Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. 14 ನಿಗಮ-ಮಂಡಳಿಗಳಿಗೆ ಅಧ್ಯಕ್ಷರ ನೇಮಕ:...

14 ನಿಗಮ-ಮಂಡಳಿಗಳಿಗೆ ಅಧ್ಯಕ್ಷರ ನೇಮಕ: ಮುಖ್ಯಮಂತ್ರಿ ಆದೇಶ

ವಾರ್ತಾಭಾರತಿವಾರ್ತಾಭಾರತಿ6 Jan 2019 9:51 PM IST
share
14 ನಿಗಮ-ಮಂಡಳಿಗಳಿಗೆ ಅಧ್ಯಕ್ಷರ ನೇಮಕ: ಮುಖ್ಯಮಂತ್ರಿ ಆದೇಶ

ಬೆಂಗಳೂರು, ಜ.6: ರಾಜ್ಯದ 14 ಪ್ರಮುಖ ನಿಗಮ, ಮಂಡಳಿ, ಪ್ರಾಧಿಕಾರ, ಸಂಸ್ಥೆ, ಸಮಿತಿ, ಆಯೋಗಗಳಿಗೆ 14 ಶಾಸಕರನ್ನು ಅಧ್ಯಕ್ಷರನ್ನಾಗಿ, ಸಂಪುಟ ದರ್ಜೆ ಸ್ಥಾನಮಾನದೊಂದಿಗೆ ಈ ಕೂಡಲೆ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ನೇಮಕ ಮಾಡಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ರವಿವಾರ ಆದೇಶ ಹೊರಡಿಸಿದ್ದಾರೆ.

 ಕಾಂಗ್ರೆಸ್ ಹೈಕಮಾಂಡ್ 19 ಮಂದಿ ಶಾಸಕರಿಗೆ ನಿಗಮ, ಮಂಡಳಿಯ ಅಧ್ಯಕ್ಷ ಸ್ಥಾನ, 5 ಮಂದಿ ಶಾಸಕರು ಹಾಗೂ 4 ವಿಧಾನಪರಿಷತ್ ಸದಸ್ಯರಿಗೆ ಸಂಸದೀಯ ಕಾರ್ಯದರ್ಶಿಗಳ ಸ್ಥಾನಮಾನ ನೀಡುವಂತೆ ಡಿ.21ರಂದು ಮುಖ್ಯಮಂತ್ರಿಗೆ ಶಿಫಾರಸ್ಸು ಮಾಡಿತ್ತು.

ರಾಜ್ಯ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ(ಭೂ ಸೇನಾ) ನಿಗಮ (ಕೆಆರ್‌ಐಡಿಎಲ್)ದ ಅಧ್ಯಕ್ಷ-ಬಿ.ಕೆ.ಸಂಗಮೇಶ್(ಭದ್ರಾವತಿ ಶಾಸಕ), ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಅಧ್ಯಕ್ಷ-ಆರ್.ನರೇಂದ್ರ( ಹನೂರು ಶಾಸಕ), ರಾಜ್ಯ ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ-ಬಿ.ನಾರಾಯಣ ರಾವ್(ಬಸವಕಲ್ಯಾಣ ಶಾಸಕ).

ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ-ಡಾ.ಉಮೇಶ್ ಜಿ.ಜಾಧವ್(ಚಿಂಚೋಳಿ ಶಾಸಕ), ಹಟ್ಟಿ ಚಿನ್ನದ ಗಣಿ ಕಂಪೆನಿ ನಿಯಮಿತದ ಅಧ್ಯಕ್ಷ-ಟಿ.ರಘುಮೂರ್ತಿ(ಚಳ್ಳಕೆರೆ ಶಾಸಕ), ರಾಜ್ಯ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧ್ಯಕ್ಷ-ಯಶವಂತರಾಯಗೌಡ ಬಿ.ಪಾಟೀಲ್(ಇಂಡಿ ಶಾಸಕ).

