ಅಕ್ರಮ ಸಾಗಿಸುತ್ತಿದ್ದ ನಾಲ್ಕು ಕರುಗಳು ವಶಕ್ಕೆ
ಕುಂದಾಪುರ, ಜ.7: ಓಮ್ನಿ ಕಾರಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ನಾಲ್ಕು ಜಾನುವಾರುಗಳನ್ನು ಕುಂದಾಪುರ ಪೊಲೀಸರು ಹೆಮ್ಮಾಡಿ ಜಂಕ್ಷನ್ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಜ.7ರಂದು ಬೆಳಗಿನ ಜಾವ ವಶಪಡಿಸಿಕೊಂಡಿದ್ದಾರೆ.
ತಪಾಸಣೆ ವೇಳೆ ಬೈಂದೂರು ಕಡೆಯಿಂದ ಕುಂದಾಪುರ ಕಡೆ ಬರುತ್ತಿದ್ದ ಮಾರುತಿ ಓಮಿನಿ ಕಾರು ಪೊಲೀಸರು ನಿಲ್ಲಿಸಲು ಸೂಚನೆ ನೀಡಿದರೂ ನಿಲ್ಲಿಸದೆ ಚಲಾಯಿಸಿಕೊಂಡು ಹೋಗಿದ್ದು, ಬಳಿಕ ಕಾರನ್ನು ಸಂತೋಷ ನಗರ ಕ್ರಾಸ್ ರಸ್ತೆಯಲ್ಲಿ ನಿಲ್ಲಿಸಿ ಇಬ್ಬರು ಆರೋಪಿಗಳು ಪರಾರಿಯಾದರೆನ್ನಲಾಗಿದೆ.
ಕಾರಿನಲ್ಲಿದ್ದ ನಾಲ್ಕು ಗಂಡು ಕರುಗಳು ಹಾಗೂ ಓಮ್ನಿ ಕಾರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಕಾರು ಕೋಡಿ ಇಸುಬು ಬ್ಯಾರಿ ಎಂಬವರದ್ದು ಎಂಬುದಾಗಿ ತಿಳಿದುಬಂದಿದೆ.
ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





