುದಿಲ್ಲ. ಬಹುಶಃ ಕಚೇರಿಯಲ್ಲಿ ಹೆಚ್ಚಿದ ಕೆಲಸದಿಂದಾಗಿ ತಡವಾಗಬ ಹುದೆಂದು ಕುಟುಂಬದ ಇತರ ಮಂದಿ ಭಾವಿಸಿರುತ್ತಾರೆ. ಕಿರಿಯ ತಂಗಿ ಮಿನು (ಅದ್ಭುತವಾಗಿ ನಟಿಸಿದ್ದಾಳೆ) ಅಕ್ಕನ ಆಫೀಸಿಗೆ ಫೋನ್ ಮಾಡಿದಾಗ ತನ್ನಕ್ಕ ಆಫೀಸಿನಲ್ಲಿ ಇರದಿರುವುದು ಗೊತ್ತಾಗಿ ಕಳವಳಪಡುತ್ತಾಳೆ.

ನಿಶ್ಚಿಂತೆಯಿಂದ ಇದ್ದ ಈ ಕುಟುಂಬವು ಕ್ಷಣ ಮಾತ್ರದಲ್ಲಿ ಆತಂಕಕ್ಕೆ ದೂಡಲ್ಪ ಡುತ್ತದೆ. ತೀವ್ರ ದುಗುಡದಿಂದ ಅಪ್ಪ ಬಸ್ ಸ್ಟಾಪಿನ ಬಳಿ ಬಂದು ಕಡೆಯ ಬಸ್ ಬರುವವರೆಗೂ ಕಾಯುತ್ತಾನೆ. ಆದರೆ ಮಗಳು ಕಾಣುವುದಿಲ್ಲ. ಇಡೀ ಅಪಾರ್ಟ್ ಮೆಂಟಿನಲ್ಲಿ ಚಿನುವಿನ ನಾಪತ್ತೆಯ ಸುದ್ದಿ ಕ್ಷಣ ಮಾತ್ರದಲ್ಲಿ ಹಬ್ಬುತ್ತದೆ. ನೆರೆಹೊರೆಯ ಜನ ತಲೆಗೊಬ್ಬರಂತೆ ಮಾತನಾಡಲಾರಂಭಿಸುತ್ತಾರೆ. ಕೆಲವರು ಸಹಾನುಭೂತಿಯಿಂದ, ಕೆಲವರು ಕುಹಕದಿಂದ, ಬಹುಪಾಲು ಜನ ವಿಚಿತ್ರವಾದ ಮಾತುಗಳಿಂದ ಇಡೀ ಘಟನೆಯನ್ನು ವಿಶ್ಲೇಷಿಸುತ್ತಾರೆ. ಇದನ್ನು ಮೃಣಾಲ್ ಅತ್ಯಂತ ಸಂಯಮದಿಂದ ಆದರೆ ಪರಿಣಾಮಕಾರಿಯಾಗಿ ಚಿತ್ರಿಸಿದ್ದಾರೆ. ಕಡೆಗೆ ಪೊಲೀಸರಿಗೂ ದೂರು ನೀಡಲಾಗುತ್ತದೆ. ನಾಪತ್ತೆಯಾದ ಚಿನುವಿನ ತಮ್ಮ ಮತ್ತವನ ಸ್ನೇಹಿತನೊಂದಿಗೆ ಕಡೆಗೆ ಹತಾಶೆಯಿಂದ ಶವಾಗಾರಕ್ಕೆ ತೆರಳಿ ತನ್ನಕ್ಕನ ಶವವನ್ನು ಹುಡುಕುತ್ತಾನೆ. ಮತ್ತೊಂದು ಕಡೆ ಚಿನುವಿನ ಚಹರೆಯನ್ನು ಹೋಲುವ ಮಹಿಳೆಯೊಬ್ಬಳು ಅಸ್ಪತ್ರೆಯೊಂದರಲ್ಲಿ ದಾಖಲಾಗಿದ್ದಾಳೆಂದು ಸುದ್ದಿ ತಿಳಿದು ಆಕೆಯ ಅಪ್ಪ ಕೂಡಲೆ ಆಸ್ಪತ್ರೆಗೆ ಧಾವಿಸುತ್ತಾನೆ. ಆದರೆ ಆಕೆ ತನ್ನ ಮಗಳಲ್ಲವೆಂದು ಖಚಿತವಾದ ನಂತರ ಅರ್ಧ ನಿರಾಸೆ, ಇನ್ನರ್ಧ ನಿರಾಳತೆಯಿಂದ ಮನೆಗೆ ಮರಳುತ್ತಾನೆ. ಚಿನುವಿನ ಕುಟುಂಬವು ಇಡೀ ರಾತ್ರಿಯನ್ನು ಆತಂಕ, ತಲ್ಲಣಗಳನ್ನು ಎದುರಿಸುತ್ತದೆ. ಮರುದಿನದ ಮುಂಜಾನೆಯ ನಸುಕತ್ತಲಿನಲ್ಲಿ ಕಾಣೆಯಾಗಿದ್ದ ಚಿನು ನಿಧಾನವಾಗಿ ಮೆಟ್ಟಿಲೇರುತ್ತ ಬರುತ್ತಿರುವುದನ್ನು ಗುರುತಿಸಿ ಮಿನು ಸಂತೋಷದಿಂದ ಕಿರುಚುತ್ತ ಇಡೀ ಕುಟುಂಬವನ್ನು ಎಚ್ಚರಿಸುತ್ತಾಳೆ. ಮೆಟ್ಟಿಲೇರಿ ಬರುತ್ತಿದ್ದ ಮಗಳನ್ನು ಕುಟುಂಬದ ಸದಸ್ಯರು ಮಾತನಾಡಿಸದೇ ವಿಲಕ್ಷಣ ವೌನದಲ್ಲಿ, ಹೇಳಿಕೊಳ್ಳಲಾಗದ ಶಂಕೆಯಲ್ಲಿ, ಹೊಯ್ದಿಟದ ಮನಸ್ಸಿನಲ್ಲಿ ಎದುರುಗೊಳ್ಳುತ್ತಾರೆ. ಹಿಂದಿನ ರಾತ್ರಿ ಎಲ್ಲಿದ್ದೆ ಎಂದು ಕೇಳಲಾಗದೆ ವಿಚಿತ್ರ ತೊಳಲಾಟದಲ್ಲಿರುತ್ತದೆ ಚಿನುವಿನ ಕುಟುಂಬ. ಆಗ ಅಪಾರ್ಟಮೆಂಟಿನ ಮಾಲಕ ಎಂದಿನಂತೆ ಅಪ್ಪನನ್ನು ದಬಾಯಿಸುತ್ತಾ ಇದು ಮರ್ಯಾದಸ್ಥರು ಇರುವ ಜಾಗವೆಂತಲೂ ಈ ಕೂಡಲೇ ನಿಮ್ಮ ಕುಟುಂಬ ಇಲ್ಲಿಂದ ಜಾಗ ಬದಲಿಸಬೇಕೆಂತಲೂ ತಾಕೀತು ಮಾಡುತ್ತಾನೆ. ‘‘ಕಡೆಗೆ ಇದಾವುದಕ್ಕೂ ಲೆಕ್ಕಿಸದೇ ಚಿನುವಿನ ಅಮ್ಮ ಎಂದಿನಂತೆ ತನ್ನ ದಿನನಿತ್ಯದ ಮನೆಗೆಲಸವನ್ನು ಶುರು ಮಾಡುವುದರೊಂದಿಗೆ ಈ ಸಿನೆಮಾ ಮುಗಿಯುತ್ತದೆ’’.  ‘ಏಕ್ ದಿನ್ ಪ್ರತಿದಿನ್ ಮೃಣಾಲ್ ಸೇನ್’ ಅವರ ಅತ್ಯುತ್ತಮ ಚಿತ್ರಗಳ ಲ್ಲೊಂದು. ಈ ಚಿತ್ರಕ್ಕಾಗಿ 1980ರಲ್ಲಿ ಅತ್ಯುತ್ತಮ ನಿರ್ದೇಶಕನೆಂದು ರಾಷ್ಟ್ರ ಪ್ರಶಸ್ತಿ ಗಳಿಸುತ್ತಾರೆ.

