Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಜ.12: ಸ್ಥಾಯಿ ಸಮಿತಿಗೆ ಕರಡು ಸಲ್ಲಿಕೆ;...

ಜ.12: ಸ್ಥಾಯಿ ಸಮಿತಿಗೆ ಕರಡು ಸಲ್ಲಿಕೆ; ಫೆಬ್ರವರಿಯಲ್ಲಿ ಬಜೆಟ್ ಮಂಡಿಸುವ ಸಾಧ್ಯತೆ

ವಾರ್ತಾಭಾರತಿವಾರ್ತಾಭಾರತಿ8 Jan 2019 8:18 PM IST
share

ಬೆಂಗಳೂರು, ಜ. 8: ಬಿಬಿಎಂಪಿಯ 2019-20 ನೆ ಸಾಲಿನ ಆಯವ್ಯಯ ಕರಡು ಪ್ರತಿಯನ್ನು ನಾಳೆ ಪಾಲಿಕೆಯ ಆಯುಕ್ತರಿಗೆ ಸಲ್ಲಿಸುವ ಸಾಧ್ಯತೆಯಿದ್ದು, ಜ.12 ಕ್ಕೆ ತೆರಿಗೆ ಮತ್ತು ಆರ್ಥಿಕ ಸ್ಥಾಯಿ ಸಮಿತಿಗೆ ಕರಡು ಸಲ್ಲಿಕೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಅಧಿಕಾರಿಗಳು ನೀಡುವ ಮಾಹಿತಿಯನ್ನಾಧರಿಸಿ ಆಯವ್ಯಯ ಕೋಶವು 2019-20ನೇ ಸಾಲಿನಲ್ಲಿ ಮಾಡಬೇಕಾದ ಹೊಸ ಯೋಜನೆಗಳು, ಅದಕ್ಕೆ ತಗಲುವ ವೆಚ್ಚ, ಬಿಬಿಎಂಪಿಗೆ ಯಾವೆಲ್ಲ ಸಂಪನ್ಮೂಲಗಳಿಂದ ಎಷ್ಟು ಆದಾಯ ಬರಲಿದೆ ಎಂಬೆಲ್ಲ ಮಾಹಿತಿ ಇರುವ ಕರಡು ಆಯವ್ಯಯವನ್ನು ಸಿದ್ಧಪಡಿಸಿ ಆಯುಕ್ತರಿಗೆ ಸಲ್ಲಿಸುತ್ತದೆ. ಕೋಶ ಸಲ್ಲಿಸಿದ ಕರಡು ಆಯವ್ಯಯವನ್ನು ಆಯುಕ್ತರು ಆದಾಯಕ್ಕೆ ತಕ್ಕ ರೀತಿ ಬದಲಾವಣೆ ಮಾಡಿ ತೆರಿಗೆ ಮತ್ತು ಆರ್ಥಿಕ ಸ್ಥಾಯಿ ಸಮಿತಿಗೆ ಸಲ್ಲಿಸಲಿದ್ದಾರೆ.

ಕೇಂದ್ರ ಮತ್ತು ರಾಜ್ಯ ಬಜೆಟ್ ಮಂಡನೆ ನಂತರ ಮಂಡಿಸಲಾಗುವ ಬಿಬಿಎಂಪಿ ಆಯವ್ಯಯ ಸಿದ್ಧಪಡಿಸಲು ಅಧಿಕಾರಿಗಳು ಮುಂದಾಗಿದ್ದಾರೆ. 2018-19ನೇ ಸಾಲಿನ ಬಜೆಟ್‌ನಲ್ಲಿ ಉಳಿದ ಅನುದಾನ, 2019-20ನೇ ಸಾಲಿಗೆ ಬೇಕಾಗುವ ಅನುದಾನಗಳ ಕುರಿತು ಪ್ರತಿ ವಿಭಾಗಗಳಿಂದ ಮಾಹಿತಿ ಸಂಗ್ರಹಿಸಿದ್ದಾರೆ ಎಂದು ತಿಳಿದುಬಂದಿದೆ.

ಪಾಲಿಕೆಯು ತನ್ನ ವಾರ್ಷಿಕ ಆಯವ್ಯಯದ ಸಿದ್ಧತೆಗಳನ್ನು ಜನವರಿಯಲ್ಲಿ ಆರಂಭಿಸುತ್ತಾರೆ. ಆದರೆ, ಈ ಬಾರಿ ಲೋಕಸಭೆ ಚುನಾವಣಾ ನೀತಿ ಸಂಹಿತೆ ಜಾರಿಯಾಗುತ್ತಿರುವುದರಿಂದ ತ್ವರಿತವಾಗಿ ಬಜೆಟ್ ಮಂಡನೆಗೆ ಚಿಂತನೆ ನಡೆಸಲಾಗಿದೆ.

ಈ ಸಂಬಂಧ 2018 ಡಿಸೆಂಬರ್‌ನಲ್ಲಿಯೇ ಮುಖ್ಯ ಲೆಕ್ಕಾಧಿಕಾರಿಗಳು ಪಾಲಿಕೆಯ ಎಲ್ಲ ವಿಭಾಗಗಳಿಗೂ ಮುಂದಿನ ಬಜೆಟ್‌ನಲ್ಲಿ ಮಾಡುವ ಖರ್ಚು, ಅನುಷ್ಠಾನಗೊಳಿಸುವ ಹೊಸ ಯೋಜನೆಗಳಿಗೆ ಸಂಬಂಧಿಸಿದಂತೆ ಮಾಹಿತಿ ನೀಡುವಂತೆ ಸೂಚನೆ ನೀಡಿದ್ದಾರೆ.

ಫೆಬ್ರವರಿಯಲ್ಲಿ ಬಜೆಟ್ ಮಂಡನೆ:

ಬಿಬಿಎಂಪಿಯು ಕೇಂದ್ರ ಮತ್ತು ರಾಜ್ಯ ಸರಕಾರಗಳು ಆಯವ್ಯಯ ಮಂಡಿಸಿದ ಬಳಿಕ ತನ್ನ ಬಜೆಟ್ ಮಂಡನೆ ಮಾಡುವುದು ವಾಡಿಕೆ. ಅದರ ಪ್ರಕಾರ ಫೆ. 8 ರಂದು ರಾಜ್ಯ ಬಜೆಟ್ ಮಂಡನೆಯಾಗುವ ಸಾಧ್ಯತೆ ಇದ್ದು, ಫೆಬ್ರವರಿ 2ನೇ ವಾರದಲ್ಲಿ ಬಿಬಿಎಂಪಿ ಬಜೆಟ್ ಮಂಡನೆಗೆ ಸಿದ್ಧತೆ ಮಾಡಿಕೊಂಡಿದೆ ಎನ್ನಲಾಗಿದೆ.

ಯಾವೆಲ್ಲ ಅಂಶಗಳ ಬಗ್ಗೆ ಮಾಹಿತಿ?: ಆಯುಕ್ತರು ನೀಡಿರುವ ಆದೇಶದಂತೆ ಬಿಬಿಎಂಪಿ ಪ್ರತಿ ವಿಭಾಗಗಳು, ವಲಯವಾರು ಅಧಿಕಾರಿಗಳು ಹೊಸ ಕಾಮಗಾರಿಗಳ ಕುರಿತು ಮಾಹಿತಿ ನೀಡಬೇಕಿದೆ. ಆಡಳಿತಾತ್ಮಕ ವೆಚ್ಚಗಳಾದ ವೇತನ, ಪಿಂಚಣಿ, ಭತ್ತೆ ಸೇರಿ ಇನ್ನಿತರ ವಿಷಯಗಳಿಗೆ ಎಷ್ಟು ಅನುದಾನ ಮೀಸಲಿಡಬೇಕು, ಸಾರ್ವಜನಿಕರಿಗೆ ಅನುಕೂಲವಾಗುವ ಕಾಮಗಾರಿಗಳು, ತ್ಯಾಜ್ಯ ನಿರ್ವಹಣೆ, ಕಲ್ಯಾಣ ಕಾರ್ಯಕ್ರಮ, ಶಿಕ್ಷಣ, ಆರೊಗ್ಯ ಸಂಬಂಧಿ ಯೊಜನೆಗಳ ಬಗ್ಗೆ ಮಾಹಿತಿ ನೀಡಲಾಗುತ್ತದೆ.

ಸ್ಥಾಯಿ ಸಮಿತಿಯೇ ಇಲ್ಲ: ಅಧಿಕಾರಿಗಳ ಜತೆಗೆ ಚರ್ಚಿಸಿ ತೆರಿಗೆ ಮತ್ತು ಆರ್ಥಿಕ ಸ್ಥಾಯಿ ಸಮಿತಿ ಬಜೆಟ್ ಪ್ರತಿ ಸಿದ್ಧಪಡಿಸಲಾಗುತ್ತಿದೆ. ಆದರೆ, ಸ್ಥಾಯಿ ಸಮಿತಿಗಳಿಗೆ ಸದಸ್ಯರು ನೇಮಕವಾಗಿದ್ದರೂ ಅಧ್ಯಕ್ಷರು ನೇಮಕವಾಗಿಲ್ಲ. ಹೀಗಾಗಿ, ಅಧ್ಯಕ್ಷರು ಆಯ್ಕೆಯಾಗದಿದ್ದಲ್ಲಿ ಬಜೆಟ್ ಸಿದ್ಧಪಡಿಸುವ ಹೊಣೆ ಹಾಗೂ ಅದನ್ನು ಮಂಡಿಸುವ ಹೊಣೆಯೂ ಮೇಯರ್ ಹಾಗೂ ಆಯುಕ್ತರು ಹೊರಬೇಕಾಗುತ್ತದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X