Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಜ.10ರಂದು ಎಂಆರ್‌ಪಿಎಲ್ ವಿರುದ್ಧ...

ಜ.10ರಂದು ಎಂಆರ್‌ಪಿಎಲ್ ವಿರುದ್ಧ ಕ್ರಮಕ್ಕೆ ಆಗ್ರಹ: ಜಿಲ್ಲಾಧಿಕಾರಿ ಕಚೇರಿಗೆ ಪೊರಕೆ ಮೆರವಣಿಗೆ

ವಾರ್ತಾಭಾರತಿವಾರ್ತಾಭಾರತಿ7 Jan 2019 9:51 PM IST
share

ಮಂಗಳೂರು, ಜ.7: ಎಂಆರ್‌ಪಿಎಲ್ ಮೂರನೇ ಹಂತದ ಕೋಕ್ ಸಲ್ಫರ್ ಘಟಕದಿಂದ ಉಂಟಾದ ಕೆಮಿಕಲ್ ಮಾಲಿನ್ಯದ ಸಮಸ್ಯೆಗಳ ವಿರುದ್ಧ ಜ.10ರಂದು ಬೆಳಗ್ಗೆ 10:30ಕ್ಕೆ ಮಿನಿ ವಿಧಾನಸೌಧದಿಂದ ಜಿಲ್ಲಾಧಿಕಾರಿ ಕಚೇರಿಯವರಗೆ ಪೊರಕೆ ಮೆರವಣಿಗೆ, ಧರಣಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ ಎಂದು ನಾಗರಿಕ ಹೋರಾಟ ಸಮಿತಿಯ ಪ್ರಮುಖ ಮುನೀರ್ ಕಾಟಿಪಳ್ಳ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಜೋಕಟ್ಟೆ, ಕಳವಾರು, ತೋಕೂರು ಗ್ರಾಮಸ್ಥರು ವರ್ಷಗಳ ಕಾಲ ನಡೆಸಿದ ಹೋರಾಟದ ಪರಿಣಾಮವಾಗಿ ಸರಕಾರ ಹೊರಡಿಸಿದ ಆರು ಅಂಶಗಳ ಪರಿಹಾರ ಕ್ರಮದ ಆದೇಶವನ್ನು ಎಂಆರ್‌ಪಿಎಲ್ ಜಾರಿಗೆ ತರದೆ ವಂಚಿಸಿದೆ, ಜಿಲ್ಲಾಡಳಿತವೂ ಕಂಪೆನಿಯ ಜೊತೆ ಶಾಮೀಲಾಗಿ ಜನತೆಯ ಜೀವನದ ಜೊತೆ ಚೆಲ್ಲಾಟವಾಡುತ್ತಿದೆ ಎಂದು ಆರೋಪಿಸಿದ್ದಾರೆ.

ಪರಿಸರ ನಿಯಮಗಳನ್ನು ಉಲ್ಲಂಘಿಸಿ, ಹಸಿರು ವಲಯ ನಿರ್ಮಿಸದೆ ಕಂಪೆನಿಯು ಜನವಸತಿ ಪ್ರದೇಶದಲ್ಲಿ ಅಕ್ರಮವಾಗಿ ಪೆಟ್‌ಕೋಕ್, ಸಲ್ಫರ್ ಘಟಕ ಸ್ಥಾಪಿಸಿದ ಪರಿಣಾಮ ಸಮೀಪದ ಗ್ರಾಮಗಳ ಜನತೆಯ ಬದುಕಿನ ಮೇಲೆ ಗಂಭೀರ ಪರಿಣಾಮ ಉಂಟಾಗಿತ್ತು. ಪೆಟ್ ಕೋಕ್, ಸಲ್ಫರ್ ಹಾರುಬೂದಿ, ಶಬ್ದ, ವಾಯು ಮಾಲಿನ್ಯದ ವ್ಯಾಪಕ ಸಮಸ್ಯೆಗಳ ವಿರುದ್ಧ ಜನತೆ ತೀವ್ರ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ರಾಜ್ಯ ಸರಕಾರವು ಹಸಿರು ವಲಯ ನಿರ್ಮಾಣ ಸಹಿತ ಆರು ಅಂಶಗಳ ಪರಿಹಾರ ಕ್ರಮ ಕೈಗೊಳ್ಳುವಂತೆ ಅಧಿಕೃತ ಆದೇಶ ಹೊರಡಿಸಿತ್ತು ಎಂದರು.

ಆದೇಶ ಜಾರಿಗೆ ಸಂಬಂಧಿಸಿ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಸಂಸದ, ಶಾಸಕರು ಸದಸ್ಯರಾಗಿರುವ ಸಮಿತಿ ರಚಿಸಿತ್ತು. ಆದರೆ ಸರಕಾರದ ಆದೇಶ ಹೊರಟು ವರ್ಷಗಳು ಕಳೆದರೂ ಕಂಪೆನಿಯು ಅದೇಶವನ್ನು ಜಾರಿಗೆ ತರದೆ ಕಾಲಹರಣ ಮಾಡುತ್ತಿದೆ. ಜಿಲ್ಲಾಧಿಕಾರಿ ಕನಿಷ್ಠ ಸಮಿತಿಯ ಸಭೆಯನ್ನೂ ಸೇರಿಸದೆ ಕಂಪೆನಿಯ ಪರ ಮೃದುಧೋರಣೆ ತೋರಿಸುತ್ತಿದ್ದಾರೆ. ಜನಪ್ರತಿನಿಧಿಗಳು ಈ ಕುರಿತು ಮೌನಕ್ಕೆ ಶರಣಾಗಿ ಗ್ರಾಮಸ್ಥರ ಸಮಸ್ಯೆಗಳಿಗೆ ಕುರುಡಾಗಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

ಈ ಹಿನ್ನಲೆಯಲ್ಲಿ ಮಾರಕ ಮಾಲಿನ್ಯದಿಂದ ಕಂಗೆಟ್ಟಿರುವ ಸ್ಥಳೀಯರು ಮತ್ತೊಮ್ಮೆ ತೀವ್ರತರದ ಹೋರಾಟಕ್ಕೆ ಮುಂದಾಗಿದ್ದು, ಕಂಪೆನಿಯ ವಂಚನೆ, ಜಿಲ್ಲಾಡಳಿತದ ಕಂಪೆನಿ ಪರ ನಿಲುವುಗಳನ್ನು ವಿರೋಧಿಸಿ, ಸರಕಾರದ ಆದೇಶ ತಕ್ಷಣ ಜಾರಿಗೆ ತರಬೇಕು. ಮಾಲಿನ್ಯಕಾರಕ, ವಂಚಕ ಕಂಪೆನಿ ಎಂಆರ್‌ಪಿಎಲ್‌ಅನ್ನು ಸಾವಿರ ಎಕರೆ ಕೃಷಿ ಭೂಮಿಯಲ್ಲಿ ವಿಸ್ತರಿಸುವ ಯೋಜನೆ ಕೈ ಬಿಡಬೇಕು ಎಂದು ಒತ್ತಾಯಿಸಿ ಪೊರಕೆ ಮೆರವಣಿಗೆ ಹಮ್ಮಿಕೊಂಡಿರುವುದಾಗಿ ಮುನೀರ್ ಕಾಟಿಪಳ್ಳ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X