ಅವರ ಈ ಮುಂಚಿನ ಮಹತ್ವದ ಚಿತ್ರಗಳಾದ ಪ್ರತಿನಿಧಿ, ಭುವನ್ ಶೋಮ್, ಏಕ್ ಅಧೂರಿ ಕಹಾನಿ, ಮೃಗಯಾಗಳಿಗೆ ಹೋಲಿಸಿದರೆ ಕಥಾ ಹಂದರದಲ್ಲಿ ಅತ್ಯಂತ ಸರಳವಾದ ಆದರೆ ಸಂವೇದನೆಯ ಮಟ್ಟದಲ್ಲಿ ಇವೆಲ್ಲಕ್ಕಿಂತಲೂ ಹೆಚ್ಚು ಪರಿಣಾಮಕಾರಿಯಾದ ಸಿನೆಮಾ ‘ಏಕ್ ದಿನ್ ಪ್ರತಿ ದಿನ್’. ಇಂಡಿಯಾದ ಬದಲಾಗುತ್ತಿರುವ ನಗರ, ಈ ಬದಲಾವಣೆಯ ಮೂಲಧಾತು ನಗರಗಳ ವಾಣಿಜ್ಯೀಕರಣ ಮತ್ತು ಈ ಅನಿರೀಕ್ಷಿತ ಬದಲಾವಣೆಗಳೊಂದಿಗೆ ನೇರವಾಗಿ ಮುಖಾಮುಖಿಯಾಗುತ್ತಿರುವ ನಗರದ ಎಪ್ಪತ್ತರ ದಶಕದ ಮಧ್ಯಮ ವರ್ಗ ಇವೆಲ್ಲವನ್ನು ಕೇಂದ್ರವಾಗಿಟ್ಟುಕೊಂಡು ಮೊತ್ತ ಮೊದಲ ಬಾರಿಗೆ ಮೃಣಾಲ್ ದಾ ನಿರ್ದೇಶಿಸಿದ ಸಿನೆಮಾ ಇದು. ಕಥಾ ನಾಯಕಿ ಆ ಒಂದು ರಾತ್ರಿ ಎಲ್ಲಿದ್ದಳು ಎಂಬುದನ್ನೇ ಗೌಣವಾಗಿಸಿ ಅದು ಅವಳ ವೈಯಕ್ತಿಕ ಬದುಕು ಎಂದು ಪರೋಕ್ಷವಾಗಿ ಆದರೆ ಅತ್ಯಂತ ಘನತೆಯಿಂದ ತೋರಿಸುತ್ತಾರೆ ಮೃಣಾಲ್ ದಾ. ಇಲ್ಲಿ ಅವರು ಕೇಂದ್ರೀಕರಿಸುವುದು ಆಧುನಿಕತೆಗೆ ತೆರೆದುಕೊಳ್ಳುತ್ತಿರುವ ನಗರದ ಮಧ್ಯಮ ವರ್ಗದ ಹಿಪೋಕ್ರೆಸಿ, ಆಧುನಿಕ ಶಿಕ್ಷಣವನ್ನು ಪಡೆದೂ ಜಡಗಟ್ಟಿದ ಮನಸ್ಸನ್ನು ಕಳೆದು ಹಾಕಲು ನಿರಾಕರಿಸುವ ಈ ವರ್ಗಗಳ ಕ್ಷುದ್ರತೆ ಮತ್ತು ತಾನು ಪರಂಪರೆಯನ್ನು ಪಾಲಿಸುತ್ತಿರುವ ಭಾರತೀಯ ನಾರಿಯೋ ಅಥವಾ ಬದಲಾವಣೆಗೆ ತೆತ್ತುಕೊಂಡ ಈ ಶತಮಾನದ ಮಾದರಿ ಹೆಣ್ಣೋ ಎಂಬುದರ ಕುರಿತಾಗಿ ದಿಟ್ಟತೆಯನ್ನು ಪ್ರದರ್ಶಿಸುವ ಮನೋಭೂಮಿಕೆಗಳ ಹುಡುಕಾಟದಲ್ಲಿರುವ, ಹೊರಗೆ ದುಡಿದು ಕುಟುಂಬವನ್ನು ಸಾಕುವ ಅವಿವಾಹಿತ ಹೆಣ್ಣುಮಗಳು. ಚಿತ್ರದ ಕ್ಲೈಮಾಕ್ಸ್ ಅನ್ನು ನೋಡಿ. ‘‘ಕಡೆಗೆ ಕುಟುಂಬದ ಸದಸ್ಯರು ಒಬ್ಬರನ್ನೊಬ್ಬರು ಹತಾಶೆಯಿಂದ ದೂಷಿಸಿಕೊಳ್ಳುತ್ತಿರುತ್ತಾರೆ. ತಮಗೆಲ್ಲ ದುಡಿದು ಹಾಕುತ್ತಿರುವ ಚಿನುವಿನ ಕುರಿತಾಗಿ ನಾವ್ಯಾರು ಗಮನವೇ ಹರಿಸಿಲ್ಲ, ಅವಳಿಗೇನು ಮಾಡಿದ್ದೇವೆ? ಎಂಬ ಪಾಪ ನಿವೇದನೆಯಲ್ಲಿರುತ್ತಾರೆ.

ಆಗ ಕೂಡಲೆ ಹೊರಗಡೆ ಕಾರು ಭರ್ರನೆ ಬಂತು ನಿಂತ ಶಬ್ದ ಕೇಳಿಸುತ್ತದೆ. (ಇದು ದೌರ್ಜನ್ಯದ, ಅಧಿಕಾರದ, ದೈಹಿಕ ಹಲ್ಲೆಯ ಸಂಕೇತವೇ?) ಕೂಡಲೆ ಕುಟುಂಬದ ಕಿರಿಯ ಹುಡುಗಿ ಬಾಗಿಲ ಬಳಿ ಧಾವಿಸುತ್ತಾಳೆ. ಮನೆ ಪ್ರವೇಶಿಸುವ ಚಿನು ನೀವೆಲ್ಲ ರಾತ್ರಿಯೆಲ್ಲ ಮಲಗಲಿಲ್ಲವೇ? ಎಂದು ನಿರ್ಲಿಪ್ತಳಾಗಿ ಪ್ರಶ್ನಿಸುತ್ತಾಳೆ’’.

ಆದರೆ ಚಿತ್ರ ಬಿಡುಗಡೆಯ ನಂತರ ಬಹುತೇಕ ಪ್ರೇಕ್ಷಕರು ಮೃಣಾಲ್ ದಾ ಅವರನ್ನು ಪ್ರಶ್ನಿಸುವುದು ‘ಚಿನು ಆ ರಾತ್ರಿ ಎಲ್ಲಿದ್ದಳು?’ ಇದಕ್ಕೆ ಉತ್ತರಿಸುತ್ತಾ ಮೃಣಾಲ್ ದಾ ಹೇಳುತ್ತಾರೆ ‘‘ಹಿಂದೆ ವೇಟಿಂಗ್ ಫಾರ್ ಗೋಡೋ’’ ನಾಟಕವನ್ನು ಬರೆದ ನಾಟಕಕಾರ ಬೆಕೆಟ್‌ನನ್ನು ಕೂಡ ಹೀಗೆಯೇ ಪ್ರಶ್ನಿಸಿದ್ದರು ಯಾರಿಗಾಗಿ ಕಾಯುತ್ತಿರುವುದು? ಯಾರು ಈ ಗೋಡೋ? ಅದಕ್ಕೆ ಬೆಕೆಟ್ ಹೇಳಿದ್ದು ನನಗೆ ಗೊತ್ತಿದ್ದರೆ ನಾನದನ್ನು ನಾಟಕದಲ್ಲಿ ಹೇಳುತ್ತಿರಲಿಲ್ಲವೇ!’’ ಹಾಗೆಯೇ ಚಿನು ಆ ರಾತ್ರಿ ಎಲ್ಲಿದ್ದಳೆಂದು ನನಗೆ ಗೊತ್ತಿದ್ದರೆ ನಾನು ಹೇಳುತ್ತಿರಲಿಲ್ಲವೇ!! ಅದರೆ ಇಡೀ ಚಿತ್ರಕ್ಕೆ ಒಂದು ನಿಜವಾದ ಭಾಷ್ಯೆ ಬರೆಯುವುದು ಮತ್ತು ಇಡೀ ಚಿತ್ರದ ದಿಟ್ಟತೆ ಮತ್ತು ಹೆಣ್ಣಿನ ಆತ್ಮ ಗೌರವವು ತನ್ನ ಮೇರುತನವನ್ನು ಮುಟ್ಟುವ ಕ್ಷಣವೆಂದರೆ ಅಲ್ಲಿಯವರೆಗೂ ಅನಾರೋಗ್ಯದಿಂದ ನರಳುತ್ತ ಹಿನ್ನೆಲೆಯಲ್ಲಿ ಉಳಿದುಕೊಳ್ಳುವ ಕುಟುಂಬದ ತಾಯಿ (ಮೃಣಾಲ್ ದಾ ಪತ್ನಿ ಗೀತಾ ಸೇನ್) ಕ್ಲೈಮಾಕ್ಸಿನಲ್ಲಿ ದಿಢೀರನೆ ಮುನ್ನೆಲೆಗೆ ಬಂದು ಇದಾವುದು ತನಗೆ ಸಂಬಂಧವಿಲ್ಲವೆಂಬಂತೆ ತನ್ನ ಮುಂಜಾವಿನ ಕಾರ್ಯಗಳಲ್ಲಿ ತೊಡಗುವುದರ ಮೂಲಕ ಇದು ನನ್ನ ಬದುಕು, ಇದಕ್ಕೆ ನಾನೇ ಯಜಮಾನಿ, ಹಾಗೆಯೇ ಚಿನು ರಾತ್ರಿ ಎಲ್ಲಿದ್ದಳೆಂಬುದು ಅವಳ ವೈಯಕ್ತಿಕ ಬದುಕು ಅದಕ್ಕೆ ಅವಳು ಮಾತ್ರ ಯಜಮಾನಿ, ಅದನ್ನು ಪ್ರಶ್ನಿಸಲು ನಮಗಾರಿಗೂ ಹಕ್ಕಿಲ್ಲ ಎಂದು ವೌನವಾಗಿಯೇ ಒಂದು ಶಬ್ದವನ್ನಾಡದೇ ಇಡೀ ವ್ಯವಸ್ಥೆಗೆ ದಿಟ್ಟ ಉತ್ತರ ನೀಡುತ್ತಾಳೆ. ಇಲ್ಲಿಯೇ ಏಕ್ ದಿನ್ ಪ್ರತಿದಿನ್ ಗೆಲ್ಲುವುದು. ಇದೇ ಅದರ ಮಾನವೀಯತೆ. ಇದೇ ನಿರ್ದೇಶಕನ ಜೀವಪರವಾದ ಸ್ತ್ರೀವಾದಿ ಮನಸ್ಸು.

(ಬಿಸಿಲು, ಬಯಲು, ನೆರಳು (ಹೊಸ ಅಲೆ ಸಿನೆಮಾ ಕುರಿತಾದ ಕಥನ): ಪುಸ್ತಕದಿಂದ ಆಯ್ದ ಭಾಗ

ಪ್ರಕಾಶಕರು: ಅಹರ್ನಿಶಿ ಪ್ರಕಾಶನ)

share
ಬಿ. ಶ್ರೀಪಾದ ಭಟ್
ಬಿ. ಶ್ರೀಪಾದ ಭಟ್
Next Story
X