ಇಬ್ಬರು ಸಹೋದ್ಯೋಗಿಗಳಿಗೆ ಗುಂಡಿಕ್ಕಿ ಆತ್ಮಹತ್ಯೆ ಮಾಡಿಕೊಂಡ ಸಿಆರ್‌ಪಿಎಫ್ ಯೋಧ

ಶ್ರೀನಗರ,ಜ.6: ಸಿಆರ್‌ಪಿಎಫ್ ಯೋಧನೋರ್ವ ತನ್ನ ಇಬ್ಬರು ಸಹೋದ್ಯೋಗಿಗಳ ಮೇಲೆ ಗುಂಡು ಹಾರಿಸಿ ಬಳಿಕ ಸ್ವಯಂ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶನಿವಾರ ತಡರಾತ್ರಿ ಇಲ್ಲಿಯ ಪಂತನಗರದಲ್ಲಿರುವ ಅರೆ ಸೇನಾಪಡೆಯ ಶಿಬಿರದಲ್ಲಿ ನಡೆದಿದೆ.
ಮೃತ ಯೋಧನನ್ನು ಮುಕೇಶ ಭಾವುಕ್ ಎಂದು ಗುರುತಿಸಲಾಗಿದೆ. ಯಾವುದೋ ವಿಚಾರದಲ್ಲಿ ತನ್ನ ಸಹೋದ್ಯೋಗಿಯೊಂದಿಗೆ ವಾಗ್ವಾದಕ್ಕಿಳಿದಿದ್ದ ಭಾವುಕ್ ತನ್ನ ಸರ್ವಿಸ್ ರೈಫಲ್‌ನಿಂದ ಗುಂಡುಗಳನ್ನು ಹಾರಿಸಿದ್ದರು. ಬಳಿಕ ಸ್ವಯಂ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗುಂಡಿನ ದಾಳಿಯಿಂದ ಗಾಯಗೊಂಡಿರುವ ಇಬ್ಬರು ಯೋಧರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ದೇಹಸ್ಥಿತಿ ಸ್ಥಿರವಾಗಿದೆ ಎಂದು ಪೊಲೀಸ್ ಅಧಿಕಾರಿಯೋರ್ವರು ತಿಳಿಸಿದರು.
Next Story





