Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಪ್ರಧಾನಿ ಮೋದಿಗೆ ‘ಸುಪ್ರೀಂ’ ಕಪಾಳ...

ಪ್ರಧಾನಿ ಮೋದಿಗೆ ‘ಸುಪ್ರೀಂ’ ಕಪಾಳ ಮೋಕ್ಷ: ಕೆ.ಸಿ.ವೇಣುಗೋಪಾಲ್

ಸಿಬಿಐ ಮುಖ್ಯಸ್ಥರಾಗಿ ಮತ್ತೆ ಅಲೋಕ್ ವರ್ಮ

ವಾರ್ತಾಭಾರತಿವಾರ್ತಾಭಾರತಿ8 Jan 2019 8:57 PM IST
share
ಪ್ರಧಾನಿ ಮೋದಿಗೆ ‘ಸುಪ್ರೀಂ’ ಕಪಾಳ ಮೋಕ್ಷ: ಕೆ.ಸಿ.ವೇಣುಗೋಪಾಲ್

ಬೆಂಗಳೂರು, ಜ.8: ಸಿಬಿಐ ಮುಖ್ಯಸ್ಥರನ್ನು ರಾತ್ರೋರಾತ್ರಿ ವಜಾಗೊಳಿಸಿದ್ದ ಕೇಂದ್ರ ಸರಕಾರದ ತೀರ್ಮಾನವನ್ನು ರದ್ದುಗೊಳಿಸುವ ಮೂಲಕ ಸುಪ್ರೀಂಕೋರ್ಟ್, ಪ್ರಧಾನಿ ನರೇಂದ್ರಮೋದಿಯ ಮುಖಕ್ಕೆ ನೇರವಾಗಿ ಕಪಾಳ ಮೋಕ್ಷ ಮಾಡಿದೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಹೇಳಿದರು.

ಮಂಗಳವಾರ ನಗರದ ಗುರುನಾನಕ್ ಭವನದಲ್ಲಿ ಆಯೋಜಿಸಲಾಗಿದ್ದ ಕೆಪಿಸಿಸಿ ಪದಾಧಿಕಾರಿಗಳು ಹಾಗೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಸಭೆಯ ಬಳಿಕ ಕೆಪಿಸಿಸಿ ಕಚೇರಿಯಲ್ಲಿ ಅವರು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು.

ರಫೇಲ್ ಯುದ್ಧ ವಿಮಾನ ಖರೀದಿ ಒಪ್ಪಂದದ ಕುರಿತು ನಾವು ಕಳೆದ ಮೂರು ದಿನಗಳಿಂದ ಲೋಕಸಭೆಯಲ್ಲಿ ಚರ್ಚೆ ಮಾಡುತ್ತಿದ್ದೇವೆ. ಎಐಸಿಸಿ ಅಧ್ಯಕ್ಷ ರಾಹುಲ್‌ಗಾಂಧಿ, ಸದನದಲ್ಲಿ ಕೇಳಿರುವ ಯಾವ ಪ್ರಶ್ನೆಗೂ ಕೇಂದ್ರ ಸರಕಾರಕ್ಕೆ ಉತ್ತರಿಸಲು ಸಾಧ್ಯವಾಗಿಲ್ಲ ಎಂದು ಅವರು ತಿಳಿಸಿದರು.

ಎಚ್‌ಎಎಲ್ ಸಂಸ್ಥೆಗೆ ಒಂದು ಲಕ್ಷ ಕೋಟಿ ರೂ.ಗಳನ್ನು ನೀಡಿರುವುದಾಗಿ ರಕ್ಷಣಾ ಸಚಿವೆ ಸಂಸತ್ತಿನಲ್ಲಿ ಹೇಳಿಕೆ ನೀಡುತ್ತಾರೆ. ಆನಂತರ, ಒಂದು ಲಕ್ಷ ಕೋಟಿ ರೂ.ಅಲ್ಲ, 26 ಸಾವಿರ ಕೋಟಿ ರೂ.ನೀಡಿರುವುದಾಗಿ ಹೇಳುತ್ತಾರೆ. ಜನರನ್ನು ದಿಕ್ಕು ತಪ್ಪಿಸಲು ಇಂತಹ ಹೇಳಿಕೆಗಳನ್ನು ನೀಡಲಾಗುತ್ತಿದೆ ಎಂದು ವೇಣುಗೋಪಾಲ್ ಹೇಳಿದರು.

