Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ತಂದೆಯ ಆದರ್ಶ ಅನುಕರಿಸಿದ ಧೀಮಂತ ಅಧಿಕಾರಿ...

ತಂದೆಯ ಆದರ್ಶ ಅನುಕರಿಸಿದ ಧೀಮಂತ ಅಧಿಕಾರಿ ಮಧುಕರ್ ಶೆಟ್ಟಿ: ನ್ಯಾ.ಎನ್.ಸಂತೋಷ್ ಹೆಗ್ಡೆ

ಬಂಟರ ಸಂಘದಿಂದ ನುಡಿನಮನ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ6 Jan 2019 6:07 PM IST
share
ತಂದೆಯ ಆದರ್ಶ ಅನುಕರಿಸಿದ ಧೀಮಂತ ಅಧಿಕಾರಿ ಮಧುಕರ್ ಶೆಟ್ಟಿ: ನ್ಯಾ.ಎನ್.ಸಂತೋಷ್ ಹೆಗ್ಡೆ

ಬೆಂಗಳೂರು, ಜ.6: ತಂದೆ ಆದರ್ಶಗಳನ್ನು ಅನುಕರಣೆ ಮಾಡಿದ ಧೀಮಂತ ಜನಪರ ಸೇವಕ ಡಾ.ಮಧುಕರ ಶೆಟ್ಟಿ ಎಂದು ಲೋಕಾಯುಕ್ತ ಮಾಜಿ ನ್ಯಾಯಮೂರ್ತಿ ಎನ್.ಸಂತೋಷ್ ಹೆಗ್ಡೆ ಅಭಿಪ್ರಾಯಪಟ್ಟರು.

ರವಿವಾರ ವಿಜಯನಗರದಲ್ಲಿ ಬಂಟರ ಸಂಘ ಆಯೋಜಿಸಿದ್ದ ಡಾ.ಮಧುಕರ ಶೆಟ್ಟಿ ನುಡಿ ನಮನದಲ್ಲಿ ಮಾತನಾಡಿದ ಅವರು, ಹಿರಿಯ ಪತ್ರಕರ್ತ ವಡ್ಡರ್ಸೆ ರಘುರಾಮ್ ಶೆಟ್ಟಿಯವರ ಮಗನಾಗಿ ಅವರ ಆದರ್ಶಗಳನ್ನು ಜೀವನದುದ್ದಕ್ಕೂ ಅಳವಡಿಸಿಕೊಂಡಿದ್ದ ಮಧುಕರ ಶೆಟ್ಟಿ, ಸಮಾಜದ ಏಳಿಗೆಗೆ ಶ್ರದ್ಧೆಯಿಂದ ದುಡಿದ ಪ್ರಾಮಾಣಿಕ ಪೊಲೀಸ್ ಅಧಿಕಾರಿ ಎಂದು ತಿಳಿಸಿದರು.

ವಿಮಾನ ನಿಲ್ದಾಣದಲ್ಲಿ ಮುಧುಕರ ಶೆಟ್ಟಿಯವರ ಪಾರ್ಥಿವ ಶರೀರವನ್ನು ನೋಡಲು ಸೇರಿದ ಅಪಾರ ಅಭಿಮಾನಿ ಬಳಗವೇ ಸಾಕು ಅವರು ಹಣಕ್ಕಿಂತ ಮಿಗಿಲಾದದ್ದನ್ನು ಸಂಪಾದಿಸಿದ್ದಾರೆ ಎಂಬುದನ್ನು ತಿಳಿಸುತ್ತದೆ. ಆದರೆ, ಕೆಲವು ಭ್ರಷ್ಟ ರಾಜಕರಣಿಗಳು ಅವರ ಸಾವನ್ನು ಸಂಭ್ರಮಿಸಿದ್ದಾರೆ ಎಂದು ವಿಷಾದ ವ್ಯಕ್ತಪಡಿಸಿದರು.

ಲೋಕಾಯುಕ್ತಕ್ಕೆ ಸೇರಿ ನಿಷ್ಠೆಯಿಂದ ಕರ್ತವ್ಯ ನಿರ್ವಹಿಸಿದರು. ಒಬ್ಬ ಮಂತ್ರಿ ತನಗೆ ಬಂದ ಮಾಹಿತಿಯನ್ನು ದುರುಪಯೋಗ ಮಾಡಿಕೊಂಡಾಗ, ಮಂತ್ರಿ ಹಾಗೂ ಮಂತ್ರಿ ಮಗನನ್ನು ಜೈಲಿಗೆ ಕಳಿಸುವ ಮೂಲಕ ದೇಶದಲ್ಲಿ ಹೊಸ ಸಂಚಲನ ಮೂಡಿಸಿದರು ಎಂದು ಹೇಳಿದರು.

 ನಿವೃತ್ತ ಐಪಿಎಸ್ ಅಧಿಕಾರಿ ಗುರು ಪ್ರಸಾದ್ ಮಾತನಾಡಿ, ನನ್ನ ವೃತ್ತಿ ಜೀವನದಲ್ಲಿ 600ಕ್ಕೂ ಹೆಚ್ಚು ಐಪಿಎಸ್ ಅಧಿಕಾರಿಗಳ ಜೊತೆ ಕೆಲಸ ಮಾಡಿದ್ದೇನೆ. ಅಷ್ಟು ಅಧಿಕಾರಿಗಳಲ್ಲಿ ಹೃದಯ ಮೆಚ್ಚಿದ ಅಧಿಕಾರಿ ಮಧುಕರ ಶೆಟ್ಟಿ. ಜೆಎನ್‌ಯುನಲ್ಲಿ ಓದಿದ ಅವರು. ಬೇರೆಯವರಿಗೆ ತುಂಬಾ ಆದರ್ಶ ವ್ಯಕ್ತಿಯಾಗಿ ಬದುಕಿದ್ದರು. ಪತ್ರಕರ್ತ ವಡ್ಡರ್ಸೆ ರಘುರಾಮ್ ಶೆಟ್ಟಿಯವರ ಮಗ ಎಂದು ತಿಳಿದಾಗ ಅವರ ಮೇಲಿನ ಪ್ರೀತಿ ದುಪ್ಪಟ್ಟಾಯಿತು ಎಂದು ಭಾವುಕರಾದರು.