ರಾಜ್ಯ ಸಾಬೂನು ಮತ್ತು ಮಾರ್ಜಕ ನಿಯಮಿತದ ಅಧ್ಯಕ್ಷ- ಬಿ.ಎ.ಬಸವರಾಜ (ಕೆ.ಆರ್.ಪುರ ಶಾಸಕ), ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತ (ಕಿಯೋನಿಕ್ಸ್)ದ ಅಧ್ಯಕ್ಷ-ಬಿ.ಶಿವಣ್ಣ (ಆನೇಕಲ್ ಶಾಸಕ), ಡಾ.ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧ್ಯಕ್ಷ-ಎಸ್.ಎನ್.ನಾರಾಯಣಸ್ವಾಮಿ (ಬಂಗಾರಪೇಟೆ ಶಾಸಕ).

ರಾಜ್ಯ ವೃತ್ತಿ ತರಬೇತಿ ಮತ್ತು ಕೌಶಲ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ-ಮುನಿರತ್ನ (ರಾಜರಾಜೇಶ್ವರಿ ನಗರ ಶಾಸಕ), ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ(NW-KSRTC) ಅಧ್ಯಕ್ಷ-ಅರಬೈಲ್ ಶಿವರಾಂ ಹೆಬ್ಬಾರ್(ಯಲ್ಲಾಪುರ ಶಾಸಕ), ರಾಜ್ಯ ಸಣ್ಣ ಕೈಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷ-ಬಿ.ಎಸ್.ಸುರೇಶ್(ಹೆಬ್ಬಾಳ ಶಾಸಕ), ರಾಜ್ಯ ಖನಿಜ ನಿಗಮ(ಮೈಸೂರು ಮಿನರಲ್ಸ್)ದ ಅಧ್ಯಕ್ಷೆ-ಲಕ್ಷ್ಮೀಹೆಬ್ಬಾಳ್ಕರ್(ಬೆಳಗಾವಿ ಗ್ರಾಮೀಣ) ಹಾಗೂ ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ- ಟಿ.ಡಿ.ರಾಜೇಗೌಡ(ಶೃಂಗೇರಿ ಶಾಸಕ)ರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.

ಕೈ ತಪ್ಪಿದ ಅಧಿಕಾರ ? : ರಾಜ್ಯ ರಸ್ತೆ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ಟಿ.ವೆಂಕಟರಮಣಯ್ಯ, ರಾಜ್ಯ ರೇಷ್ಮೆ ಕೈಗಾರಿಕಾ ನಿಗಮದ ಅಧ್ಯಕ್ಷರನ್ನಾಗಿ ಎಸ್.ಎನ್.ಸುಬ್ಬಾರೆಡ್ಡಿ, ಬಿಎಂಆರ್‌ಟಿಸಿ ಅಧ್ಯಕ್ಷರನ್ನಾಗಿ ಎನ್.ಎ.ಹಾರೀಸ್, ಬಿಡಿಎ ಅಧ್ಯಕ್ಷರಾಗಿ ಎಸ್.ಟಿ.ಸೋಮಶೇಖರ್, ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರನ್ನಾಗಿ ಡಾ.ಕೆ.ಸುಧಾಕರ್, ಸಂಸದೀಯ ಕಾರ್ಯದರ್ಶಿಯಾಗಿ ವಿಧಾನಪರಿಷತ್ ಸದಸ್ಯ ಎಂ.ಎ.ಗೋಪಾಲ ಸ್ವಾಮಿ.

ರಾಜ್ಯ ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ಶಾಸಕ ಶರಣಬಸಪ್ಪ ದರ್ಶನಾಪುರ್, ಹೊಸದಿಲ್ಲಿಯ ವಿಶೇಷ ಪ್ರತಿನಿಧಿಯಾಗಿ ಶಾಸಕ ಡಾ.ಅಜಯ್‌ಸಿಂಗ್ ಹಾಗೂ ಮುಖ್ಯಮಂತ್ರಿಯ ರಾಜಕೀಯ ಕಾರ್ಯದರ್ಶಿ ಯನ್ನಾಗಿ ಶಾಸಕ ವಿ.ಮುನಿಯಪ್ಪರನ್ನು ನೇಮಕ ಮಾಡುವಂತೆ ಕಾಂಗ್ರೆಸ್ ಹೈಕಮಾಂಡ್ ಶಿಫಾರಸ್ಸು ಮಾಡಿತ್ತು. ಆದರೆ, ಇವರ ನೇಮಕಾತಿ ಸಂಬಂಧ ಮುಖ್ಯಮಂತ್ರಿ ಯಾವುದೇ ನಿರ್ಧಾರ ಕೈಗೊಂಡಿಲ್ಲ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X