Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಪತಿಯ ಕೊಲೆ ಯತ್ನ ಪ್ರಕರಣ: ಪತ್ನಿ,...

ಪತಿಯ ಕೊಲೆ ಯತ್ನ ಪ್ರಕರಣ: ಪತ್ನಿ, ಪ್ರಿಯಕರ, ಮೂವರು ಸಹಚರರ ಬಂಧನ

ವಾರ್ತಾಭಾರತಿವಾರ್ತಾಭಾರತಿ7 Jan 2019 10:46 PM IST
share
ಪತಿಯ ಕೊಲೆ ಯತ್ನ ಪ್ರಕರಣ: ಪತ್ನಿ, ಪ್ರಿಯಕರ, ಮೂವರು ಸಹಚರರ ಬಂಧನ

ಬೆಂಗಳೂರು, ಜ.7: ಪ್ರಿಯಕರನ ಜತೆಗೂಡಿ ಪತಿಯನ್ನೇ ಕೊಲೆ ಮಾಡಲು ಸಂಚು ರೂಪಿಸಿದ ಆರೋಪದಡಿ ಪತ್ನಿ, ಪ್ರಿಯಕರ ಹಾಗೂ ಮೂವರು ಸಹಚರರನ್ನು ಇಲ್ಲಿನ ಹುಳಿಮಾವು ಠಾಣೆ ಪೊಲೀಸರು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ.

ಮಮತಾ(28), ಪ್ರಶಾಂತ್(20), ಅನಿಲ್ ಬಿಸ್ವಾಸ್(21), ಝಾಕಿರ್(20) ಮತ್ತು ಹರೀಶ್ ಕುಮಾರ್ ಬಂಧಿತ ಆರೋಪಿಗಳೆಂದು ಪೊಲೀಸರು ತಿಳಿಸಿದ್ದಾರೆ.

ನಗರದ ಅರಕೆರೆಯ ಬಿಟಿಎಸ್ ಲೇಔಟ್ ಕೃಷ್ಣರಾಯರ ರಸ್ತೆಯ 1ನೆ ಕ್ರಾಸ್‌ನಲ್ಲಿ ನಾಗರಾಜ(38) ಎಂಬುವವರು ವಾಸವಾಗಿದ್ದು, ಡಿ.14ರ ರಾತ್ರಿ ನಾಲ್ವರು ಅಪರಿಚಿತರು ಏಕಾಏಕಿ ಮನೆಗೆ ನುಗ್ಗಿ ನಾಗರಾಜು ಅವರನ್ನು ಹಿಡಿದು ಎಳೆದಾಡಿ ಮುಖಕ್ಕೆ ಹೊಡೆದು ಕತ್ತಿನಲ್ಲಿದ್ದ 40 ಗ್ರಾಂ ಚಿನ್ನದ ಸರ, ಮೊಬೈಲ್ ಹಾಗೂ ಇವರ ಪತ್ನಿ ಮಮತಾರ ಕೈಲಿದ್ದ 2 ಚಿನ್ನದ ಉಂಗುರಗಳನ್ನು ಕಸಿದು ಪರಾರಿಯಾಗಿದ್ದರು. ಈ ಬಗ್ಗೆ ನಾಗರಾಜು ಅವರು ಹುಳಿಮಾವು ಠಾಣೆಗೆ ದೂರು ನೀಡಿದ್ದರು.

