Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ವಿಕಲಚೇತನರಿಗೆ ಸರಕಾರಿ ಸೌಲಭ್ಯ...

ವಿಕಲಚೇತನರಿಗೆ ಸರಕಾರಿ ಸೌಲಭ್ಯ ಒದಗಿಸುವುದು ಅಧಿಕಾರಿಗಳ ಕರ್ತವ್ಯ: ಚಿಕ್ಕಮಗಳೂರು ಡಿಸಿ ಶ್ರೀರಂಗಯ್ಯ

ವಾರ್ತಾಭಾರತಿವಾರ್ತಾಭಾರತಿ7 Jan 2019 11:59 PM IST
share
ವಿಕಲಚೇತನರಿಗೆ ಸರಕಾರಿ ಸೌಲಭ್ಯ ಒದಗಿಸುವುದು ಅಧಿಕಾರಿಗಳ ಕರ್ತವ್ಯ: ಚಿಕ್ಕಮಗಳೂರು ಡಿಸಿ ಶ್ರೀರಂಗಯ್ಯ

ಚಿಕ್ಕಮಗಳೂರು, ಜ.7: ವಿಕಲಚೇತನರಿಗೆ ಆವಶ್ಯಕತೆಗಳನ್ನು ಪೂರೈಸುವ ನಿಟ್ಟಿನಲ್ಲಿ ಸರಕಾರ ಹಲವು ಯೋಜನೆಗಳನ್ನು ಜಾರಿಗೆ ತಂಇದೆ. ಇವು ವಿಕಲಚೇತನರಿಗೆ ಅತ್ಯಗತ್ಯವಾಗಿ ತಲುಪಬೇಕು. ಸರಕಾರಿ ಸೌಲಭ್ಯಗಳನ್ನು ವಿಕಲಚೇತನರಿಗೆ ತಲುಪಿಸುವುದು ಅಧಿಕಾರಿಗಳ ಆದ್ಯಕರ್ತವ್ಯವಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಕೆ.ಶ್ರೀರಂಗಯ್ಯ ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆಸ ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ವಿಕಲಚೇತನರ ಸರ್ವಾಂಗೀಣ ಅಭಿವೃದ್ಧಿಗೆ ಸರಕಾರ ಅನೇಕ ಕಲ್ಯಾಣ ಯೋಜನೆಗಳನ್ನು ಜಾರಿ ಮಾಡಿದೆ. ಈ ಯೋಜನೆಗಳ ಬಗ್ಗೆ ಹೆಚ್ಚಿನ ಪ್ರಚಾರ ನೀಡುವುದರೊಂದಿಗೆ ಅವುಗಳನ್ನು ಫಲಾನುಭವಿಗಳಿಗೆ ತಲುಪಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಶ್ರಮಿಸಬೇಕೆಂದ ಅವರು,  ವಿಕಲಚೇತನರಿಗೆ ಉಚಿತ ವೈದ್ಯಕೀಯ ತಪಾಸಣೆ ಶಿಬಿರವನ್ನು ಪ್ರತೀ ಮಂಗಳವಾರ ಹಾಗೂ ಶುಕ್ರವಾರ ತಾಲೂಕು ಮಟ್ಟದಲ್ಲಿ ನಡೆಯಲಿದ್ದು, ವಿಕಲಚೇತನರು ಇದರ ಸದುಪಯೋಗವನ್ನು ಪಡಿಸಿಕೊಳ್ಳಬೇಕು ಎಂದರು.

ಸರಕಾರದ ವಿವಿಧ ಇಲಾಖೆಗಳು, ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್, ಗ್ರಾಮ ಪಂಚಾಯತ್, ನಗರಸಭೆ ಹಾಗೂ ಪುರಸಭೆಗಳಲ್ಲಿ ಶೇ.3%ರಷ್ಟು ವಿಕಲಚೇತನರ ವೈದ್ಯಕೀಯ, ಶೈಕ್ಷಣಿಕ, ಆರ್ಥಿಕ ಪುರ್ನವಸತಿ ಕಾರ್ಯಕ್ರಮಗಳಿಗೆ ಅನುದಾನ ಮೀಸಲಿಡಲು ಕಾನೂನಿನಲ್ಲಿ ಅವಕಾಶವಿದೆ. ಸಂಬಂಧಿಸಿದ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಈ ಸೌಲಭ್ಯಗಳ ಬಗ್ಗೆ ವಿಕಲಚೇತನರಿಗೆ ಮಾಹಿತಿ ನೀಡಬೇಕೆಂದರು.

ಅಂಗವಿಕಲತೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಹೆಚ್ಚಿನ ಅರಿವುಮೂಡಿಸಬೇಕು ಎಂದ ಅವರು, ವಿಕಲಚೇತನರಿಗೆ ಆತ್ಮಸ್ಥೈರ್ಯ ಮೂಡಿಸಲು ಕಚೇರಿಗಳಲ್ಲಿ ವಿಕಲಚೇತನ ಸ್ನೇಹಿ ವಾತಾವರಣ ಕಲ್ಪಿಸಬೇಕು. ವಿಕಲಚೇತನರಿಗೆ ತರಬೇತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರ ಮೂಲಕ ಭವಿಷ್ಯದಲ್ಲಿ ಸ್ವಂತ ಉದ್ಯೋಗ ಕೈಗೊಂಡು ಸ್ವಾವಲಂಬಿಗಳನ್ನಾಗಿಸುವುದರ ಜೊತೆಗೆ ಆರ್ಥಿಕವಾಗಿ ಸಬಲರನ್ನಾಗಿಸಬೇಕು ಎಂದರು.

ಸಭೆಯಲ್ಲಿ ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರದ ಕಾರ್ಯದರ್ಶಿ ಪ್ರಕಾಶ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಬಸವರಾಜಯ್ಯ, ಡಿಎಚ್‍ಒ ಡಾ.ಮಲ್ಲಿಕಾರ್ಜುನಪ್ಪ, ಸದಸ್ಯರಾದ ಶಾಹಿದಬಾನು, ಸೋಮಶೇಖರ್ ಸೇರಿದಂತೆ ಮತ್ತಿತರ ಅಧಿಕಾರಿಗಳು, ಸ್ವಯಂಸೇವಕರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X