ಕಳೆದ ಎರಡು ದಶಕಗಳಲ್ಲಿ ಮೊಟ್ಟಮೊದಲ ಬಾರಿಗೆ ಸಾಲ ಪಡೆದು ಸಿಬ್ಬಂದಿಗೆ ಸಂಬಳ ನೀಡುವ ಪರಿಸ್ಥಿತಿ ಬಂದಿದೆ ಎಂದು ಎಚ್‌ಎಎಲ್ ಅಧ್ಯಕ್ಷರು ಸಾರ್ವಜನಿಕವಾಗಿ ನೀಡಿರುವ ಹೇಳಿಕೆ ಎಲ್ಲರಿಗೂ ಗೊತ್ತಿದೆ. ಎಚ್‌ಎಎಲ್ ಬಳಿಯಿದ್ದ 7 ಸಾವಿರ ಕೋಟಿ ರೂ.ಗಳ ಆವರ್ತನಿಧಿಯನ್ನು ಕೇಂದ್ರ ಸರಕಾರ ಪಡೆದುಕೊಂಡಿದೆ. ರಫೇಲ್ ಒಪ್ಪಂದವು ಭ್ರಷ್ಟಾಚಾರದ ಸ್ಪಷ್ಟ ಪ್ರಕರಣವಾಗಿದೆ ಎಂದು ಅವರು ದೂರಿದರು.

ರಫೇಲ್ ಒಪ್ಪಂದದ ಕುರಿತು ನಾವು ಜಂಟಿ ಸಂಸದೀಯ ಸಮಿತಿ ತನಿಖೆಗೆ ಆಗ್ರಹಿಸುತ್ತಿದ್ದೇವೆ. ಆದರೆ, ಲೋಕಸಭೆಯಲ್ಲಿ ಸ್ಪಷ್ಟ ಬಹುಮತ ಹೊಂದಿರುವ ಬಿಜೆಪಿ ಹಿಂದೇಟು ಹಾಕುತ್ತಿರುವುದೇಕೆ ? ಬಹುಷಃ ಸತ್ಯ ಹೊರಗೆ ಬರುತ್ತದೆ ಎಂಬುದು ಅವರನ್ನು ಕಾಡುತ್ತಿರಬೇಕು ಎಂದು ವೇಣುಗೋಪಾಲ್ ಹೇಳಿದರು.

ತನ್ನನ್ನು ಚೌಕಿದಾರ್ ಎನ್ನುತ್ತಿದ್ದ ಪ್ರಧಾನಿಯ ಪಾರದರ್ಶಕತೆ ಬಗ್ಗೆ ಜನ ಪ್ರಶ್ನಿಸುತ್ತಿದ್ದಾರೆ. ಎಚ್‌ಎಎಲ್ ಅನ್ನು ನಿರ್ಲಕ್ಷಿಸುವ ಮೂಲಕ ಕೇಂದ್ರ ಸರಕಾರವು ಕರ್ನಾಟಕದ ಗೌರವಕ್ಕೆ ಧಕ್ಕೆ ತಂದಿದೆ. ಈ ವಿಷಯವನ್ನು ಕಾಂಗ್ರೆಸ್ ಸುಮ್ಮನೆ ಬಿಡುವುದಿಲ್ಲ. ಮುಂದಿನ ಚುನಾವಣೆಯಲ್ಲಿ ಇದು ಪ್ರಮುಖ ಪ್ರಚಾರ ವಿಷಯವಾಗಿರಲಿದೆ ಎಂದು ಅವರು ಹೇಳಿದರು.

ನಾವು ಜನರ ಮುಂದೆ ಈ ವಿಷಯವನ್ನು ತೆಗೆದುಕೊಂಡು ಹೋಗುತ್ತೇವೆ. ವಾಸ್ತವ ಪರಿಸ್ಥಿತಿಯನ್ನು ವಿವರಿಸುತ್ತೇವೆ. ಕೇಂದ್ರ ಸರಕಾರದ ಬಳಿ ರಫೇಲ್ ಕುರಿತು ಎಲ್ಲ ಅಂಕಿ ಅಂಶಗಳು ಇದ್ದರೆ ಯಾಕೆ ಭಯ ಪಡುತ್ತಿದ್ದಾರೆ. ಬೋಫೋರ್ಸ್, 2 ಜಿ ತರಂಗಾಂತರ ಹಂಚಿಕೆಯ ಕುರಿತು ಜಂಟಿ ಸಂಸದೀಯ ಸಮಿತಿಯಿಂದ ತನಿಖೆಯಾಗಿದೆ ತಾನೇ ಎಂದು ವೇಣುಗೋಪಾಲ್ ಪ್ರಶ್ನಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X