ನನ್ನ ಬಳಿ ಎಲ್ಲ ನೋವನ್ನೂ ಹಂಚಿಕೊಳ್ಳುತ್ತಿದ್ದ ಮಧು. ಅಧಿಕಾರದಲ್ಲಿ ಅನೇಕ ನೋವು- ನಲಿವುಗಳನ್ನು ಅನುಭವಿಸಿದ್ದರು. ನಕ್ಸಲ್ ಮನೆಗೆ ಹೋಗಿ ಊಟ ಮಾಡುತ್ತಾರೆ ಎಂದು ದೂರು ಬಂದಾಗ, ಅವರ ವರ್ಗಾವಣೆಗೆ ಅದೇಶ ಬಂತು. ಇದರ ಕುರಿತು ಮಧುರವರನ್ನು ಕೇಳಿದಾಗ, ಏಕೆ ನಕ್ಸಲ್ ಆಗುತ್ತಾನೆ ಹಾಗೂ ನಕ್ಸಲ್‌ರ ಸಾಮಾಜಿಕ ಆರ್ಥಿಕ ಸ್ಥಿತಿಗಳ ಗಂಭೀರವಾದ ಸಂರಚನೆಯನ್ನು ತಿಳಿಸಿದರು. ಇದರಿಂದ ಅವರ ಮೇಧಾವಿತನ ಗೊತ್ತಾಯಿತು ಎಂದು ನುಡಿದರು.

ಕಾಡುಗಳ್ಳ ವೀರಪ್ಪನ್‌ನನ್ನು ಸಾಯಿಸಿದ್ದು ನಾನೇ ಎಂದು ಎಲ್ಲರೂ ಢಂಗುರ ಹೊಡೆದು ಕೊಂಡು ಬೆಂಗಳೂರಿನಲ್ಲಿ ಸೈಟ್ ಪಡೆದುಕೊಂಡರು. ಆದರೆ, ಮಧು ಪಡೆಯಲಿಲ್ಲ. ನನಗೆ ಸರಕಾರ ಸಂಬಳ ನೀಡುತ್ತೆ. ಅಲ್ಲದೆ, ನನ್ನ ಕರ್ತವ್ಯವನ್ನು ನಾನು ನಿರ್ವಹಿಸುತ್ತಿದ್ದೇನೆ ಎಂದು ಹೇಳಿದರು.

ಅಪರಾಧ ವಿಭಾಗದ ಡಿಸಿಪಿ ಎಸ್.ಗಿರೀಶ್ ಮಾತನಾಡಿ, ನಾವು ಮಹಾತ್ಮ ಗಾಂಧೀಜಿ, ಸುಭಾಷ್ ಚಂದ್ರಬೋಷ್, ಭಗತ್‌ಸಿಂಗ್‌ರ ಆದರ್ಶಗಳನ್ನು ಓದುತ್ತೇವೆ. ಆದರೆ, ಮಧು ಅದನ್ನು ಪಾಲನೆ ಮಾಡುತ್ತಿದ್ದರೂ. ಭ್ರಷ್ಟರಲ್ಲಿ ನಡುಕ ಹುಟ್ಟಿಸುವ ವ್ಯಕ್ತಿತ್ವ ಹೊಂದಿದ್ದರು ಹಾಗೂ ಕೆಲಸದ ವಿಷಯದಲ್ಲಿ ಪಕ್ಕ ಆಗಿದ್ದರು. ತಪ್ಪು ಮಾಡಿದ ಅಧಿಕಾರಿಗಳಿಗೆ ಶಿಕ್ಷೆ ನೀಡುತ್ತಿರಲಿಲ್ಲ, ಬದಲಿಗೆ ಪರಿವರ್ತನೆ ತರುತ್ತಿದ್ದರು ಎಂದರು.

ಹಣಕ್ಕೆ ಎಂದೂ ಮಹತ್ವ ನೀಡಿದ ಅವರು ಪ್ರಚಾರ ಪ್ರಿಯರಾಗದೆ, ಅಪರವಾದ ಅಭಿಮಾನಿ ಬಳಗವನ್ನು ಹೊಂದಿದ್ದರು. ಅವರ ಜೊತೆಯಲ್ಲಿ ಚರ್ಚೆ ಮಾಡುವಾಗ ಭಗತ್‌ಸಿಂಗ್, ಚಂದ್ರಶೇಖರ್ ಅಜಾದ್‌ರಂತಹ ಸ್ವತಂತ್ರ ಯೋಧರ ಜೊತೆ ಇದ್ದೇನೆ ಎಂದು ಭಾಸವಾಗುತ್ತಿತ್ತು. ಮುಂದಿನ ದಿನದಲ್ಲಿ ಅವರ ಹೆಸರಲ್ಲಿ ಮ್ಯೂಸಿಯಂ ಹಾಗೂ ಸಂಶೋಧನಾ ಕೇಂದ್ರ ಸ್ಥಾಪಿಸಲಾಗುತ್ತದೆ ಎಂದು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X