Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸಾರ್ವತ್ರಿಕ ಮುಷ್ಕರ: ಜೆಸಿಟಿಯು...

ಸಾರ್ವತ್ರಿಕ ಮುಷ್ಕರ: ಜೆಸಿಟಿಯು ನೇತೃತ್ವದಲ್ಲಿ ಕಾರ್ಮಿಕರ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ8 Jan 2019 1:48 PM IST
share
ಸಾರ್ವತ್ರಿಕ ಮುಷ್ಕರ: ಜೆಸಿಟಿಯು ನೇತೃತ್ವದಲ್ಲಿ ಕಾರ್ಮಿಕರ ಪ್ರತಿಭಟನೆ

ಉಡುಪಿ, ಡಿ.8: ಸರಕಾರದ ಜನವಿರೋಧಿ ನೀತಿಯನ್ನು ವಿರೋಧಿಸಿ ಹಾಗೂ ಕಾರ್ಮಿಕರ 12 ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಇಂದು ನಡೆದ ಸಾರ್ವತ್ರಿಕ ಮುಷ್ಕರದ ಅಂಗವಾಗಿ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ (ಜೆಸಿಟಿಯು) ಉಡುಪಿ ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ಉಡುಪಿಯಲ್ಲಿ ಪ್ರತಿಭಟನಾ ಮೆರವಣಿಗೆಯನ್ನು ಹಮ್ಮಿಕೊಳ್ಳಲಾಗಿತ್ತು.

ಅಜ್ಜರಕಾಡಿನ ಎಲ್‌ಐಸಿ ಕಚೇರಿಯ ಆವರಣದಿಂದ ಹೊರಟ ಕಾರ್ಮಿಕರ ಬೃಹತ್ ಮೆರವಣಿಗೆಯು ಜೋಡುಕಟ್ಟೆ, ಕೆ.ಎಂ.ಮಾರ್ಗ ಮೂಲಕ ಸರ್ವಿಸ್ ಬಸ್ ನಿಲ್ದಾಣದ ಮಹಾತ್ಮ ಗಾಂಧಿ ಪ್ರತಿಮೆ ಸುತ್ತುವರಿದು ಬಿಎಸ್‌ಎನ್‌ಎಲ್ ಕಚೇರಿ ರಸ್ತೆಯಾಗಿ ಕಾರ್ಪೋರೇಶನ್ ಬ್ಯಾಂಕಿನ ಕಚೇರಿ ಆವರಣದಲ್ಲಿ ಸಮಾ ಪನಗೊಂಡಿತು.

ಬಳಿಕ ನಡೆದ ಪ್ರತಿಭಟನಾ ಸಭೆಯನ್ನುದ್ದೇಶಿಸಿ ಮಾತನಾಡಿದ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ಜಿಲ್ಲಾ ಸಂಚಾಲಕ ಕೆ.ಶಂಕರ್, ಕೇಂದ್ರ ಸರಕಾರಕ್ಕೆ ಜನರ ಬೇಡಿಕೆ, ಮಹತ್ವ, ಸಮಸ್ಯೆಗಳ ಬಗ್ಗೆ ಅರಿವು ಮೂಡಿಲ್ಲ. ಅವರಿಗೆ ಅರಿವು ಮೂಡಿಸುವ ಕೆಲಸ ಈ ರೀತಿಯ ಹೋರಾಟದಿಂದ ಮಾಡಬೇಕಾಗಿದೆ. ಕೇಂದ್ರದ ಕಾರ್ಮಿಕ ಸಂಘಟನೆಗಳ ಬೆಂಬಲದಿಂದ ಈ ಹೋರಾಟ ಯಶಸ್ವಿಯಾಗಿದ್ದು, ನಾಳಿನ ಹೋರಾಟ ಕೂ ಯಶಸ್ವಿ ಮಾಡಬೇಕಾಗಿದೆ ಎಂದರು.

ದೇಶದಲ್ಲಿ ಜೀವಾನಂಶ ವಸ್ತುಗಳ ಬೆಲೆ ಏರಿಕೆಯಾಗುತ್ತಿದೆ. ಅದನ್ನು ನಿಯಂತ್ರಿಸುವಲ್ಲಿ ಕೇಂದ್ರ ಹಾಗೂ ರಾಜ್ಯ ಸರಕಾರಗಳು ವಿಫಲವಾಗಿದೆ. ಇದರಿಂದ ಜನಸಾಮಾನ್ಯರು, ಬಡವರು, ಕೃಷಿಕೂಲಿಕಾರರು ತೀರಾ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಜೀವನ ನಡೆಸುವುದು ಕಷ್ಟ ಎಂಬತಾಗಿದೆ. ರೈತರು ಬೆಳೆಗೆ ಬೆಲೆ ಇಲ್ಲದೆ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ ಎಂದು ಅವರು ಆರೋಪಿಸಿದರು.

ಜೆಸಿಟಿಯು ಸಂಚಾಲಕ ಅದಮಾರು ಶ್ರೀಪತಿ ಆಚಾರ್ಯ, ಸಿಐಟಿಯು ಜಿಲ್ಲಾಧ್ಯಕ್ಷ ವಿಶ್ವನಾಥ್ ರೈ, ಎಐಟಿಯುಸಿಯ ಕೆ.ವಿ.ಭಟ್, ಐಎನ್‌ಟಿಯುಸಿಯ ಗಣೇಶ್ ಕೋಟ್ಯಾನ್, ಎಐಬಿಇಎಯ ರಾಮ್ ಮೋಹನ್, ಬಿಎಸ್ಸೆಎನ್ನೆಲ್ ನೌಕರರ ಯೂನಿಯನ್‌ನ ಶಶಿಧರ ಗೊಲ್ಲ, ಬಿಇಎಫ್‌ಐಯ ರವೀಂದ್ರ ಎ., ಎಐಐಇಎಯ ಪ್ರಭಾಕರ ಬಿ.ಕುಂದರ್, ಸಿಐಟಿಯು ಮುಖಂಡ ಬಾಲಕೃಷ್ಣ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X