ಈ ಮಧ್ಯೆ ಡಿ.18ರಂದು ನಾಗರಾಜು ಅವರು ಠಾಣೆಗೆ ತೆರಳಿ, ಪತ್ನಿ ಮಮತಾ ಡಿ.15ರಂದು ಬೆಳಗ್ಗೆ ಕೆಲಸಕ್ಕೆ ಹೋಗುವುದಾಗಿ ಹೇಳಿ ಹೋದಾಕೆ ವಾಪಸ್ಸು ಬಂದಿಲ್ಲ ಹಾಗೂ ಮನೆಯ ಮಾಲಕನ ಮಗ ಪ್ರಶಾಂತ್ ಸಹ ಅಂದಿನಿಂದ ಕಾಣೆಯಾಗಿದ್ದಾನೆಂದು ದೂರು ನೀಡಿದ್ದರು. ಪ್ರಕರಣದ ತನಿಖೆ ಕೈಗೊಂಡಿದ್ದ ಪೊಲೀಸರು ವಿವಿಧ ಮಾಹಿತಿಗಳನ್ನು ಕಲೆ ಹಾಕಿ ನಾಗರಾಜು ಅವರ ಪತ್ನಿ ಮಮತಾ ಮತ್ತು ಪ್ರಶಾಂತ್ ಹಾಗೂ ಮೂವರನ್ನು ಪತ್ತೆ ಹಚ್ಚಿ ಕರೆತಂದಿದ್ದರು ಎಂದು ತಿಳಿದುಬಂದಿದೆ.

ಬಳಿಕ ವಿಚಾರಣೆಗೊಳಪಡಿಸಿದಾಗ ನಾಗರಾಜು ಪತ್ನಿ ಮಮತಾ ತಾನು ವಾಸವಾಗಿದ್ದ ಮನೆಯ ಮಾಲಕನ ಮಗ ಪ್ರಶಾಂತ್ ಜತೆ ಅಕ್ರಮ ಸಂಬಂಧ ಇಟ್ಟುಕೊಂಡಿರುವುದನ್ನು ಪತಿ ಅನುಮಾನಿಸಿದ್ದರು. ಪತಿ ನಾಗರಾಜು ಬದುಕಿದ್ದರೆ ತಮ್ಮ ಸಂಬಂಧ ವಿಷಯ ಹೊರಬರಬಹುದೆಂದು ತಿಳಿದು ಪತಿಯ ಕೊಲೆಗೆ 1.5 ಲಕ್ಷ ರೂ. ನೀಡಿ ದರೋಡೆಕೋರರಂತೆ ಮನೆಗೆ ನುಗ್ಗಿ ಬೆಲೆಬಾಳುವ ವಸ್ತುಗಳನ್ನು ದೋಚುವ ನೆಪದಲ್ಲಿ ಕೊಲೆ ಮಾಡಲು ಸಂಚು ರೂಪಿಸಿದ್ದಾಗಿ ವಿಚಾರಣೆ ವೇಳೆ ಮಮತಾ ಬಾಯಿಬಿಟ್ಟಿದ್ದಾಳೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಆರೋಪಿಗಳು ನೀಡಿದ ಹೇಳಿಕೆ ಮೇರೆಗೆ ಸುಲಿಗೆಯಾಗಿದ್ದ ಚಿನ್ನದ ಸರ, ಮೊಬೈಲ್, ಒಡವೆಗಳು, ಕೃತ್ಯಕ್ಕೆ ಬಳಸಿದ್ದ ಕಾರು, ಸ್ಕೂಟರ್ ಜಪ್ತಿ ಮಾಡಲಾಗಿದೆ. ಆಗ್ನೇಯ ವಿಭಾಗದ ಡಿಸಿಪಿ ಡಾ.ಬೋರಲಿಂಗಯ್ಯ ಮಾರ್ಗದರ್ಶನದಲ್ಲಿ ಎಲೆಕ್ಟ್ರಾನಿಕ್ ಸಿಟಿ ಸಹಾಯಕ ಪೊಲೀಸ್ ಆಯುಕ್ತ ರಮೇಶ್ ನೇತೃತ್ವದಲ್ಲಿ ಹುಳಿಮಾವು ಠಾಣೆ ಎಸ್ಸೈ ಚಂದ್ರಪ್ಪ ಅವರನ್ನೊಳಗೊಂಡ ತಂಡ ಆರೋಪಿಗಳನ್ನು ಬಂಧಿಸಿ 2 ಲಕ್ಷ ರೂ. ಬೆಲೆಬಾಳುವ ಮಾಲನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ ಎಂದು ಪ್ರಕಟನೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X